spot_img
Thursday, April 23, 2026
spot_img

ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ನಾಗರಾಜ್ ರಾಯಪ್ಪನಮಠ, ಕಾರ್ಯದರ್ಶಿಯಾಗಿ ಗಣೇಶ ಬೀಜಾಡಿ ಆಯ್ಕೆ

ಕುಂದಾಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಉಡುಪಿ ಜಿಲ್ಲಾ ಸಂಘದ ಅಧೀನ ಸಂಸ್ಥೆಯಾದ ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ (ರಿ) ಇದರ ನೂತನ ತಾಲೂಕು ಅಧ್ಯಕ್ಷರಾಗಿ ನಾಗರಾಜ್ ರಾಯಪ್ಪನಮಠ ಹಾಗೂ ಕಾರ್ಯದರ್ಶಿಯಾಗಿ ಗಣೇಶ್ ಬೀಜಾಡಿ ಆಯ್ಕೆಯಾಗಿದ್ದಾರೆ.

ಮಂಗಳವಾರ ಕುಂದಾಪುರದ ಅಂಬೇಡ್ಕರ್ ಭವನದಲ್ಲಿ ಜರುಗಿದ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಆಯ್ಕೆ ಮಾಡಲಾಗಿದೆ. ಅಧ್ಯಕ್ಷ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ ನಾಗರಾಜ ರಾಯಪ್ಪನಮಠ ಆಯ್ಕೆಯಾದರು.

ಕಾರ್ಯದರ್ಶಿಯಾಗಿ ಗಣೇಶ್ ಬೀಜಾಡಿ ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಚಂದ್ರಮ ತಲ್ಲೂರು, ರಾಘವೇಂದ್ರ ಪೈ ಗಂಗೊಳ್ಳಿ, ಜೊತೆ ಕಾರ್ಯದರ್ಶಿಗಳಾಗಿ ಯೋಗೀಶ ಕುಂಭಾಶಿ ಹಾಗೂ ರಾಘವೇಂದ್ರ ಬಳ್ಕೂರು, ಕೋಶಾಧಿಕಾರಿಯಾಗಿ ಲೋಕೇಶ್ ಆಚಾರ್ಯ ತೆಕ್ಕಟ್ಟೆ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಉದಯ ಕುಮಾರ್, ಶಶಿಧರ ಹೆಮ್ಮಾಡಿ, ಮಂಜುನಾಥ ಶೆಣೈ ಜನ್ನಾಡಿ, ಸತೀಶ್ ಆಚಾರ್ಯ ಉಳ್ಳೂರು, ವಿನಯ್ ಪಾಯಸ್, ರಾಮಕೃಷ್ಣ ಹೇರ್ಳೆ, ಶ್ರೀಕಾಂತ ಹೆಮ್ಮಾಡಿ, ಸಂತೋಷ್ ಕುಂದೇಶ್ವರ ಆಯ್ಕೆಯಾಗಿದ್ದಾರೆ.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷರಾದ ರಾಜೇಶ್ ಶೆಟ್ಟಿ ಅಲೆವೂರು ಚುನಾವಣೆ ಪ್ರಕ್ರಿಯೆ ನಡೆಸಿಕೊಟ್ಟರು.

ನಿರ್ಗಮಿತ ಅಧ್ಯಕ್ಷ ಶಶಿಧರ ಹೆಮ್ಮಾಡಿ ಅವರು ನೂತನ ಅಧ್ಯಕ್ಷ ನಾಗರಾಜ ರಾಯಪ್ಪನಮಠ ಅವರಿಗೆ ಅಧಿಕಾರ ಹಸ್ತಾಂತರಿಸಿ, ಶುಭಹಾರೈಸಿದರು.

ಜಿಲ್ಲಾ ಸಂಘದ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ಜಿಲ್ಲಾ ಸಂಘದ ರಜತ ಮಹೋತ್ಸವ ಸಮಿತಿ ಕಾರ್ಯದರ್ಶಿ ಜಯಕರ ಸುವರ್ಣ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!