spot_img
Monday, April 20, 2026
spot_img

ತ್ರಾಸಿ: ನಾರಾಯಣಗುರು ಬಿಲ್ಲವ ಸಮಾಜ ಸೇವಾ ಸಂಘದ ವಾರ್ಷಿಕೋತ್ಸವ

ಕುಂದಾಪುರ: ತ್ರಾಸಿಯ ನಾರಾಯಣಗುರು ಬಿಲ್ಲವ ಸಮಾಜ ಸೇವಾ ಸಂಘದ ವಾರ್ಷಿಕೋತ್ಸವ ಸಮಾರಂಭ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಕಾರ್ಯಕ್ರಮ ತ್ರಾಸಿಯ ಅಣ್ಣಪ್ಪಯ್ಯ ಸಭಾಭವನದಲ್ಲಿ ಶನಿವಾರ ಜರಗಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬೈಂದೂರು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಮಾತನಾಡಿ, ವಿದ್ಯೆಯಿಂದ ಸ್ವತಂತ್ರರಾಗುತ್ತಾ ಸಂಘಟನೆಯಿಂದ ಬಲಯುತರಾಗಬೇಕು. ಸಾಮಾಜಿಕ ಸಂತ ನಾರಾಯಣಗುರುಗಳ ತತ್ವಾದರ್ಶಗಳನ್ನು ಸಂಘಟನೆಗಳು ಸಮಾಜದ ಪ್ರತಿ ಮನೆ ಮನೆಗೂ ತಲುಪಿಸುವ ಕೆಲಸ ಮಾಡಬೇಕು ಎಂದರು.

ಉಪ್ಪುಂದದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನ ಮ್ಯಾನೇಜಿಂಗ್ ಟ್ರಸ್ಟಿ ಡಾ.ಗೋವಿಂದ ಬಾಬು ಪೂಜಾರಿ ಸಂಘದ ನಾಮಫಲಕ ಅನಾವರಣಗೊಳಿಸಿ ಶುಭಾಶಂಸನೆಗೈದರು.

ಇದೇ ಸಂದರ್ಭ ಡಾ.ಗೋವಿಂದ ಬಾಬು ಪೂಜಾರಿ, ಪ್ರಗತಿಪರ ಕೃಷಿಕ ಕೃಷ್ಣ ಪೂಜಾರಿ ಅರಾಟೆ, ಹಿರಿಯ ಬಿಲ್ಲವ ಮುಂದಾಳು ಗಣಪ್ಪಯ್ಯ ಬಿಲ್ಲವ ತ್ರಾಸಿ, ಗೋವಾ ಉದ್ಯಮಿ ರವಿ ಡಿ.ಪೂಜಾರಿ, ಬೆಂಗಳೂರಿನ ಉದ್ಯಮಿ ಶಿವ ಆರ್. ಪೂಜಾರಿ, ಸಭಾಭವನದ ಮಾಲೀಕ ಮಹೇಶ ಗಾಣಿಗ, ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಪ್ರತಿಭಾನ್ವಿತ ಬಡ ವಿದ್ಯಾರ್ಥಿಗಳಿಗೆ ಮತ್ತು ಅಶಕ್ತರಿಗೆ ಸಹಾಯಧನ ವಿತರಿಸಲಾಯಿತು. ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಕುಂದಾಪುರ ಶ್ರೀ ನಾರಾಯಣಗುರು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಅಶೋಕ ಪೂಜಾರಿ, ಬೈಂದೂರು ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಗಣೇಶ ಎಲ್.ಪೂಜಾರಿ, ವಕೀಲ ಜೀವನ್ ಪ್ರಕಾಶ್ ತ್ರಾಸಿ, ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕ ವಿನಯ್ ಎಂ.ಕೊರ್ಲಹಳ್ಳಿ, ತ್ರಾಸಿಯ ಉದ್ಯಮಿ ಸುರೇಶ ಪೂಜಾರಿ, ಬಿಲ್ಲವ ಸಂಘ ತ್ರಾಸಿ ಮತ್ತು ಬಿಲ್ಲವ ಮಹಿಳಾ ಘಟಕದ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

ಸಂಘದ ಗೌರವ ಕಾರ್ಯದರ್ಶಿ ಸುರೇಶ ಪೂಜಾರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪೂರ್ಣಿಮಾ ಸುರೇಶ ಪೂಜಾರಿ ಮತ್ತು ಲಕ್ಷ್ಮೀ ವಿಜಯ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಶ್ರೀನಿವಾಸ ಪೂಜಾರಿ ದೇವಳಿ, ರಾಜೇಶ ಪೂಜಾರಿ, ಸಂತೋಷ ಪೂಜಾರಿ ಸಹಕರಿಸಿದರು. ಜಗದೀಶ ಪೂಜಾರಿ ದೇವಳಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!