spot_img
Sunday, April 19, 2026
spot_img

ಗಂಗೊಳ್ಳಿ ರಥಬೀದಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ವಾರ್ಷಿಕೋತ್ಸವ

ಗಂಗೊಳ್ಳಿ : ಶಾಲೆಗಳಲ್ಲಿ ಮಕ್ಕಳಿಗೆ ಮಾನವೀಯ ಮೌಲ್ಯ ಹಾಗೂ ನೈತಿಕ ಶಿಕ್ಷಣ ನೀಡುವ ಶಿಕ್ಷಣ ನೀಡಬೇಕಿದೆ. ನಮ್ಮ ದೇಶ, ಸಂಸ್ಕೃತಿ, ಸಂಸ್ಕಾರ, ಧರ್ಮ, ದೇವರು ಮೊದಲಾದವುಗಳ ಬಗ್ಗೆ ಶಿಕ್ಷಣ ನೀಡಿದರೆ ಮಕ್ಕಳ ಭವಿಷ್ಯ ಉಜ್ವಲವಾಗುತ್ತದೆ. ಗುರು ಹಿರಿಯರನ್ನು ಗೌರವಿಸುವ ಪರಂಪರೆಯನ್ನು ಬೆಳೆಸುವುದರ ಜೊತೆಗೆ ಎಳವೆಯಲ್ಲೇ ಮಕ್ಕಳಿಗೆ ಅಗತ್ಯವಿರುವ ಶಿಕ್ಷಣವನ್ನು ನೀಡಲು ಪೋಷಕರು ಗಮನಹರಿಸಬೇಕಿದೆ ಎಂದು ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಹೇಳಿದರು.

ಗಂಗೊಳ್ಳಿ ರಥಬೀದಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಮಂಗಳವಾರ ಜರಗಿದ ಶಾಲಾ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಸರಕಾರ ಶಿಕ್ಷಣಕ್ಕೆ ಹೆಚ್ಚಿನ ಒತ್ತನ್ನು ನೀಡುತ್ತಿದೆ. ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಈಗಾಗಲೇ ಸುಮಾರು ೬೦ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಒದಗಿಸಲಾಗಿದ್ದು, ೬-೭ ತಿಂಗಳಿನಲ್ಲಿ ಪ್ರತಿಯೊಂದು ಮನೆ ಮನೆಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಆಗಲಿದೆ. ಗಂಗೊಳ್ಳಿಯ ರಥಬೀದಿ ಶಾಲೆಗೆ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಶಾಲಾ ಕೊಠಡಿಗೆ ಅನುದಾನ ಮೀಸಲಿರಿಸಲಾಗುವುದು ಎಂದು ಅವರು ಹೇಳಿದರು.

ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಗ್ರಾಪಂ ಸದಸ್ಯರಾದ ತಬ್ರೇಜ್, ಬಸವ ಖಾರ್ವಿ, ಕುಂದಾಪುರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಸ್.ಕಾಂತರಾಜು, ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ದಿವಾಕರ ಎನ್.ಖಾರ್ವಿ, ಕುಂದಾಪುರ ಪರಿಯಾಳ ಸಮಾಜ ಸುಧಾರಕ ಸಂಘದ ಅಧ್ಯಕ್ಷ ಮಂಜುನಾಥ ಸಾಲಿಯಾನ, ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗಣೇಶ ಶೆಟ್ಟಿ, ಎಸ್‌ಡಿ‌ಎಂಸಿ ಅಧ್ಯಕ್ಷ ಬಿ.ಎಸ್.ರತ್ನಾಕರ ಖಾರ್ವಿ ಮತ್ತಿತರರು ಉಪಸ್ಥಿತರಿದ್ದರು.

ಗಂಗೊಳ್ಳಿಯ ಉದ್ಯಮಿ ಅಬ್ದುಲ್ ಫತಾ ಧ್ವಜಾರೋಹಣ ನೆರವೇರಿಸಿದರು. ಇದೇ ಸಂದರ್ಭ ಕೋಟ ಶಿವರಾಮ ಕಾರಂತ ಬಾಲ ಪ್ರಶಸ್ತಿ ವಿಜೇತ ಅನುರಾಗ್ ನಾಯಕ್ ಮತ್ತು ಗಾಯಕಿ ಅಕ್ಷತಾ ವಿನಯ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಿವಾನಂದ ಪೂಜಾರಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಾಲಾ ಮುಖ್ಯ ಶಿಕ್ಷಕಿ ಚಂದ್ರಕಲಾ ತಾಂಡೇಲ ವರದಿ ವಾಚಿಸಿದರು. ಸಹಶಿಕ್ಷಕಿ ಪ್ರೇಮಲತಾ, ಗೌರವ ಶಿಕ್ಷಕಿ ಪಲ್ಲವಿ ಮತ್ತು ಅಂಗನವಾಡಿ ಕಾರ್ಯಕರ್ತೆ ಫಿಲೋಮಿನಾ ಫೆರ್ನಾಂಡಿಸ್ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಸುಂದರ ಜಿ. ಕಾರ್ಯಕ್ರಮ ನಿರ್ವಹಿಸಿದರು. ಹಳೆ ವಿದ್ಯಾರ್ಥಿ ಕೃಷ್ಣ ಪೂಜಾರಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!