spot_img
Wednesday, April 22, 2026
spot_img

ಬ್ರಹ್ಮಾವರ ತಾಲೂಕು ಆಡಳಿತ ಸೌಧ ನೂತನ ಕಟ್ಟಡ ಉದ್ಘಾಟನೆಗೆ ಸಜ್ಜು

ಬ್ರಹ್ಮಾವರ: ಬ್ರಹ್ಮಾವರ ನಗರದ ಮಧ್ಯಭಾಗದಲ್ಲಿ ನೂತನವಾಗಿ ನಿರ್ಮಿಸಿರುವ ಮಿನಿ ವಿಧಾನಸೌಧವನ್ನು ಮಾರ್ಚ್ ತಿಂಗಳಿನಲ್ಲಿ ಕಂದಾಯ ಸಚಿವ ಆರ್. ಅಶೋಕ್ ಅವರಿಂದ ಉದ್ಘಾಟನೆಗೊಳ್ಳಲಿದೆ ಎಂದು ಉಡುಪಿ ಶಾಸಕ ಕೆ. ರಘುಪತಿ ಭಟ್ ತಿಳಿಸಿದರು.

ಶುಕ್ರವಾರ ಮಿನಿ ವಿಧಾನ ಸೌಧವನ್ನು ಪರಿಶೀಲನೆ ನಡೆಸಿ ಬಳಿಕ ತಾಲೂಕು ಮಟ್ಟದ ಇಲಾಖಾಧಿಕಾರಿಗಳೊಂದಿಗೆ ಸಭೆ ನಡೆಸಿ ಕಾರ್ಯಕ್ರಮದ ಪೂರ್ವ ತಯಾರಿಯ ಬಗ್ಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಬ್ರಹ್ಮಾವರ ತಹಶೀಲ್ದಾರರಾದ ರಾಜಶೇಖರ್ ಮೂರ್ತಿ, ಕರ್ನಾಟಕ ಗೃಹ ಮಂಡಳಿಯ ಅಧಿಕಾರಿ ಸಹನಾ, ಬ್ರಹ್ಮಾವರ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಇಬ್ರಾಹಿಂಪುರ್, ಬ್ರಹ್ಮಾವರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರಂಗನಾಥ್, ತಾಲೂಕು ಆರೋಗ್ಯಾಧಿಕಾರಿ ವಾಸುದೇವ ಉಪಾಧ್ಯಾಯ ಉಪಸ್ಥಿತರಿದ್ದರು.

ಈ ಸಂದರ್ಭ ನಾನಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

3 ಅಂತಸ್ತಿನ 2657 ಚದರ ಮೀಟರ್‌ನ ನೆಲಮಹಡಿಯಲ್ಲಿ ತಹಶೀಲ್ದಾರರ ಕಚೇರಿ, ಕೋರ್ಟ್ ಹಾಲ್, ನಮ್ಮ ಪಡಸಾಲೆ, ಭೂಮಿ ಶಾಖೆ, ಸಕಾಲ, ಚುನಾವಣೆಯ ಸ್ಟ್ರಾಂಗ್ ರೂಮ್, ಉಪ ಖಜಾನೆ ಕಚೇರಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಕಚೇರಿ, ಇವಿ‌ಎಂ ದಾಸ್ತಾನು ಕೊಠಡಿ, ದಾಖಲೆಗಳ ಕೊಠಡಿಗಳು, ಶೌಚಾಲಯಗಳು ಇರಲಿವೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!