spot_img
Saturday, April 18, 2026
spot_img

ಹೇರಂಜಾಲು: ಶ್ರೀ ಗುಡೇ ಮಹಾಲಿಂಗೇಶ್ವರ ಸೌಹಾರ್ದ ಸಹಕಾರಿ ಸಂಘ ಉದ್ಘಾಟನೆ

ಬೈಂದೂರು, ಜ.26: ಬೈಂದೂರು ತಾಲೂಕಿನ ಹೇರಂಜಾಲುವಿನ ಜೆ.ಎನ್.ಎಸ್ ಕಾಂಪ್ಲೆಕ್ಸ್‌ನಲ್ಲಿ ಶ್ರೀ ಗುಡೇ ಮಹಾಲಿಂಗೇಶ್ವರ ಸೌಹಾರ್ದ ಸಹಕಾರಿ ಸಂಘ ನಿ., ಹೇರಂಜಾಲು ಜ.26ರಂದು ಉದ್ಘಾಟನೆಗೊಂಡಿತು.
ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ನೂತನ ಶ್ರೀ ಗುಡೇ ಮಹಾಲಿಂಗೇಶ್ವರ ಸೌಹಾರ್ದ ಸಹಕಾರಿ ಸಂಘವನ್ನು ಉದ್ಘಾಟಿಸಿದರು.

ಶ್ರೀ ಗುಡೇ ಮಹಾಲಿಂಗೇಶ್ವರ ಸೌಹಾರ್ದ ಸಹಕಾರಿ ಸಂಘ ಹೇರಂಜಾಲು ಇದರ ಅಧ್ಯಕ್ಷರಾದ ಹೆಚ್.ಜಯಶೀಲ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಭದ್ರತಾ ಕೊಠಡಿಯನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಉದ್ಘಾಟಿಸಿದರು. ಷೇರುಪತ್ರವನ್ನು ಕೋಟೇಶ್ವರದ ಯುವ ಮೆರಿಡಿಯನ್ ಮಾಲಕರಾದ ಉದಯಕುಮಾರ ಶೆಟ್ಟಿ ಬಿಡುಗಡೆ ಮಾಡಿದರು. ಠೇವಣಿ ಪತ್ರವನ್ನು ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಎಸ್.ಪ್ರಕಾಶ್ಚಂದ್ರ ಶೆಟ್ಟಿ ಬಿಡುಗಡೆಗೊಳಿಸಿದರು. ಸ್ವ-ಸಹಾಯ ಗುಂಪುಗಳನ್ನು ಬೈಂದೂರು ತಾಲೂಕು ರೈತ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ನೈಲಾಡಿ ಉದ್ಘಾಟಿಸಿದರು.

ವಿಜಯ ಬ್ಯಾಂಕ್ ನಿವೃತ್ತ ಡಿ.ಜಿ.ಎಂ ಆನಂದ ಶೆಟ್ಟಿ ಅಲ್ಸಾಡಿ, ಕೊಲ್ಲೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ಅತುಲ್ ಕುಮಾರ್ ಶೆಟ್ಟಿ, ಶ್ರೀ ಗುಡೇ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಮೇರ್ಟ, ಕಾಲ್ತೋಡು ಶ್ರೀ ಮಹಾಲಸ ಮಾರಿಕಾಂಬ ದೇವಸ್ಥಾನದ ಅರ್ಚಕರಾದ ರಾಮಯ್ಯ, ಉಡುಪಿ ಜಿಲ್ಲಾ ಸೌಹಾರ್ದ ಸಂಯೋಜಕರಾದ ವಿಜಯ್ ಬಿ.ಎಸ್. ಉಪಸ್ಥಿತರಿದ್ದರು.

ನಿವೃತ್ತ ಸಹಕಾರಿ, ಲೇಖಕರಾದ ಕೆ.ಪುಂಡಲೀಕ ನಾಯಕ್ ನಾಯ್ಕನಕಟ್ಟೆ ಶುಭಶಂಸನೆಗೈದರು. ಸಂಘದ ಆಡಳಿತ ಮಂಡಳಿ ಸದಸ್ಯರಾದ ಸುಧಾಕರ ಎಸ್.ಶೆಟ್ಟಿ, ಅಣ್ಣಪ್ಪ ಶೆಟ್ಟಿ ಬಟ್ನಾಡಿ, ಹೆಚ್.ಸುರೇಶ ಶೆಟ್ಟಿ, ಸುಭಾಶ್ಚಂದ್ರ ಶೆಟ್ಟಿ ಹಳಗೇರಿ, ಮನೀಶ್ ಜೆ.ಶೆಟ್ಟಿ, ಸುಜಯ ಎಸ್.ಶೆಟ್ಟಿ, ಶ್ರೀಮತಿ ಶೀಲಾ ಜಯಶೀಲ ಶೆಟ್ಟಿ, ಶ್ರೀಮತಿ ಜ್ಯೋತಿ ವಿಜಯ ಶೆಟ್ಟಿ, ಶ್ರೀಮತಿ ಕುಶಾಲ ಉದಯ ಶೆಟ್ಟಿ, ಶ್ರೀಮತಿ ಮಂಜುಶ್ರೀ ರವೀಂದ್ರ ಶೆಟ್ಟಿ ಉಪಸ್ಥಿತರಿದ್ದರು.
ಸಂಘದ ಉಪಾಧ್ಯಕ್ಷ ಕಿರಣ್ ಶೆಟ್ಟಿ ಕುದ್ರುಕೋಡು ಸ್ವಾಗತಿಸಿದರು. ವಿಶ್ವನಾಥ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಪ್ರಭಾರ ಮುಖ್ಯಕಾರ್ಯನಿರ್ವಹಣಾಧಿಕಾರಿ ತಿಮ್ಮಪ್ಪ ಪೂಜಾರಿ ವಂದಿಸಿದರು.

ಖ್ಯಾತ ಹಾಸ್ಯ ಭಾಷಣಕಾರರಾದ ಸಂಧ್ಯಾ ಶಣೈ ಉಡುಪಿ ಜೀವನ ಮೌಲ್ಯ ಮತ್ತು ಹಾಸ್ಯ ವಿಷಯದ ಕುರಿತು ಮಾತನಾಡಿದರು. ಡಾ.ಗಣೇಶ್ ಗಂಗೊಳ್ಳಿ ಮತ್ತು ಬಳಗದವರಿಂದ ಸಂಗೀತ ರಸಮಂಜರಿ ಜರುಗಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಸದಸ್ಯರಿಗೆ ಅದೃಷ್ಟ ಕೂಪನ್ ಮೂಲಕ ಉಡುಗೊರೆ ನೀಡಲಾಯಿತು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!