spot_img
Sunday, April 19, 2026
spot_img

ಗಂಗೊಳ್ಳಿ ಖಾರ್ವಿಕೇರಿಯ ಶ್ರೀ ಮಹಾಂಕಾಳಿ ಅಮ್ಮನವರ ದೇವಸ್ಥಾನದ ನವೀಕೃತ ಶಿಲಾದೇಗುಲದ ಲೋಕಾರ್ಪಣೆ, ಪುನರ್ ಪ್ರತಿಷ್ಠೆ

ಗಂಗೊಳ್ಳಿ: ಕೊಂಕಣಿ ಖಾರ್ವಿ ಜನರು ಧರ್ಮನಿಷ್ಠರು ಮತ್ತು ಸಾತ್ವಿಕರು. ಜೀವನದಲ್ಲಿ ಛಲ, ಧೈರ್ಯ ಮತ್ತು ನಂಬಿಕೆ ಇದ್ದರೆ ಸಾಧನೆ ಮಾಡಬಹುದು ಎಂಬುದನ್ನು ಈ ಜನಾಂಗ ತೋರಿಸಿಕೊಟ್ಟಿದೆ. ದೇವರ ಅನುಗ್ರಹ ಪ್ರಾಪ್ತಿಯಾದರೆ ಜೀವನದಲ್ಲಿ ಇಷ್ಟಾರ್ಥ ಸಿದ್ಧಿಯಾಗುತ್ತದೆ. ಗಂಗೊಳ್ಳಿಯ ಶ್ರೀ ಮಹಾಂಕಾಳಿ ದೇವಸ್ಥಾನ ಭಕ್ತಿ, ನಂಬಿಕೆಯ ಪ್ರತಿರೂಪವಾಗಿದೆ ಎಂದು ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಹೇಳಿದರು.

ಗಂಗೊಳ್ಳಿ ಖಾರ್ವಿಕೇರಿಯ ಶ್ರೀ ಮಹಾಂಕಾಳಿ ಅಮ್ಮನವರ ದೇವಸ್ಥಾನದ ನವೀಕೃತ ಶಿಲಾದೇಗುಲದ ಲೋಕಾರ್ಪಣೆ, ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಶುಕ್ರವಾರ ಅವರು ಮಾತನಾಡಿದರು.

ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ದೇವಸ್ಥಾನಗಳ ಜೀರ್ಣೋದ್ಧಾರ ಮತ್ತು ಅಭಿವೃದ್ಧಿಗಾಗಿ ಸರಕಾರದಿಂದ ಈವರೆಗೆ 20 ಕೋಟಿ ರೂ. ಅನುದಾನ ಬಂದಿದೆ. ಗಂಗೊಳ್ಳಿಯ ಶ್ರೀ ಮಹಾಂಕಾಳಿ ದೇವಸ್ಥಾನಕ್ಕೆ 50 ಲಕ್ಷ ರೂ. ಅನುದಾನ ನೀಡಲು ಮುಖ್ಯಮಂತ್ರಿಗಳ ಅಂಕಿತ ಹಾಕಿದ್ದು, ಆದಷ್ಟು ಶೀಘ್ರ ಅನುದಾನವನ್ನು ದೇವಸ್ಥಾನಕ್ಕೆ ನೀಡುವ ಕೆಲಸ ಮಾಡಲಾಗುವುದು. ವೈಯಕ್ತಿಕವಾಗಿ 2.5 ಲಕ್ಷ ರೂ.ಗಳನ್ನು ದೇವಸ್ಥಾನಕ್ಕೆ ನೀಡುವುದಾಗಿ ಅವರು ಹೇಳಿದರು.

ಉದ್ಯಮಿ ಶೇಷಯ್ಯ ಕೊತ್ವಾಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿದ್ವಾನ್ ಕೆ.ಪಿ.ಕುಮಾರಗುರು ತಂತ್ರಿಗಳು ಕೊರಂಗ್ರಪಾಡಿ ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ ನೀಡಿದರು. ಬಾಲ ವಾಗ್ಮಿ ಹಾರಿಕಾ ಮಂಜುನಾಥ ಶುಭಾಶಂಸನೆಗೈದರು. ಇದೇ ಸಂದರ್ಭ ದೇವಸ್ಥಾನದ ಜೀಣೋದ್ಧಾರಕ್ಕೆ ಸಹಕರಿಸಿದ ದಾನಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ವಿದ್ವಾನ್ ಗುಂಡಿಬೈಲು ಸುಬ್ರಹ್ಮಣ್ಯ ಭಟ್ ಉಡುಪಿ, ನಾಗರಾಜ ತಂತ್ರಿಗಳು ಕಾರ್ಕಳ, ವೇದಮೂರ್ತಿ ಜಿ.ಲಕ್ಷ್ಮೀನಾರಾಯಣ ಭಟ್, ಕುಂದಾಪುರ ಶ್ರೀ ಮಹಾಕಾಳಿ ದೇವಸ್ಥಾನದ ಅಧ್ಯಕ್ಷ ಜಯಾನಂದ ಖಾರ್ವಿ ಶುಭ ಹಾರೈಸಿದರು. ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಮಡಿಕಲ್ ಸುರೇಶ ಖಾರ್ವಿ, ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಮಡಿ ಶಂಕರ ಖಾರ್ವಿ, ಗಣಪತಿ ಪಟೇಲ್ ಕಂಚುಗೋಡು, ದೇವಸ್ಥಾನದ ಪಾತ್ರಿಗಳಾದ ನಾಗರಾಜ ಖಾರ್ವಿ, ಶೇಷಪ್ಪ ಖಾರ್ವಿ ಮತ್ತು ಮಣಿಕಂಠ ಖಾರ್ವಿ ಉಪಸ್ಥಿತರಿದ್ದರು.

ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ರವಿಶಂಕರ ಖಾರ್ವಿ ಸ್ವಾಗತಿಸಿದರು. ಉಪಾಧ್ಯಕ್ಷ ರಾಮಪ್ಪ ಖಾರ್ವಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶೈಲಾ ಮೇಸ್ತ ಮತ್ತು ಸುಂದರ ಜಿ. ಕಾರ್ಯಕ್ರಮ ನಿರ್ವಹಿಸಿದರು. ಬಾಣಿ ನಾಗರಾಜ ಖಾರ್ವಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!