spot_img
Thursday, April 23, 2026
spot_img

ಹೊಸೂರು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡ ‘ಕ್ಷೀರ ಸಾಗರ’ ಉದ್ಘಾಟನೆ

ಕುಂದಾಪುರ: ಹೊಸೂರು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡ ಕ್ಷೀರ ಸಾಗರ ಉದ್ಘಾಟನೆ ಇತ್ತೀಚೆಗೆ ಜರುಗಿತು.

ದ.ಕ ಹಾಲು ಒಕ್ಕೂಟದ ಅಧ್ಯಕ್ಷರಾದ ಕೆ.ಪಿ. ಸುಚರಿತ ಶೆಟ್ಟಿ ನೂತನ ಕಟ್ಟಡ ಕ್ಷೀರ ಸಾಗರ ವನ್ನು ಲೋಕಾರ್ಪಣೆ ಮಾಡಿ ಸಂಘದ ಅಭಿವೃದ್ಧಿಯನ್ನು ಶ್ಲಾಘಿಸುತ್ತಾ ಒಕ್ಕೂಟದಿಂದ ಎಲ್ಲ ರೀತಿಯ ಸೌಲಭ್ಯಗಳನ್ನು ಸಂಘಕ್ಕೆ ಒದಗಿಸಿಕೊಡುವುದಾಗಿ ತಿಳಿಸಿ, ಒಕ್ಕೂಟದಿಂದ ಕಟ್ಟಡಕ್ಕೆ ರೂ.3 ಲಕ್ಷದ ಚೆಕ್ ಹಸ್ತಾಂತರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೊಸೂರು ಮಾರಣಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಅಧ್ಯಕ್ಷರಾದ ವನಜ ಎ. ಶೆಟ್ಟಿ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ದ.ಕ. ಹಾಲು ಒಕ್ಕೂಟ ನಿಕಟಪೂರ್ವ ಅಧ್ಯಕ್ಷರಾದ ರವಿರಾಜ್ ಹೆಗ್ಡೆ ಮಾತನಾಡಿ, ಸಂಘವು 25 ಲೀಟರ್‌ನಿಂದ 1400 ಲೀಟರ್ ಸಂಗ್ರಹಣೆಗೆ ಬಂದಿರುವುದರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ದ.ಕ. ಹಾಲು ಒಕ್ಕೂಟ ನಿಕಟಪೂರ್ವ ಉಪಾಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿಯವರು ರೈತರು ಸಂಘಟಿತವಾಗಿ ಹೋರಾಡಿದರೆ ಭವಿಷ್ಯ ಉಜ್ಜಲವಾಗಿದೆ ಎಂದರು.

ಮುಖ್ಯ ಅತಿಥಿಗಳಾಗಿ ದ.ಕ ಹಾಲು ಒಕ್ಕೂಟದ ನಿರ್ದೇಶಕರುಗಳಾದ ಸುಧಾಕರ ಶೆಟ್ಟಿ ಮುಡಾರು, ಸ್ಮಿತಾ ಆರ್. ಶೆಟ್ಟಿ ಸೂಡ, ಕಮಲಾಕ್ಷ ಹೆಬ್ಬಾರ್, ದ.ಕ. ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಅಶೋಕ್, ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ಯೋಜನಾಧಿಕಾರಿ ವಿನಾಯಕ ಪೈ, ಗ್ರಾಮ ಪಂಚಾಯಿತಿ ಅಧ್ಯಕ್ಷ ಅಮೀನ್ ಶೆಟ್ಟಿ, ನಿವೇಶನ ದಾನಿಗಳಾದ ಶ್ರೀಧರ ಉಡುಪ, ಗ್ರಾ.ಪಂ ಸದಸ್ಯ ಅಶೋಕ್ ಶೆಟ್ಟಿ, ಕೊಲ್ಲೂರು ದೇವಳದ ವ್ಯವಸ್ಥಾಪನ ಸಮಿತಿ ಸದಸ್ಯ ಡಾ. ಅತುಲ್ ಕುಮಾರ್ ಶೆಟ್ಟಿ, ಕೊಲ್ಲೂರು ವ್ಯವಸ್ಥಾಪನ ಸಮಿತಿ ಮಾಜಿ ಸದಸ್ಯ ವಂಡಬಳ್ಳಿ ಜಯರಾಮ ಶೆಟ್ಟಿ, ಮೂಕಾಂಬಿಕಾ ಪ್ರೌಢಶಾಲೆ ಮುಖ್ಯೋಪಾಧ್ಯಾಯರಾದ ಚಂದ್ರಶೇಖರ ಶೆಟ್ಟಿ, ವಂಡ್ಸೆ ಸಿ. ಎ ಬ್ಯಾಂಕ್ ಜಗನ್ನಾಥ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯ ಅರುಣ್ ಕುಮಾರ್ ಶೆಟ್ಟಿ, ದ.ಕ. ಹಾಲು ಒಕ್ಕೂಟದ ಉಪವ್ಯವಸ್ಥಾಪಕ ಡಾ| ಮಾಧವ್ ಐತಾಳ್ ಭಾಗವಹಿಸಿದ್ದರು.

ಸಂಘದ ಕಾರ್ಯದರ್ಶಿ ಶ್ರೇಯಾ ಶೆಟ್ಟಿ, ವರದಿ ವಾಚಿಸಿದರು, ಸುಧಾಕರ ಶೆಟ್ಟಿ ಸ್ವಾಗತಿಸಿ, ರಥರಾಣಿ ಶೆಟ್ಟಿ ವಂದಿಸಿದರು. ದ.ಕ. ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ವಾಸುದೇವ ಪುರಾಣಕ ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!