spot_img
Wednesday, April 22, 2026
spot_img

ಆತ್ರಾಡಿ: ವಿಜಯ ಮಕ್ಕಳಕೂಟ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಂದ ಕುಣಿತ ಭಜನೆ

ಕುಂದಾಪುರ: ದಶಮಾನೋತ್ಸವದ ಹೊಸ್ತಿಲಿನಲ್ಲಿರುವ ವಂಡ್ಸೆ ಗ್ರಾಮದ ಆತ್ರಾಡಿಯ ವಿಜಯ ಮಕ್ಕಳಕೂಟ ಆಂಗ್ಲಮಾಧ್ಯಮ ಶಾಲೆ ಸ್ಥಳೀಯ ಸಂಸ್ಕೃತಿ-ಸಂಸ್ಕಾರವನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ಉದ್ದೇಶದಿಂದ ಕುಣಿತ ಭಜನೆಯ ಬಗ್ಗೆ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ, ವಿದ್ಯಾರ್ಥಿಗಳಿಂದಲೇ ಶಾಲೆಯಲ್ಲಿ ಕುಣಿತ ಭಜನಾ ಕಾರ್ಯಕ್ರಮವನ್ನು ಇತ್ತೀಚೆಗೆ ಆಯೋಜಿಸಿತ್ತು.

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಮಾಜಿ ಧರ್ಮದರ್ಶಿ ವಂಡಬಳ್ಳಿ ಜಯರಾಮ ಶೆಟ್ಟಿ ಭಜನಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ವಿಜಯ ಮಕ್ಕಳಕೂಟ ಆಂಗ್ಲಮಾಧ್ಯಮ ಶಾಲೆಯ ಸಂಚಾಲಕ ಸುಭಾಶ್ಚಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಕ್ಲಬ್ ಅಂಪಾರು ಇದರ ಮಾಜಿ ಅಧ್ಯಕ್ಷ ಕೆ.ಗಣಪಯ್ಯ ಶೆಟ್ಟಿ ಶುಭಶಂಸನೆಗೈದರು. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಡಾ.ಅತುಲ್ ಕುಮಾರ್ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಹಿರಿಯ ಭಜನಾಪಟು ಬಚ್ಚು ಶೆಟ್ಟಿ, ಭಜನಾ ಮಂಡಳಿಯ ವಲಯಾಧ್ಯಕ್ಷ ವಸಂತ ಶೆಟ್ಟಿ ಉಪಸ್ಥಿತರಿದ್ದರು.

ಭಜನಾ ತರಬೇತುದಾರ ಜಯಕರ ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ದೀಪಿಕಾ ಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಂಸ್ಥೆಯ ಸಹಶಿಕ್ಷಕಿ ವಿನಯಶ್ರೀ ಕಾರ್ಯಕ್ರಮ ನಿರ್ವಹಿಸಿ, ಸಹಶಿಕ್ಷಕಿ ಅನಿತಾ ಶೆಟ್ಟಿ ವಂದಿಸಿದರು.

ಕುಂದಾಪುರ ತಾಲೂಕು ಭಜನಾ ಮಂಡಳಿಯ ಅಧ್ಯಕ್ಷರಾದ ಜಯಕರ ಪೂಜಾರಿ ಗುಲ್ವಾಡಿ ಹಾಗೂ ಭಜನಾ ಮಂಡಳಿಯ ವಲಯಾಧ್ಯಕ್ಷರಾದ ವಸಂತ ಶೆಟ್ಟಿ ದೇವಲ್ಕುಂದ ಸಂಸ್ಥೆಯ ೬ರಿಂದ ೯ನೇ ತರಗತಿಯ ಆಸಕ್ತ ೧೦೦ಕ್ಕೂ ಅಧಿಕ ವಿದ್ಯಾರ್ಥಿ/ನಿಯರಿಗೆ ವಿವಿಧ ಭಜನಾ ಕುಣಿತ ಭಜನೆಯ ತರಭೇತಿ ನೀಡಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!