spot_img
Wednesday, January 22, 2025
spot_img

ಐ.ಎಂ.ಜೆ. ಇನ್ಸ್ಟಿಟ್ಯೂಷನ್ಸ್ ಮೂಡ್ಲಕಟ್ಟೆ: ಗಣರಾಜ್ಯೋತ್ಸವ-‘ದೇಶಭಕ್ತಿ ಪಥದತ್ತ ನಮ್ಮ ಓಟ’

ಕುಂದಾಪುರ, ಜ 26: ಐ.ಎಂ.ಜೆ. ಇನ್ಸ್ಟಿಟ್ಯೂಷನ್ಸ್ ಮೂಡ್ಲಕಟ್ಟೆ ವತಿಯಿಂದ 74ನೇ ಗಣರಾಜ್ಯೋತ್ಸವವನ್ನು ವಿಶೇಷವಾಗಿ ಆಚರಿಸಲಾಯಿತು. ಭಾರತೀಯ ಗಡಿ ಭದ್ರತಾ ಪಡೆಯ ನಿವೃತ್ತ ಯೋಧರಾದ ಗಣಪತಿ ಖಾರ್ವಿ ಧ್ವಜಾರೋಹಣ ನೆರವೇರಿಸಿ ಗಣರಾಜ್ಯವನ್ನು ಅನೇಕ ಸ್ವಾತಂತ್ರ್ಯ ಹೋರಾಟಗಾರ, ಸೈನಿಕರ ಬಲಿದಾನದಿಂದ ನಾವು ಪಡೆದಿದ್ದೇವೆ. ದೇಶದ ಬಗ್ಗೆ ಒಲವನ್ನು ಮೂಡಿಸುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಆದ್ಯ ಕರ್ತವ್ಯ. ನಾವೆಲ್ಲರೂ ದೇಶಕ್ಕೋಸ್ಕರ ಸೈನ್ಯಕ್ಕೆ ಸೇರಬೇಕೆಂಬ ಆಶಯವನ್ನು ವ್ಯಕ್ತ ಪಡಿಸಿದರು.

ಈ ಸಂದರ್ಭದಲ್ಲಿ ಅಂತರಾಷ್ಟ್ರೀಯ ಪ್ರಶಸ್ತಿಗಳನ್ನು ಗಳಿಸಿರುವ ಸತೀಶ್ ಖಾರ್ವಿಯವರನ್ನು ವಿದ್ಯಾಸಂಸ್ಥೆಗಳ ನಿರ್ದೇಶಕರಾದ ಪ್ರೊ| ದೋಮ ಚಂದ್ರಶೇಖರ್ ಸಂಸ್ಥೆಯ ಪರವಾಗಿ ಸನ್ಮಾನಿಸಿದರು.

ಐ.ಎಂ.ಜೆ. ವಿದ್ಯಾ ಸಂಸ್ಥೆಗಳ ನಿರ್ದೇಶಕರಾದ ಪ್ರೊ| ದೋಮ ಚಂದ್ರಶೇಖರ್ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ನಮ್ಮದು ಪ್ರಜಾಸತ್ತಾತ್ಮಕ ದೇಶವಾದ್ದರಿಂದ ಪ್ರಜೆಗಳಿಂದಲೇ ಆಡಲ್ಪಡುವ ದೇಶವಾಗಿದೆ. ಪ್ರತಿಯೊಬ್ಬರು ಸಂವಿಧಾನದ ಅಧ್ಯಯನವನ್ನು ಮಾಡಬೇಕು. ಅದರ ಮೌಲ್ಯ, ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಗಣರಾಜ್ಯೋತ್ಸವದ ಅಂಗವಾಗಿ ಹಮ್ಮಿಕೊಂಡ ‘ದೇಶಭಕ್ತಿ ಪಥದತ್ತ ನಮ್ಮ ಓಟ’ ಈ ಕಾರ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಕಾರ್ಯಕ್ರಮಕ್ಕೆ ಅಂತರಾಷ್ಟ್ರೀಯ ಪವರ್ ಲಿಫ್ಟರ್ ಸತೀಶ್ ಖಾರ್ವಿ ಚಾಲನೆ ನೀಡಿದರು. ಈ ದೇಶಭಕ್ತಿ ಓಟವು ನಮ್ಮ ಮೂಡ್ಲಕಟ್ಟೆ ಕಾಲೇಜಿನ ಆವರಣದಿಂದ ಪ್ರಾರಂಭಗೊಂಡು ಐ.ಎಂ.ಜಯರಾಮ್ ಶೆಟ್ಟಿ ಸರ್ಕಲ್ ಸುತ್ತುವರಿದು ಕಾಲೇಜಿನ ಆವರಣಕ್ಕೆ ಮರು ಆಗಮಿಸಿತು

ಕಾರ್ಯಕ್ರಮದಲ್ಲಿ ಎಂ.ಐ.ಟಿ. ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ ಡಾ. ಅಬ್ದುಲ್ ಕರೀಂ, ಎಂ.ಸಿ.ಎನ್. ವಿದ್ಯಾಸಂಸ್ಥೆಯ ಪ್ರಾಂಶುಪಾಲ ಪ್ರೊ. ಜೆನ್ನಿಫರ್ ಮೆನೇಜಸ್ , ಐ.ಎಂ.ಜೆ.ಐ.ಎಸ್.ಸಿ. ವಿದ್ಯಾಸಂಸ್ಥೆಯ ಪ್ರಾಂಶುಪಾಲ ಡಾ.ಪ್ರತಿಭಾ ಎಂ ಪಟೇಲ್, ಎಂ.ಐ.ಟಿ. ವಿದ್ಯಾಸಂಸ್ಥೆಯ ಉಪ ಪ್ರಾಂಶುಪಾಲರಾದ ಪ್ರೊ. ಮೆಲ್ವಿನ್ ಡಿಸೋಜ ಮತ್ತು ಐ.ಎಂ.ಜೆ.ಐ.ಎಸ್.ಸಿ. ವಿದ್ಯಾಸಂಸ್ಥೆಯ ಉಪ ಪ್ರಾಂಶುಪಾಲ ಪ್ರೊ. ಜಯಶೀಲ್ ಕುಮಾರ್ ಉಪಸ್ಥಿತರಿದ್ದರು.

ಎಂ.ಐ.ಟಿ. ವಿದ್ಯಾ ಸಂಸ್ಥೆಯ ಪ್ರೊ| ಸೂಕ್ಷ್ಮ ಅಡಿಗ ಸನ್ಮಾನ ಪತ್ರ ವಾಚಿಸಿದರು. ಕಾರ್ಯಕ್ರಮವನ್ನು ಐ.ಎಂ.ಜೆ.ಐ.ಎಸ್.ಸಿ ವಿದ್ಯಾಸಂಸ್ಥೆಯ ಪ್ರೊ| ಸುಮನ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!