spot_img
Sunday, April 19, 2026
spot_img

ಜ.2ಕ್ಕೆ ಕೆಪಿ‌ಎಸ್ ವಂಡ್ಸೆ-ನೆಂಪು ಹಳೆ ವಿದ್ಯಾರ್ಥಿಗಳ ‘ವಜ್ರ ಸಂಗಮ’

ಕುಂದಾಪುರ: ಹಳೆ ವಿದ್ಯಾರ್ಥಿ ಸಂಘ, ಕರ್ನಾಟಕ ಪಬ್ಲಿಕ್ ಸ್ಕೂಲ್ ವಂಡ್ಸೆ-ನೆಂಪು ಇದರ ಹಳೆ ವಿದ್ಯಾರ್ಥಿಗಳ ವಜ್ರ ಸಂಗಮ ಕಾರ್ಯಕ್ರಮ ಜನವರಿ 2-2023ನೇ ಸೋಮವಾರ ಸಂಜೆ 6.30ಕ್ಕೆ ನಡೆಯಲಿದೆ.

‘ವಜ್ರ ಸಂಗಮ’ದ ಅಂಗವಾಗಿ ಸ್ವಾಗತ ಕಮಾನು ಉದ್ಘಾಟನೆ, ಬಸ್ ನಿಲ್ದಾಣ ಉದ್ಘಾಟನೆ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಕೆ.ನಾರಾಯಣ ಶೆಟ್ಟಿ ಕೆಂಚನೂರು ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಉದ್ಘಾಟನೆ ನೆರವೇರಿಸಲಿದ್ದಾರೆ.

ನಿವೃತ್ತ ಅಧಿಕಾರಿ, ಪ್ರಥಮ ಬ್ಯಾಚಿನ ವಿದ್ಯಾರ್ಥಿ ರಾಜಗೋಪಾಲ ಶೆಟ್ಟಿ ಕೂಕನಾಡು, ಬಿ.ಎನ್.ಶೆಟ್ಟಿ ಬಗ್ವಾಡಿ, ಐ‌ಎಫ್‌ಎಸ್ ಅಧಿಕಾರಿ ನಾಗೇಶ ಪ್ರಭು ಚಿತ್ತೂರು, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದ್ಯಮಿ ಕೃಷ್ಣಮೂರ್ತಿ ಮಂಜರು ಮಾರಣಕಟ್ಟೆ, ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಕೊಲ್ಲೂರು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ, ಉದ್ಯಮಿ ಎನ್.ಆನಂದ ಶೆಟ್ಟಿ ಸಬ್ಲಾಡಿ, ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತರಾದ ಶಾಂತರಾಮ್ ಶೆಟ್ಟಿ ಸಿ‌ಎ., ಯೋಗಗುರು ಭರತ್ ಶೆಟ್ಟಿ ಹಂದಕುಂದ, ಉದ್ಯಮಿ ಗೋವಿಂದ ಬಾಬು ಪೂಜಾರಿ, ಸಂಸ್ಥೆಯ ಪ್ರಾಂಶುಪಾಲರಾದ ರಾಜೀವ, ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಸದಾನಂದ ಶೆಟ್ಟಿ, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯರಾದ ಕುಪ್ಪಯ್ಯ ಮರಾಠಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ನಿವೃತ್ತ ಪ್ರಾಂಶುಪಾಲರಾದ ವಿದ್ವಾನ್ ವಾಮನ ಭಟ್, ನಿವೃತ್ತ ಉಪನ್ಯಾಸಕ ತೋಟಬೈಲು ನಾರಾಯಣ ಶೆಟ್ಟಿ, ನಿವೃತ್ತ ಅಧ್ಯಾಪಕರಾದ ಮಾಣಿಬೈಲು ಶಂಕರ್ ಶೆಟ್ಟಿ, ಬಸ್ ನಿಲ್ದಾಣದ ಕೊಡುಗೆ ನೀಡಿರುವ ಶ್ರೀಮತಿ ಶಾಂಭವಿ ಭಾಸ್ಕರ್ ಶೆಟ್ಟಿ ಹರವರಿ ವಂಡ್ಸೆ ಇವರುಗಳನ್ನು ಸನ್ಮಾನಿಸಲಾಗುವುದು.

ಸಂಜೆ 6.30ರಿಂದ ಸ್ಥಳೀಯ ಪ್ರತಿಭೆಗಳಿಂದ ನೃತ್ಯ ಸಿಂಚನ, ರಾತ್ರಿ 9ರಿಂದ ರಾಜ್ಯ ಪ್ರಶಸ್ತಿ ವಿಜೇತ ಮಿರಾಕಲ್ ಡಾನ್ಸ್ ಅಕಾಡೆಮಿ ಬಾಳಿಕೆರೆ ಇವರಿಂದ ನೃತ್ಯ ವೈಭವ, ರಾತ್ರಿ 10 ಗಂಟೆಯಿಂದ ಕಲಾಶಕ್ತಿ ಕಲಾತಂಡ ಕನ್ನುಕೆರೆ ತೆಕ್ಕಟ್ಟೆ ಇವರಿಂದ ನಾಟಕ ಆಟಗಾರ ಪ್ರದರ್ಶನಗೊಳ್ಳಲಿದೆ ಎಂದು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ ನೆಂಪು, ಕಾರ್ಯದರ್ಶಿ ರವಿರಾಜ ಶೆಟ್ಟಿ ಚಿತ್ತೂರು ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!