Saturday, April 20, 2024

ಕುಂದಾಪುರ ತಾಲೂಕು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದಿಂದ ಪ್ರತಿಭಟನಾ ಧರಣಿ

ಕುಂದಾಪುರ ತಾಲೂಕು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ (ಸಿಡಬ್ಲ್ಯು‌ಎಫ್‌ಐ-ಸಿ‌ಐಟಿಯು) ನೇತೃತ್ವದಲ್ಲಿ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗಾಗಿ ಶೈಕ್ಷಣಿಕ ಧನಸಹಾಯ ಪಡೆಯಲು ಕುಟುಂಬ ಐಡಿ ಕಡ್ಡಾಯಗೊಳಿಸಿರುವುದನ್ನು ಹಿಂಪಡೆಯಲು- ನಿಯಮಾವಳಿ ಸರಳಗೊಳಿಸಲು ಆಗ್ರಹಿಸಿ ಕುಂದಾಪುರ ಶಾಸ್ತ್ರೀ ಸರ್ಕಲ್ ಬಳಿ ಪ್ರತಿಭಟನಾ ಧರಣಿ ನಡೆಯಿತು.

ಕುಂದಾಪುರ ತಾಲೂಕು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷ ಸುರೇಶ ಕಲ್ಲಾಗರ ಪ್ರತಿಭಟನೆಯಲ್ಲಿ ಮಾತನಾಡಿ, ಕಾರ್ಮಿಕರ ಕಲ್ಯಾಣ ಮಂಡಳಿ ಕಾಂಗ್ರೆಸ್-ಬಿಜೆಪಿ ಸರ್ಕಾರಗಳು ರಚನೆ ಮಾಡಿದ್ದಲ್ಲ. ಇದು ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ರಚನೆಯಾಗಿರುವಂತಹದ್ದು. ಈಗ ಆಡಳಿತ ಬಿಜೆಪಿ ಸರ್ಕಾರ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿನ ೧೨ ಸಾವಿರ ಕೋಟಿಯ ಮೇಲೆ ಕಣ್ಣಿಟ್ಟಿದೆ. ಕಾರ್ಮಿಕ ಮಂಡಳಿಯ ಹಣ ಯಾವುದೇ ಕಾರಣಕ್ಕೂ ದುರ್ಬಳಕೆಯಾಗಬಾರದು ಅದು ಕಾರ್ಮಿಕರ ಶ್ರೇಯೋಭಿವೃದ್ದಿಗೆ ಬಳಕೆಯಾಗಬೇಕು ಎಂದು ಹೇಳಿದರು.

ಕಟ್ಟಡ ನಿರ್ಮಾಣ ಕಾರ್ಮಿಕರು ಈ ದೇಶವನ್ನು ಕಟ್ಟುವವರು ಎಂದು ಸುಪ್ರೀಂಕೋರ್ಟ್ ಹೇಳಿದೆ. ನಿರ್ಮಾಣ ಕಾರ್ಮಿಕರ ಸಲುವಾಗಿ ಇರುವ ಹಣ ರಾಜಕೀಯ ಉದ್ದೇಶಗಳಿಗೆ ಬಳಕೆ ಮಾಡಬಾರದು ಎಂದೂ ಸುಪ್ರೀಂಕೋರ್ಟ್ ಸ್ಪಷ್ಟ ಪಡಿಸಿದೆ. ಸಾಮಾಜಿಕ ಬದ್ದತೆಯಿಂದ ಸರ್ಕಾರ ಕಾರ್ಮಿಕರ ಹಿತದೃಷ್ಟಿಗೆ ಒತ್ತು ನೀಡಬೇಕು ಎಂದರು.

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ೨೦೨೨-೨೩ ನೇ ಸಾಲಿನ ಶೈಕ್ಷಣಿಕ ಧನಸಹಾಯ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದೆ. ಮಂಡಳಿ ಕಳೆದ ಹಲವು ವರ್ಷಗಳಿಂದ ಅರ್ಜಿ ಸಲ್ಲಿಸುವ ವಿಧಾನಗಳನ್ನು ಹಲವು ಬಾರಿ ನಿಯಮಾವಳಿ ಬದಲಾಯಿಸುತ್ತಾ ಬಂದಿರುತ್ತದೆ. ಹೀಗೆ ದಿಡೀರ್ ಬದಲಾವಣೆ ಮಾಡುವಾಗ ನೋಂದಾಯಿತ ಕೇಂದ್ರ ಕಾರ್ಮಿಕ ಸಂಘಟನೆಗಳಿಗೆ ಯಾವುದೇ ಮಾಹಿತಿ ನೀಡುವುದೇ ಕಡೆಗಣಿಸಲಾಗುತ್ತಿದೆ. ಈ ಬಾರಿಯೂ ಶೈಕ್ಷಣಿಕ ಧನಸಹಾಯ ಅರ್ಜಿ ಸಲ್ಲಿಸಲು ಹಲವು ಬದಲಾವಣೆ ಮಾಡಿರುವುದು ಕಟ್ಟಡ ಕಾರ್ಮಿಕರ ಮಕ್ಕಳನ್ನು ಶೈಕ್ಷಣಿಕ ಧನಸಹಾಯದಿಂದ ವಂಚಿಸುವ ಕ್ರಮವಾಗಿದೆ. ಈ ನಿಯಮಗಳನ್ನು ಮಂಡಳಿ ಪರಿಶೀಲಿಸಿ ಸರಳಗೊಳಿಸಲು ಕ್ರಮವಹಿಸಿ ಶೈಕ್ಷಣಿಕ ಧನಸಹಾಯ ಪಡೆಯಲು ಅನುಕೂಲ ಮಾಡಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕುಂದಾಪುರ ತಾಲೂಕು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಗೌರವಾಧ್ಯಕ್ಷ ಚಿಕ್ಕ ಮೊಗವೀರ, ಪ್ರಧಾನ ಕಾರ್ಯದರ್ಶಿ ಸಂತೋಷ ಹೆಮ್ಮಾಡಿ, ಕಾರ್ಮಿಕ ಮುಖಂಡರಾದ ಕೆ.ಶಂಕರ್ ಮೊದಲಾದವರು ಭಾಗವಹಿಸಿದ್ದರು.

Related Articles

Stay Connected

21,961FansLike
3,912FollowersFollow
21,600SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!