spot_img
Saturday, June 13, 2026
spot_img

ಹೆಮ್ಮಾಡಿ: ಬಸ್ ಇಳಿಯುವಾಗ ಆಯಾತಪ್ಪಿ ಚಕ್ರದಡಿ ಸಿಲುಕಿ ಕಾಲೇಜು ವಿದ್ಯಾರ್ಥಿ ಸಾವು

ಕುಂದಾಪುರ: ಪ್ರಯಾಣಿಕರಿಂದ ತುಂಬಿದ ಖಾಸಗಿ ಬಸ್‌ನ ಮೆಟ್ಟಿಲ ಮೇಲೆ ನಿಂತು ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಯೋರ್ವ ಕೆಳಗೆ ಇಳಿಯುವ ಸಂದರ್ಭದಲ್ಲಿ ಆಯತಪ್ಪಿ ಖಾಸಗಿ ಬಸ್‌ನ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹೆಮ್ಮಾಡಿಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.

ಕಟ್‌ಬೇಲ್ತೂರು ನಾಗಪ್ಪ ಪೂಜಾರಿ ಮತ್ತು ಜಲಜಾ ಪೂಜಾರಿ ದಂಪತಿಗಳ ಪುತ್ರ, ಕೋಟೇಶ್ವರ ಕಾಗೇರಿ ಕಾಲೇಜಿನ ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿ ಸುದೀಪ್ (20ವ) ಸಾವನ್ನಪ್ಪಿದ ದುರ್ದೈವಿ. ಶನಿವಾರ ಬೆಳಿಗ್ಗೆ ಸಾಗರದಿಂದ ಕುಂದಾಪುರಕ್ಕೆ ತೆರಳುವ ಖಾಸಗಿ ಬಸ್‌ನಲ್ಲಿ ಸುದೀಪ್ ಸಂಚರಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಕಟ್‌ಬೇಲ್ತೂರಿನಲ್ಲಿ ಬಸ್ ಹತ್ತಿದ್ದ ಸುದೀಪ್ ಬಸ್‌ನೊಳಗೆ ಜನ ಹಾಗೂ ವಿದ್ಯಾರ್ಥಿಗಳು ತುಂಬಿದ್ದರಿಂದ ಮೆಟ್ಟಿಲ ಮೇಲೆ ನಿಂತು ಪ್ರಯಾಣಿಸುತ್ತಿದ್ದರು. ಹೆಮ್ಮಾಡಿಯಲ್ಲಿ ಒಮ್ಮೆ ಪ್ರಯಾಣಿಕರನ್ನು ಹತ್ತಿಸಿಕೊಂಡು ಮತ್ತೆ ನಿಲ್ಲಿಸಿದಾಗ ವಿದ್ಯಾರ್ಥಿ ಸುದೀಪ್ ಆಯತಪ್ಪಿ ಕೆಳಗೆ ಬಿದ್ದು ಬಸ್‌ನ ಮುಂಬದಿಯ ಚಕ್ರದಡಿಯಲ್ಲಿ ಸಿಲುಕಿದ್ದಾನೆ. ಸೊಂಟದ ಮೇಲೆ ಚಕ್ರ ಹರಿದ ಪರಿಣಾಮ ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!