spot_img
Sunday, April 19, 2026
spot_img

ಹೆಸಕುತ್ತೂರು ಶಾಲೆಯಲ್ಲಿ ಪೋಷಕರ ಕ್ರೀಡಾಕೂಟ

kundapura: “ವಿದ್ಯಾರ್ಥಿಗಳು, ಶಿಕ್ಷಕರ ಜೊತೆಗೆ ಪೋಷಕರು ಕೂಡ ಶಿಕ್ಷಣ ವ್ಯವಸ್ಥೆಯ ಪ್ರಮುಖ ಭಾಗೀದಾರರು. ಹಾಗಾಗಿ ಪೋಷಕರಿಗಾಗಿ ಏರ್ಪಡಿಸಲಾದ ಈ ಕ್ರೀಡಾಕೂಟ ಅರ್ಥಪೂರ್ಣ” ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಉಡುಪಿ ಇದರ ಆರ್ಥಿಕ ಸೇರ್ಪಡೆ ವಿಭಾಗದ ಮುಖ್ಯ ವ್ಯವಸ್ಥಾಪಕರಾದ ಪ್ರಜ್ಞಾ ಎಂ ಕಾಮತ್ ನುಡಿದರು. ಅವರು ಹೆಸಕುತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಶಿರಿಯಾರದ ಸಹಯೋಗದೊಂದಿಗೆ ನಡೆದ “ಪೋಷಕರ ಕ್ರೀಡಾಕೂಟ” ವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದ ಪೋಷಕರಿಗಾಗಿ ಓಟದ ಸ್ಪರ್ಧೆ, ವೇಗದ ನಡಿಗೆ, ಗುಂಡು ಎಸೆತ, ಹಗ್ಗ ಜಗ್ಗಾಟ ಜತೆಗೆ ಇತರ ಸರಳ ಆಟದ ಸ್ಪರ್ಧೆಗಳನ್ನು ನಡೆಸಲಾಯಿತು. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಶಿರಿಯಾರದ ವತಿಯಿಂದ ಬಹುಮಾನವನ್ನು ಪ್ರಾಯೋಜಿಸಲಾಗಿತ್ತು ಮತ್ತು ಬ್ಯಾಂಕ್ ನ ವತಿಯಿಂದ ಶಾಲೆಗೆ ಒಂದು ಕಂಪ್ಯೂಟರ್ ನ್ನು ಕೂಡ ಕೊಡುಗೆ ನೀಡಲಾಯಿತು.

ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಕೃಷ್ಣ ಕೆದ್ಲಾಯ ಅಧ್ಯಕ್ಷತೆ ವಹಿಸಿದ್ದರು. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದ ಶಿರಿಯಾರ ಶಾಖೆಯ ಮ್ಯಾನೇಜರ್ ಇನಿಯನ್, ಶಾಲಾ ಎಸ್ ಡಿ ಎಂ.ಸಿ ಉಪಾಧ್ಯಕ್ಷರಾದ ಗಾಯತ್ರಿ ಆಚಾರ್, ಎಸ್ ಡಿ ಎಂ ಸಿ ಸದಸ್ಯರು, ಶಾಲಾ ಶಿಕ್ಷಕರಾದ ಸಂಜೀವ ಎಂ, ಜಯರಾಮ ಶೆಟ್ಟಿ, ವಿಜಯಾ ಆರ್, ವಿಜಯ ಶೆಟ್ಟಿ, ರವೀಂದ್ರ ನಾಯಕ್, ಗೌರವ ಶಿಕ್ಷಕಿಯರಾದ ಮಧುರ, ಪ್ರೀತಿ ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕ ಶೇಖರ ಕುಮಾರ ಸ್ವಾಗತಿಸಿದರು. ಅಶೋಕ ತೆಕ್ಕಟ್ಟೆ ನಿರೂಪಿಸಿದರು. ಜಯಲಕ್ಷ್ಮಿ ಬಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!