Sunday, September 8, 2024

ಕೆಪಿಸಿಸಿ ಸದಸ್ಯತ್ವ ಸ್ಥಾನಕ್ಕೆ ಪ್ರತಾಪಚಂದ್ರ ಶೆಟ್ಟಿ ರಾಜೀನಾಮೆ: ಸೂಕ್ತ ನಿರ್ಧಾರ ಕೈಗೊಳ್ಳಲು ರಾಷ್ಟ್ರೀಯ ಕಾಂಗ್ರೆಸ್‌ಗೆ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಮನವಿ

ಕುಂದಾಪುರ: ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸಭಾಪತಿಯವರು ಹಾಗೂ ಪಕ್ಷದ ಹಿರಿಯ ನಾಯಕರೂ ಆದ ಕೆ ಪ್ರತಾಪಚಂದ್ರ ಶೆಟ್ಟಿರವರು ಕೆಪಿಸಿಸಿ ಸದಸ್ಯತ್ವ ಸ್ಥಾನಕ್ಕೆ ಪ್ರತಾಪಚಂದ್ರ ಶೆಟ್ಟಿ ರಾಜೀನಾಮೆ ನೀಡಿದ್ದು ಈ ಸಂದರ್ಭದಲ್ಲಿ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಮಧ್ಯ ಪ್ರವೇಶ ಮಾಡಿ ಸೂಕ್ತವಾದ ನಿರ್ಧಾರವನ್ನು ತಗೆದುಕೊಳ್ಳುವಂತೆ ಹೆಚ್. ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ ಮನವಿ ಮಾಡಿದ್ದಾರೆ.

ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮನವಿ ಮಾಡಿರುವ ಅವರು, ಯುವ ಕಾಂಗ್ರೆಸ್, ಬ್ಲಾಕ್ ಕಾಂಗ್ರೆಸ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಕೆಪಿಸಿಸಿ ಕಾರ್ಯದರ್ಶಿ ಹಾಗೂ ಉಪಾಧ್ಯಕ್ಷರು, ಎ‌ಐಸಿಸಿ ಸದಸ್ಯರು, ಹೀಗೆ ಪಕ್ಷದ ವಿವಿಧ ಸ್ಥರಗಳಲ್ಲಿ ಕೆಲಸ ಮಾಡಿ ಪಕ್ಷದ ನಿಷ್ಟಾವಂತ ಕಾರ್ಯಕರ್ತ ಮತ್ತು ನಾಯಕರಾಗಿ ಗುರುತಿಸಿಕೊಂಡು 4 ಬಾರಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿ, 3 ಬಾರಿ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರಾಗಿ ಹಾಗೂ ಸಭಾಪತಿಯಾಗಿ ಸೇವೆ ಸಲ್ಲಿಸಿರುವುದು ರಾಷ್ಟ್ರೀಯ ಕಾಂಗ್ರೆಸ್‌ಗೆ ತಿಳಿದಿದೆ.

ಕೆ ಪ್ರತಾಪಚಂದ್ರ ಶೆಟ್ಟಿಯವರು ತಮ್ಮ ರಾಜಕೀಯ ಜೀವನದಲ್ಲಿ ಸಜ್ಜನ, ಸಚ್ಚಾರಿತ್ರ್ಯ, ದಕ್ಷ , ಕಳಂಕರಹಿತ, ಶುದ್ದ ಹಸ್ತದ ರಾಜಕಾರಣಿಯಾಗಿ ತನ್ನ ಸುಧೀರ್ಘ ೪೦ ವರ್ಷದ ರಾಜಕೀಯ ಜೀವನದಲ್ಲಿ ಶಕ್ತಿ ಮೀರಿ ಪಕ್ಷಕ್ಕಾಗಿ ದುಡಿದು ತನ್ನ ಕೆಲಸದಿಂದ ಮತ್ತು ವ್ಯಕ್ತಿತ್ವದಿಂದ ಕಾಂಗ್ರೆಸ್ ಪಕ್ಷಕ್ಕೂ ಗೌರವ ಹೆಚ್ಚಾಗುವಂತೆ ಕಾರ್ಯನಿರ್ವಹಿಸಿದ್ದಾರೆ.

ತನ್ನ ನೇರನುಡಿ, ಸಾಮಾಜಿಕ ನ್ಯಾಯದ ಬದ್ದತೆ, ಸಚ್ಚಾರಿತ್ಯದ ಬದುಕಿನಿಂದ ಕೆ ಪ್ರತಾಪಚಂದ್ರ ಶೆಟ್ಟಿಯವರು ಉಡುಪಿ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಬಹಳಷ್ಟು ಜನ ಅನುಯಾಯಿಗಳನ್ನು ಹೊಂದಿದ್ದು, ತನ್ನನ್ನು ನಂಬಿದವರನ್ನು ಹಾಗೂ ಪಕ್ಷದ ನಿಷ್ಟಾವಂತ ಕಾರ್ಯಕರ್ತರನ್ನು ಎಂದಿಗೂ ಕೈಬಿಡದವರೆಂದು ಜನಜನಿತವಾಗಿರುತ್ತದೆ. ಜಿಲ್ಲೆಯ ಜ್ವಲಂತ ಸಮಸ್ಯೆಗಳ ಹೋರಾಟಕ್ಕೆ ಯಾವುದೇ ಮುಲಾಜಿಲ್ಲದೇ ಹೋರಾಟ ಮಾಡುವ ವ್ಯಕ್ತಿತ್ವ ಹೊಂದಿರುವುದರಿಂಧ ಜಿಲ್ಲೆಯಲ್ಲಿ ಜನಪ್ರಿಯ ಕಾಂಗ್ರೆಸ್ ನಾಯಕರಾಗಿ ಗುರುತಿಸಲ್ಪಟ್ಟವರು.

ಕೆ.ಪ್ರತಾಪಚಂದ್ರ ಶೆಟ್ಟಿಯವರು ಪ್ರಚಲಿತ ರಾಜಕೀಯ ವಿದ್ಯಮಾನಗಳ ಹಿನ್ನಲೆಯಲ್ಲಿ ಮತ್ತು ಪಕ್ಷದಲ್ಲಿ ಬೇರೆಯವರಿಗೆ ಅವಕಾಶ ಮಾಡಿಕೊಡುವ ದೃಷ್ಟಿಯಿಂದ ಅವರು ನೀಡಿರುವ ರಾಜೀನಾಮೆಯು, ಅವರ ನಾಯಕತ್ವದಲ್ಲಿ ಕಳೆದ 30 ವರ್ಷಗಳಿಂದ ಇರುವ ನನಗೆ ವೈಯಕ್ತಿಕವಾಗಿ ನೋವನ್ನುಂಟು ಮಾಡಿದೆ. ಪಕ್ಷದ ಹಿತದೃಷ್ಟಿ ಮತ್ತು ಚುನಾವಣಾ ದೃಷ್ಟಿಯಿಂದ ಇವರ ರಾಜೀನಾಮೆಯು ಉಡುಪಿಯ ಜಿಲ್ಲೆಯಲ್ಲಿ ಬಹಳಷ್ಟು ಪರಿಣಾಮ ಬೀರಲಿದೆ.

ಈ ಎಲ್ಲಾ ಹಿನ್ನಲೆಯಲ್ಲಿ ಕೆ ಪ್ರತಾಪಚಂದ್ರ ಶೆಟ್ಟಿಯವರು ನೀಡಿರುವ ರಾಜೀನಾಮೆಯ ಪತ್ರದ ಕುರಿತು ಸೂಕ್ತವಾದ ನಿರ್ಧಾರವನ್ನು ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!