spot_img
Saturday, April 18, 2026
spot_img

ಅಮೃತ ಭಾರತಿ ವಿದ್ಯಾ ಕೇಂದ್ರದಲ್ಲಿ ಸ್ವಾಮಿ ವಿವೇಕಾನಂದರ 160ನೇ ಜನ್ಮದಿನಾಚರಣೆ

ಹೆಬ್ರಿ: ಅಮೃತ ಭಾರತಿ ವಿದ್ಯಾ ಕೇಂದ್ರದಲ್ಲಿ ಸ್ವಾಮಿ ವಿವೇಕಾನಂದರ 160ನೇ ಜನ್ಮದಿನವನ್ನು (ರಾಷ್ಟ್ರೀಯ ಯುವಕರ ದಿನ) ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಎಚ್.ಗುರುದಾಸ್ ಶೆಣೈ ವಹಿಸಿದರು. ಮುಖ್ಯ ಅತಿಥಿಗಳಾಗಿ ಎಚ್.ಸುಧೀರ್ ನಾಯಕ್ ರವರು ಭಾಗವಹಿಸಿ ವಿದ್ಯಾರ್ಥಿಗಳಿಗೆ ವಿವೇಕಾನಂದರ ಜೀವನ ಮತ್ತು ಸಾಧನೆಯ ಬಗ್ಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಅರುಣ್ ಹಾಗೂ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಅನಿತಾ ಉಪಸ್ಥಿತರಿದ್ದರು.

ವಿವೇಕ ಜಯಂತಿಯ ಅಂಗವಾಗಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿದ್ದು ವಿಜೇತ ವಿದ್ಯಾರ್ಥಿಗಳನ್ನು ವಿವೇಕಾನಂದರ ಸ್ಮರಣಿಕೆಯನ್ನು ನೀಡಿ ಅಭಿನಂದಿಸಲಾಯಿತು.

ವಿದ್ಯಾರ್ಥಿನಿ ಸಾನ್ವಿ ಕೆ ಕಾರ್ಯಕ್ರಮವನ್ನು ನಿರ್ವಹಿಸಿದರು. ವಿದ್ಯಾರ್ಥಿಗಳಾದ ಅನನ್ಯ ಸಿ ಕೆ ಸ್ವಾಗತಿಸಿ, ಭುವನ್ ಮತ್ತು ಉನ್ನತಿ ವಿಜೇತರ ಪಟ್ಟಿ ವಾಚಿಸಿದರು. ವಿದ್ಯಾರ್ಥಿ ಅಭಯ್ ಸ್ವಾಮಿ ವಿವೇಕಾನಂದರಂತೆ ದಿರಿಸನ್ನು ಧರಿಸಿ ಅಮೇರಿಕಾದ ಚಿಕಾಗೋ ಭಾಷಣದ ಅನುಕರಣೆ ಮಾಡಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!