spot_img
Thursday, April 23, 2026
spot_img

ಬೀಜಾಡಿ: ನಾಗಮಂಡಲೋತ್ಸವ ಧಾಮಿ೯ಕ ಕಾರ್ಯಕ್ರಮ ಆರಂಭ

ಕುಂದಾಪುರ: ಶ್ರೀ ವೆಂಕಟಾಚಲಯ್ಯ ಅವಧೂತರ ಆಶೀವಾ೯ದದೊಂದಿಗೆ ಬೀಜಾಡಿ ಶ್ರೀಮತಿ ಜಾನಕಿ ಮತ್ತು ರಾಮಚಂದ್ರ ಹಾಗೂ ಕುಟುಂಬಿಕರ ಮೂಲನಾಗಬನದಲ್ಲಿ ಮಾ.13ರಂದು ಕುಂದಾಪುರ ತಾಲೂಕು ಬೀಜಾಡಿ ಗ್ರಾಮದ ಮೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಮೀಪದ ಕೆಳಬನದಲ್ಲಿ ಜರುಗಲಿರುವ ಏಕಪವಿತ್ರ ನಾಗಮಂಡಲೋತ್ಸವದ ಧಾಮಿ೯ಕ ಕಾರ್ಯಕ್ರಮಗಳು ಭಾನುವಾರದಿಂದ ಆರಂಭಗೊಂಡವು. 

 ವೇದಮೂತಿ೯ ಶ್ರೀ ಮಧುಸೂಧನ ಬಾಯಿರಿ ಮಣೂರು ಇವರ ನೇತೃತ್ವದಲ್ಲಿ ಪ್ರಾರ್ಥನಾ ಫಲನ್ಯಾಸ ಪೂರ್ವಕ ಸಾಮೂಹಿಕ ಪ್ರಾರ್ಥನೆ, ಗಣೇಶ ಪೂಜೆ, ಸ್ವಸ್ತಿ ಪುಣ್ಯಾಹ ವಾಚನ, ಋತ್ವಿಗ್ವರಣೀ ಗಣಯಾಗ, ಪವಮಾನ ಹೋಮ, ಆಯುತ ಸಂಖ್ಯಾತಿಲ ಹೋಮ, ಸಂಜೆ ಶ್ರೀ ದೇವರ ಸನ್ನಿಧಿಯಲ್ಲಿ ಆಶ್ಲೇಷ ಬಲಿ, ವಾಸ್ತು ರಾಕ್ಷೊಘ್ನ ಹೋಮ, ದಿಗ್ಬಲಿ ಕಾರ್ಯಕ್ರಮಗಳು ನಡೆಯಿತು.

 ಸೇವಾಕರ್ತರಾದ ರಾಮಚಂದ್ರ ಮತ್ತು ಕುಟುಂಬಿಕರು, ನಾಗಮಂಡಲೋತ್ಸವದ ವಿವಿಧ ಸಮಿತಿ ಪದಾಧಿಕಾರಿಗಳು, ಸ್ಥಳೀಯ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು, ಮತ್ತಿತರರು ಉಪಸ್ಥಿತರಿದ್ದರು.

ಮಾ.13ರಂದು ಮಧ್ಯಾಹ್ನ ಗಂಟೆ 12.30ಕ್ಕೆ ಮಹಾ ಅನ್ನಸಂತರ್ಪಣೆ, ಸಂಜೆ 4 ಗಂಟೆಗೆ ಧಾಮಿ೯ಕ ಸಭಾ ಕಾರ್ಯಕ್ರಮ, ರಾತ್ರಿ 7ಕ್ಕೆ ನಾಗನಿಗೆ ಹಾಲಿಟ್ಟು ಸೇವೆ, ಮಂಡಲ ಪೂಜೆ, ಏಕಪವಿತ್ರ ನಾಗಮಂಡಲೋತ್ಸವ ನಂತರ ಮಹಾಪ್ರಸಾದದೊಂದಿಗೆ ಮಹಾಮಂತ್ರಾಕ್ಷತೆ ವಿತರಣೆಯಾಗಲಿದೆ. ಸಾಂಸ್ಕತಿಕ ಕಾರ್ಯಕ್ರಮದ ಅಂಗವಾಗಿ ಕೋಟೇಶ್ವರದ ಶ್ರೀ ಕೋಟಿಲಿಂಗೇಶ್ವರ ಕಲಾಬಳಗದ ವತಿಯಿಂದ ಮಕ್ಕಳ ಯಕ್ಷಗಾನ ಕಂಸ ದಿಗ್ವಿಜಯ ಪ್ರದರ್ಶನಗೊಳ್ಳಲಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!