spot_img
Sunday, April 19, 2026
spot_img

ಕಾಳಾವರ ಸ.ಹಿ.ಪ್ರಾ.ಶಾಲೆಯ ಶತಮಾನೋತ್ಸವ ಪ್ರಯುಕ್ತ ಹಳೆ ವಿದ್ಯಾರ್ಥಿಗಳ ಕ್ರೀಡಾಕೂಟ

ಕುಂದಾಪುರ:ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಳಾವರ ಇದರ ಶತಮಾನೋತ್ಸವ ಅಂಗವಾಗಿ ಹಳೆ ವಿದ್ಯಾರ್ಥಿಗಳ ಕ್ರೀಡಾಕೂಟ ನೆಡೆಯಿತು. ಕ್ರೀಡಾಕೂಟವನ್ನು ಶತಮಾನೋತ್ಸವ ಸಮಿತಿ, ಲೆಕ್ಕ ಪರಿಶೋಧಕರು, ಉಪನ್ಯಾಸಕರಾದ ಸುರೇಶ್ ಎನ್. ಶೆಟ್ಟಿ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸುಖಾನಂದ ಹೆಗ್ಡೆ, ಸಿ‌ಎ ವಿಜಯ ಶೆಟ್ಟಿ, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಎಸ್. ದಿನಕರ ಹೆಗ್ಡೆ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.

ಶತಮಾನೋತ್ಸವ ಸಮಿತಿ ಉಪಾಧ್ಯಕ್ಷರಾದ ಅರಣ್ಯ ಗುತ್ತಿಗೆದಾರರಾದ ಜಯಪ್ರಕಾಶ್ ಶೆಟ್ಟಿ ಕಟ್ಕೇರಿ ಮತ್ತು ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ದೀಪಕ್ ಕುಮಾರ್ ಶೆಟ್ಟಿ ಕಾಳಾವರ ಬಲೂನ್ ಹಾರಿಸುವುದರ ಮುಖಾಂತರ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.

ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಭರತ ಕುಮಾರ ಶೆಟ್ಟಿ ಸಭೆಯ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು.

ವೇದಿಕೆಯಲ್ಲಿ ಶತಮಾನೋತ್ಸವ ಸಮಿತಿ ಗೌರವಾಧ್ಯಕ್ಷರಾದ ಎಸ್. ಚಂದ್ರಶೇಖರ್ ಹೆಗ್ಡೆ, ಅಧ್ಯಕ್ಷರಾದ ಡಾ. ಭಾಸ್ಕರ್ ಶೆಟ್ಟಿ ಸಳ್ವಾಡಿ, ಕಾರ್ಯದರ್ಶಿ ಉದಯ ಕುಮಾರ ಶೆಟ್ಟಿ ಕಾಳಾವರ, ಉಪಾಧ್ಯಕ್ಷರಾದ ಸುಧಾಕರ ಶೆಟ್ಟಿ, ಹಳೇ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಜಯಪ್ರಕಾಶ ಶೆಟ್ಟಿ, ಕ್ರೀಡಾ ಕಾರ್ಯದರ್ಶಿಗಳಾದ ಲಕ್ಷ್ಮೀ ನಾರಾಯಣ ಶೆಟ್ಟಿ, ಮನೋಹರ ಆಚಾರ್ಯ, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಸತೀಶ ಜೋಗಿ, ಶಾಲಾ ಪ್ರಭಾರ ಮುಖ್ಯೋಪಾಧ್ಯಾಯಿನಿ ಪ್ರೇಮ ಕೆ., ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ಅರುಣ ಕುಮಾರ, ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ಬಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು.

ಶಾಲಾ ಶಿಕ್ಷಕರಾದ ಉದಯ ಕುಮಾರ ಕಾರ್ಯಕ್ರಮ ನಿರೂಪಿಸಿದರು. ಹಳೇ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಜಯಪ್ರಕಾಶ ಶೆಟ್ಟಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!