spot_img
Saturday, April 18, 2026
spot_img

ಹಿರಿಯ ಸಾಹಿತಿ ಪಾರ್ವತಿ ಜಿ.ಐತಾಳ್ ಅವರಿಗೆ ವೀರರಾಣಿ ಅಬ್ಬಕ್ಕ ಪ್ರಶಸ್ತಿ

ಕುಂದಾಪುರ: ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ವತಿಯಿಂದ ನೀಡುವ ‘ವೀರರಾಣಿ ಅಬ್ಬಕ್ಕ ಪ್ರಶಸ್ತಿ’ಗೆ ಕುಂದಾಪುರದ ಭಂಡಾರ್ಕಾಸ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕಿ, ಸಾಹಿತಿ ಡಾ.ಪಾರ್ವತಿ ಜಿ.ಐತಾಳ್ ಆಯ್ಕೆಯಾಗಿದ್ದಾರೆ.

‘ವೀರರಾಣಿ ಅಬ್ಬಕ್ಕ ಪುರಸ್ಕಾರ’ಕ್ಕೆ ಪಾಡ್ದನದ ಮೇರು ಪ್ರತಿಭೆ ಭವಾನಿ ಅವರು ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಹಾಗೂ ಪುರಸ್ಕಾರ ತಲಾ 15 ಸಾವಿರ ರೂಪಾಯಿ ನಗದು ಬಹುಮಾನವನ್ನು ಒಳಗೊಂಡಿದೆ. ಉಳ್ಳಾಲದ ಮಹಾತ್ಮಗಾಂಧಿ ರಂಗಮಂದಿರದಲ್ಲಿ ಫೆ.4ರಂದು ನಡೆಯುವ 2022-23ನೇ ಸಾಲಿನ ಅಬ್ಬಕ್ಕ ಉತ್ಸವದ ಸಮಾರೋಪದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಈ ಬಗ್ಗೆ ಮಂಗಳೂರಿನಲ್ಲಿ ಸುದ್ಧಿಗೋಷ್ಠಿಯಲ್ಲಿ ಉತ್ಸವ ಸಮಿತಿಯ ಸ್ವಾಗತಾಧ್ಯಕ್ಷ ಜಯರಾಮ್ ಶೆಟ್ಟಿ ತಿಳಿಸಿದರು. ಪ್ರೊ.ಅಮೃತ ಸೋಮೇಶ್ವರ ಅಧ್ಯಕ್ಷತೆಯ ಸಮಿತಿ ಇಬ್ಬರು ಸಾಧಕಿಯರನ್ನು ಆಯ್ಕೆ ಮಾಡಿದೆ ಎಂದು ತಿಳಿಸಿದರು. ಸಮಿತಿ ಅಧ್ಯಕ್ಷ ದಿನಕರ ಉಳ್ಳಾಲ್ ಪ್ರಶಸ್ತಿಯ ಬಗ್ಗೆ ಮಾಹಿತಿ ನೀಡಿದರು.

ಪಾರ್ವತಿ ಜಿ.ಐತಾಳ್ ಅವರು ಅನುವಾದ ಕ್ಷೇತ್ರದಲ್ಲಿ ದೊಡ್ಡ ಸಾಧನೆ ಮಾಡಿದ್ದಾರೆ. ಸೃಜನಶೀಲ ಮತ್ತು ಸೃಜನೇತರ ಸಾಹಿತ್ಯ, ಕೃತಿಗಳನ್ನು ರಚಿಸಿದ್ದಾರೆ. ಕಥೆ, ಕಾದಂಬರಿ, ವ್ಯಕ್ತಿಚಿತ್ರ, ವೈಚಾರಿಕ ಲೇಖನ, ನಾಟಕ, ಪುಸ್ತಕ ವಿಮರ್ಶೆ, ರಂಗ ವಿಮರ್ಶೆ ಸೇರಿದಂತೆ 25ಕ್ಕೂ ಹೆಚ್ಚು ಕೃತಿಗಳ ರಚಿಸಿದ್ದಾರೆ. 41 ಕೃತಿಗಳನ್ನು ಮಲೆಯಾಳ, ತುಳು, ಹಿಂದಿ, ಇಂಗ್ಲಿಷ್ ಭಾಷೆಗಳಿಂದ ಕನ್ನಡಕ್ಕೆ ಅನುವಾದಿಸಿದ್ದಾರೆ. ನಾಲ್ಕು ಕೃತಿಗಳ ಸಂಪಾದಕರಾಗಿದ್ದಾರೆ. 10ಕೃತಿಗಳ ಪ್ರಕಟಣೆಗೆ ಸಿದ್ಧತೆ ನಡೆಸಿದ್ದಾರೆ. ಶಿವರಾಮ ಕಾರಂತ ಮತ್ತು ತಕಳಿ ಶಿವಶಂಕರ ಪಿಳ್ಳೆ ಅವರ ಕಾದಂಬರಿಗಳ ತೌಲನಿಕ ಅಧ್ಯಯನಕ್ಕಾಗಿ ಡಾಕ್ಟರೇಟ್ ಪದವಿ ಹಾಗೂ ಅನೇಕ ಪ್ರಶಸ್ತಿಗಳನ್ನು ಪಡೆದಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!