spot_img
Tuesday, July 28, 2026
spot_img

ನಾಡ ಕೋಣ್ಕಿ: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ತಗುಲಿ ಕೃಷಿಕ ಸಾವು

ಕುಂದಾಪುರ, ಮಾ.2: ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ತಗುಲಿ ಕೃಷಿಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾಡಾ ಗ್ರಾಮದ ಕೋಣ್ಕಿ ಎಂಬಲ್ಲಿ ಗುರುವಾರ ನಡೆದಿದೆ.

ಕೋಣ್ಕಿ ಅಂಗಡಿಮನೆ ಭುಜಂಗ ಶೆಟ್ಟಿ (58ವ) ವಿದ್ಯುತ್ ಅಘಾತದಿಂದ ಮೃತಪಟ್ಟ ದುರ್ದೈವಿ.

ಮನೆ ಸಮೀಪದ ಅಡಿಕೆ ತೋಟದಲ್ಲಿ ಅಡಿಕೆ ಕೊಯ್ಲು ಮಾಡುತ್ತಿದ್ದ ಸಂದರ್ಭದಲ್ಲಿ ಕಬ್ಬಿಣದ ಕೊಕ್ಕೆ ಆಕಸ್ಮಿಕವಾಗಿ ಎಚ್.ಟಿ ವಿದ್ಯುತ್ ತಂತಿಗೆ ತಗುಲಿದೆ. ಅದರಿಂದ ವಿದ್ಯುತ್ ಹರಿದು ಸ್ಥಳದಲ್ಲೇ ಅವರು ಧಾರುಣವಾಗಿ ಸಾವನ್ನಪ್ಪಿದ್ದಾರೆ.

ಗಂಗೊಳ್ಳಿ ಪೊಲೀಸ್ ಠಾಣೆ ಪಿ‌ಎಸ್‌ಐ ವಿನಯ್ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!