spot_img
Wednesday, January 22, 2025
spot_img

ಕಲಿಕಾ ಚೇತರಿಕೆ ಮೂಲಕ ಮಕ್ಕಳ ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ ಕಂಡುಕೊಳ್ಳಲು ಸಾಧ್ಯ-ಸಿ.ಎಸ್.ಕಾಂತರಾಜು

ಗಂಗೊಳ್ಳಿ : ಸರಕಾರ ಕಲಿಕಾ ಚೇತರಿಕೆ ಕಾರ್ಯಕ್ರಮದ ಮೂಲಕ ಮಕ್ಕಳ ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿಯನ್ನು ಕಂಡುಕೊಳ್ಳಲು ಸಾಧ್ಯವಾಗುತ್ತಿದೆ. ಕಲಿಕಾ ಚಟುವಟಿಕೆಗಳ ಮೂಲಕ ಮಕ್ಕಳಲ್ಲಿ ಕಲಿಕೆ ಹಾಗೂ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ವಿಶೇಷ ಆಸಕ್ತಿ ಮೂಡಿದ್ದು, ಕಲಿಕೆಯು ಹಬ್ಬವಾಗಬೇಕೆಂಬ ದೃಷ್ಟಿಯಿಂದ ಕಲಿಕಾ ಚೇತರಿಕೆ ಕಾರ್ಯಕ್ರಮದ ಭಾಗವಾಗಿ ಕಲಿಕಾ ಹಬ್ಬ ಕಾರ್ಯಕ್ರಮವನ್ನು ಕ್ಲಸ್ಟರ್ ಮಟ್ಟದಲ್ಲಿ ಆಯೋಜಿಸಲಾಗಿದೆ ಎಂದು ಕುಂದಾಪುರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಸ್.ಕಾಂತರಾಜು ಹೇಳಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಡುಪಿ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ವಲಯ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ ಇವಟ ಜಂಟಿ ಆಶ್ರಯದಲ್ಲಿ ಗಂಗೊಳ್ಳಿ ಖಾರ್ವಿಕೇರಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ಎರಡು ದಿನಗಳ ಕಲಿಕಾ ಹಬ್ಬ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.

ಶಾಲೆಯ ಎಸ್‌ಡಿ‌ಎಂಸಿ ಅಧ್ಯಕ್ಷ ರವಿಶಂಕರ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಪತ್ರಕರ್ತ ಬಿ.ರಾಘವೇಂದ್ರ ಪೈ, ಇಸ್ರೋ ನಿವೃತ್ತ ವಿಜ್ಞಾನಿ ಸುರೇಶ ಕರ್ಣಿಕ್, ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ದಿವಾಕರ ಎನ್.ಖಾರ್ವಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗಣೇಶ ಶೆಟ್ಟಿ, ಕ್ಷೇತ್ರ ಸಮನ್ವಯ ಅಧಿಕಾರಿ ಅಶೋಕ ನಾಯ್ಕ್, ಬಿ‌ಆರ್‌ಪಿ ಮಿಲ್ಟನ್ ರೋಹಿತ್ ಕ್ರಾಸ್ತಾ, ಕಲಿಕಾ ಹಬ್ಬದ ನೋಡೆಲ್ ಅಧಿಕಾರಿ ಸಂತೋಷ ಕುಮಾರ್ ಶೆಟ್ಟಿ, ಶಿಕ್ಷಣ ಸಂಯೋಜಕ ಶೇಖರ್, ಕುಂದಾಪುರದ ವಲಯದ ಸಿ‌ಆರ್‌ಪಿ ಮತ್ತು ಬಿ‌ಆರ್‌ಪಿಗಳು, ಮತ್ತಿತರರು ಉಪಸ್ಥಿತರಿದ್ದರು.

ಶಾಲೆಯ ಪ್ರಭಾರ ಮುಖ್ಯಶಿಕ್ಷಕ ಉಮೇಶ ಕುಂದರ್ ಸ್ವಾಗತಿಸಿದರು. ಸಹಶಿಕ್ಷಕ ಶಶಿಶಂಕರ ಎಚ್.ಎಂ. ಕಾರ್ಯಕ್ರಮ ನಿರ್ವಹಿಸಿದರು. ಸಿ‌ಆರ್‌ಪಿ ಶಂಕರ ಶೆಟ್ಟಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!