spot_img
Saturday, April 18, 2026
spot_img

ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಲೂರಿನ ಸಚ್ಚಿದಾನಂದ ದೇವಾಡಿಗ ಆಯ್ಕೆ

ಕುಂದಾಪುರ: ಕರ್ನಾಟಕ ರಾಜ್ಯ ಅಂಗವಿಕಲರ ಕ್ರೀಡಾ ಸಂಸ್ಥೆ ಇವರು ನಡೆಸಿದ ರಾಜ್ಯಮಟ್ಟದ 32ನೇ ಪ್ಯಾರಾ ಅಥ್ಲೆಟಿಕ್ ಚಾಂಪಿಯನ್ ಶಿಫ್-2022 ನಲ್ಲಿ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಚ್ಚಿದಾನಂದ ದೇವಾಡಿಗ 100 ಮೀಟರ್ ಓಟ ಹಾಗೂ ಗುಂಡು ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ಗುಜರಾತ್‌ನಲ್ಲಿ ನಡೆಯುವ ರಾಷ್ಟ್ರ ಮಟ್ಟದಲ್ಲಿ ಕ್ರೀಡಾಕೂಟದಲ್ಲಿ ಭಾಗವಹಿಸುವ ಸಲುವಾಗಿ ಅವರು ಜ.23ರಂದು ಗುಜರಾತಿಗೆ ತೆರಳಿದರು.

ಆಲೂರಿನ ಶ್ರೀನಿವಾಸ ಹಾಗೂ ಶರಾವತಿ ದೇವಾಡಿಗ ದಂಪತಿಗಳ ಪುತ್ರರಾಗಿರುವ ಸಚ್ಚಿದಾನಂದ ದೇವಾಡಿಗ ಬಾಲ್ಯದಿಂದಲೇ ಕ್ರೀಡೆಯಲ್ಲಿ ಆಸಕ್ತಿ ಹೊಂದಿರುವ ವಿದ್ಯಾರ್ಥಿಯಾಗಿದ್ದರು. ಆಲೂರು ಸ.ಹಿ.ಪ್ರಾ.ಶಾಲೆಯಲ್ಲಿ ಸಚ್ಚಿದಾನಂದನ ಕ್ರೀಡಾಸಕ್ತಿ ಗಮನಿಸಿದ ದೈಹಿಕ ಶಿಕ್ಷಣ ಶಿಕ್ಷಕ ವೀರೇಂದ್ರ ಜೋಗಿ ಸೂಕ್ತ ಮಾರ್ಗದರ್ಶನ ಮಾಡಿ, ಆತ್ಮವಿಶ್ವಾಸವನ್ನು ತುಂಬಿ, ಪ್ರತಿಭೆಯನ್ನು ಪ್ರೋತ್ಸಾಹಿಸಿದರು. ಪರಿಣಾಮವಾಗಿ ಸಚ್ಚಿದಾನಂದ ಕ್ರೀಡಾಕ್ಷೇತ್ರದಲ್ಲಿ ಹಂತಹಂತವಾಗಿ ಸಾಧನೆ ಮಾಡುತ್ತಾ ಬಂದಿದ್ದಾರೆ. ಪ್ರೌಢಶಾಲೆ, ಕಾಲೇಜಿನಲ್ಲಿಯೂ ಕೂಡಾ ದೈಹಿಕ ಶಿಕ್ಷಣ ಶಿಕ್ಷಕರು ಸೂಕ್ತ ತರಬೇತಿ ನೀಡಿದ್ದರು.

ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿರುವ ಸಚ್ಚಿದಾನಂದ ದೇವಾಡಿಗರನ್ನು ಆಲೂರು ಸ.ಹಿ.ಪ್ರಾ.ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾದ ಶಶಿಧರ ಶೆಟ್ಟಿ ಹಾಗೂ ಅಧ್ಯಾಪಕ ವೃಂದದವರು ಅಭಿನಂದಿಸಿ ಶುಭ ಹಾರೈಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!