spot_img
Saturday, April 18, 2026
spot_img

ಗಂಗೊಳ್ಳಿ ಖಾರ್ವಿಕೇರಿ ಶ್ರೀ ಮಹಾಂಕಾಳಿ ಅಮ್ಮನವರ ದೇವಸ್ಥಾನ ನವೀಕೃತ ಶಿಲಾದೇಗುಲದ ಲೋಕಾರ್ಪಣೆಗೆ ಸನ್ನದ್ದ

ಗಂಗೊಳ್ಳಿ : ಗಂಗೊಳ್ಳಿ ಖಾರ್ವಿಕೇರಿಯ ಶ್ರೀ ಮಹಾಂಕಾಳಿ ಅಮ್ಮನವರ ದೇವಸ್ಥಾನದ ನವೀಕೃತ ಶಿಲಾದೇಗುಲದ ಲೋಕಾರ್ಪಣೆ, ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಸಮಾರಂಭ ಜ.20ರಿಂದ ಜ.28ರವರೆಗೆ ನಡೆಯಲಿದೆ.

ದಕ್ಷಿಣಾಮ್ನಾಯ ಶ್ರೀ ಶೃಂಗೇರಿ ಶಾರದಾ ಪೀಠಾಧೀಶ್ವರ ಶ್ರೀ ಭಾರತೀ ತೀರ್ಥ ಸ್ವಾಮೀಜಿ ಹಾಗೂ ಶ್ರೀ ವಿಧುಶೇಖರ ಭಾರತೀ ತೀರ್ಥ ಸ್ವಾಮೀಜಿಯವರ ಅನುಗ್ರಹದಿಂದ ಗಂಗೊಳ್ಳಿ ಖಾರ್ವಿಕೇರಿಯ ಶ್ರೀ ಮಹಾಂಕಾಳಿ ಅಮ್ಮನವರ ಹಾಗೂ ಪರಿವಾರ ಸಾನ್ನಿಧ್ಯಗಳ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಜ.26ರಂದು ಬೆಳಿಗ್ಗೆ 10.05ಕ್ಕೆ ನಡೆಯುವ ಮೀನ ಲಗ್ನ ಸುಮೂರ್ಹತದಲ್ಲಿ ಆಗಮೋಕ್ತ ವಿಧಿವಿಧಾನಗಳ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಕೊರಂಗ್ರಪಾಡಿ ಕೆ.ಸಿ.ಕುಮಾರಗುರು ತಂತ್ರಿಗಳ ನೇತೃತ್ವದಲ್ಲಿ ಜಿ.ಲಕ್ಷ್ಮೀನಾರಾಯಣ ಭಟ್ ಗಂಗೊಳ್ಳಿ ಇವರ ಉಪಸ್ಥಿತಿಯಲ್ಲಿ ನಡೆಯಲಿದೆ.

ಜ.೨೦ರಂದು ಬೆಳಿಗ್ಗೆ ತ್ರಾಸಿಯಿಂದ ಖಾರ್ವಿಕೇರಿ ಶ್ರೀ ಮಹಾಂಕಾಳಿ ದೇವಸ್ಥಾನದ ತನಕ ಹೊರೆಕಾಣಿಕೆ ಮೆರವಣಿಗೆ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ. ಜ.24ರಂದು ಬೆಳಿಗ್ಗೆ 9 ಗಂಟೆಗೆ ನೂತನ ವಿಗ್ರಹದ ಪುರ ಪ್ರವೇಶ ನಡೆಯಲಿದ್ದು, ವಿಗ್ರಹವನ್ನು ಗಂಗೊಳ್ಳಿಯ ಶ್ರೀ ರಾಮ ಮಂದಿರ ಬಳಿಯಿಂದ ಬಂದರು ಬಸ್ ನಿಲ್ದಾಣ ಮೂಲಕ ಮೆರವಣಿಗೆ ಮೂಲಕ ದೇವಸ್ಥಾನಕ್ಕೆ ತರಲಾಗುವುದು. ಬಳಿಕ ಸಾಮೂಹಿಕ ಪ್ರಾರ್ಥನೆ, ಉಗ್ರಾಣ ಮುಹೂರ್ತ, ಮಧ್ಯಾಹ್ನ ಅನ್ನಸಂತರ್ಪಣೆ, ಸಂಜೆ ವಿವಿಧ ಧಾರ್ಮಿಕ ಅನುಷ್ಠಾನಗಳು ನಡೆಯಲಿದೆ.

ಜ.26ರಂದು ಬೆಳಿಗ್ಗೆ 7 ಗಂಟೆಗೆ ಶಿಖರ ಪ್ರತಿಷ್ಠೆ, 10.05ಕ್ಕೆ ಉಪದೇವತಾ ಸಹಿತ ಶ್ರೀ ಮಹಾಂಕಾಳಿ ದೇವಿಯ ಬಿಂಬ ಪ್ರತಿಷ್ಠೆ, ಪ್ರಾಯಶ್ಚಿತ್ತ ಯಾಗಗಳು, ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ಕಲಶ ಮಂಡಲ ಪೂಜೆ, ಅಷ್ಟಾವಧಾನ ಸೇವೆ ಮತ್ತಿತರರ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ.

ಜ.27ರಂದು ಬೆಳಿಗ್ಗೆ 9ಗಂಟೆಗೆ ಉಡುಪಿಯ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರನ್ನು ಗಂಗೊಳ್ಳಿಯ ಶ್ರೀ ರಾಮ ಮಂದಿರದಿಂದ ದೇವಸ್ಥಾನದವರೆಗೆ ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಗುವುದು. ಬಳಿಕ ಶ್ರೀಗಳು ಧಾರ್ಮಿಕ ಪ್ರವಚನ ನೀಡಲಿದ್ದು ಬ್ರಹ್ಮಕಲಶಾಭಿಷೇಕ, ಮಹಾಪೂಜೆ, ಮಹಾ‌ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 4 ಗಂಟೆಯಿಂದ ನಡೆಯಲಿರುವ ಧಾರ್ಮಿಕ ಸಭಾಕಾರ್ಯಕ್ರಮದಲ್ಲಿ ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ, ಉದ್ಯಮಿ ಶೇಷಯ್ಯ ಕೊತ್ವಾಲ್ ಮತ್ತಿತರರು ಪಾಲ್ಗೊಳ್ಳಲಿದ್ದು, ಬಾಲವಾಗ್ಮಿ ಹಾರಿಕಾ ಮಂಜುನಾಥ ಶುಭಾಶಂಸನೆ ಮಾಡಲಿದ್ದಾರೆ.

ಜ.28ರಂದು ಬೆಳಿಗ್ಗೆ ಅಶ್ವಥ ನಾರಾಯಣ ಪೂಜೆ, ನವಚಂಡೀಯಾಗ, ಮಹಾಪೂರ್ಣಾಹುತಿ, ಅನ್ನಸಂತರ್ಪಣೆ ಮತ್ತಿತರ ಕಾರ್ಯಕ್ರಮಗಳು ನಡೆಯಲಿದ್ದು, ಸಂಜೆ 4 ಗಂಟೆಗೆ ನಡೆಯಲಿರುವ ಧಾರ್ಮಿಕ ಸಭಾಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿ.ಅಪ್ಪಣ್ಣ ಹೆಗ್ಡೆ ವಹಿಸಲಿದ್ದಾರೆ. ಸಂಸದ ಬಿ.ವೈ.ರಾಘವೇಂದ್ರ, ಗಂಗೊಳ್ಳಿ ಗ್ರಾಪಂ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಮೊದಲಾದವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!