spot_img
Wednesday, April 22, 2026
spot_img

ಡಾ.ಎಸ್.ಜಾನಕಿ ರಾಷ್ಟ್ರೀಯ ಪುರಸ್ಕಾರಕ್ಕೆ ಖ್ಯಾತ ಗಾಯಕಿ ಕೆ.ಎಸ್ .ಚಿತ್ರಾ ಆಯ್ಕೆ:
ಡಾ.ಸಿ.ಆರ್. ಚಂದ್ರಶೇಖರ್ ಗೆ ಮನಸ್ಮಿತ ರಾಷ್ಟ್ರೀಯ ಪುರಸ್ಕಾರ ಪ್ರಕಟ

ಕೋಟ: ಕೋಟದ ಮನಸ್ಮಿತ ಫೌಂಡೇಶನ್ ಹಾಗೂ ಗೀತಾನಂದ ಫೌಂಡೇಶನ್ ಮಣೂರು, ಹಾಗೂ ಯುವ ಮೆರಿಡಿಯನ್ ಸಹಭಾಗಿತ್ವದಲ್ಲಿ ನೀಡಲ್ಪಡುವ ಡಾ. ಎಸ್. ಜಾನಕಿ ರಾಷ್ಟ್ರೀಯ ಪ್ರಶಸ್ತಿ 2023 ಹಾಗೂ ಮನಸ್ಮಿತ ರಾಷ್ಟ್ರೀಯ ಪುರಸ್ಕಾರ ಕಾರ್ಯಕ್ರಮ ಇದೇ ಬರುವ ಮಾ.24ಕ್ಕೆ ಯುವ ಮೆರಿಡಿಯನ್ ಒಪೆರಾ ಪಾರ್ಕಲ್ಲಿ ಜರಗಲಿದೆ.
2023ನೇ ಸಾಲಿನ ಎಸ್.ಜಾನಕಿ ರಾಷ್ಟ್ರೀಯ ಪ್ರಶಸ್ತಿಗೆ ಭಾರತದ ಖ್ಯಾತ ಗಾಯಕಿ ಪದ್ಮಭೂಷಣ ಕೆ.ಎಸ್.ಚಿತ್ರಾ ಹಾಗೂ ಮನಸ್ಮಿತ ಪುರಸ್ಕಾರಕ್ಕೆ ವೈದ್ಯಕೀಯಲೋಕದ ಸಂತ,ಸಾಹಿತಿ ಡಾ.ಸಿ.ಆರ್. ಚಂದ್ರಶೇಖರ್ ಆಯ್ಕೆಗೊಳಿಸಲಾಗಿದೆ.

ಎಸ್. ಜಾನಕಿ ರಾಷ್ಟ್ರೀಯ ಪುರಸ್ಕಾರವು ಒಂದು ಲಕ್ಷ ರೂ ನಗದು ಹಾಗೂ ಪ್ರಶಸ್ತಿಯನ್ನು ಒಳಗೊಂಡಿರುತ್ತದೆ. ಹಾಗೂ ಮನಸ್ಮಿತ ರಾಷ್ಟ್ರೀಯ ಪುರಸ್ಕಾರವು ಇಪ್ಪತ್ತೈದು ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿಯನ್ನು ಒಳಗೊಂಡಿರುತ್ತದೆ.

ಆರ್ಯಭಟ ಪ್ರಶಸ್ತಿ ಪುರಸ್ಕೃತ ಗಾಯಕ ಡಾ. ಸತೀಶ್ ಪೂಜಾರಿ ನೇತ್ರತ್ವದಲ್ಲಿ ಕರ್ನಾಟಕದ ಶ್ರೇಷ್ಟ ಗಾಯಕ, ಗಾಯಕಿಯರು ಹಾಗೂ ವಾದ್ಯ ವೃಂದದವರಿಂದ ಅದ್ದೂರಿ ಸಂಗೀತ ಸಂಜೆ ಮಾ.24ಕ್ಕೆ ಯುವ ಮೆರಿಡಿಯನ್ ಒಪೆರಾ ಪಾರ್ಕಲ್ಲಿ ಜರಗಲಿದೆ.ಎಲ್ಲರಿಗೂ ಉಚಿತ ಪ್ರವೇಶ ಇರಲಿದೆ ಎಂದು ಮನಸ್ಮಿತ ಫೌಂಡೇಶನ್ ನಿರ್ದೇಶಕ ಡಾ. ಪ್ರಕಾಶ್ ತೋಳಾರ್ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!