spot_img
Monday, April 20, 2026
spot_img

ಗಂಗೊಳ್ಳಿ :ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ


ಗಂಗೊಳ್ಳಿ: ಫೆ.19ರಂದು ಗಂಗೊಳ್ಳಿಯಲ್ಲಿ ನಡೆಯಲಿರುವ ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಗಂಗೊಳ್ಳಿಯ ಸ.ವಿ. ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಭಾನುವಾರ ಜರಗಿತು.

ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಎಚ್.ಗಣೇಶ ಕಾಮತ್ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಉಮೇಶ ಪುತ್ರನ್ ಮಾತನಾಡಿ, ಗಂಗೊಳ್ಳಿಯಲ್ಲಿ ನಡೆಯಲಿರುವ ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವ ಸಿದ್ಧತೆಗಳು ನಡೆದಿದ್ದು, ಸಮ್ಮೇಳನದ ಯಶಸ್ಸಿಗೆ ರಚಿಸಲಾಗಿರುವ ವಿವಿಧ ಸಮಿತಿ ಸದಸ್ಯರು ಸಮ್ಮೇಳನದ ಯಶಸ್ಸಿಗೆ ಕೈಜೋಡಿಸಿ ದುಡಿಯುತ್ತಿದ್ದಾರೆ. ಸಮ್ಮೇಳನಕ್ಕೆ ಆಗಮಿಸುವ ಸಾಹಿತ್ಯಾಸಕ್ತರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದರು.

ಸಮ್ಮೇಳನದ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿ ವಿವಿಧ ಸಮಿತಿಗಳ ಪದಾಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಯಿತು. ಜಿ‌ಎಸ್‌ವಿ‌ಎಸ್ ಅಸೋಸಿಯೇಶನ್ ಅಧ್ಯಕ್ಷ ಡಾ.ಕಾಶೀನಾಥ ಪೈ, ಸಮ್ಮೇಳನದ ಕಾರ್ಯದರ್ಶಿ ಯು. ಎಸ್. ಶೆಣೈ, ಕುಂದಾಪುರ ತಾಲೂಕು ಕಸಾಪ ಕೋಶಾಧಿಕಾರಿ ಕೆ. ಎಸ್. ಮಂಜುನಾಥ, ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ., ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಕಾಲೇಜಿನ ಉಪನ್ಯಾಸಕರು, ವಿವಿಧ ಶಾಲೆಗಳ ಶಿಕ್ಷಕರು, ಮತ್ತಿತರರು ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!