spot_img
Friday, April 24, 2026
spot_img

ಕರ್ಕಿಯಲ್ಲಿ ಕೊಠಾರಿ ಸಮುದಾಯ ಭವನ ಉದ್ಘಾಟನೆ


ಕುಂದಾಪುರ, ಮಾ. 24: ಕೊಠಾರಿ ಸಮುದಾಯ ಹಿಂದಿನಿಂದಲೂ ನಂಬಿಕೆಗೆ ಅರ್ಹರಾದ ಒಂದು ಸಮುದಾಯವಾಗಿದೆ. ಕಡಿಮೆ ಜನರಿರುವ ಜಾತಿಗಳು, ಪ್ರಬಲ ಸಮುದಾಯದವರ ಎದುರು ಸ್ಪರ್ಧೆ ಇಂದು ಮಾಡಬೇಕಿದ್ದು, ಕೊಠಾರಿ ಸಮುದಾಯವೂ ಅದರಲ್ಲಿ ಒಂದು. ಈ ತನಕ ಪ್ರಯೋಜನ ಪಡೆಯದ ಜಾತಿಗಳಿಗೆ ಶಿಕ್ಷಣ, ಉದ್ಯೋಗದ ಮೀಸಲಾತಿಯಲ್ಲಿ ಆದ್ಯತೆ ನೀಡುವ ನಿಟ್ಟಿನಲ್ಲಿ ಚಿಂತನೆ ಮಾಡಲಾಗುತ್ತಿದೆ. ಕೊಠಾರಿ ಸಮುದಾಯದ ಮಕ್ಕಳ ಶಿಕ್ಷಣ ಹಾಗೂ ಉದ್ಯೋಗಕ್ಕೆ ಸೂಕ್ತ ಮೀಸಲಾತಿಯ ಪ್ರಯೋಜನವಿದ್ದು, ಆ ನಿಟ್ಟಿನಲ್ಲಿ ಬೇಡಿಕೆ ಇಟ್ಟು ಅವಶ್ಯಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದರು.

ಉಡುಪಿ ಜಿಲ್ಲಾ ಕೊಠಾರಿ ಸೇವಾ ಸಂಘ ಕುಂದಾಪುರ ಇದರ ವತಿಯಿಂದ ಕುಂದಾಪುರ ತಾಲೂಕು ಕನ್ಯಾನ ಗ್ರಾಮದ ಕರ್ಕಿಯಲ್ಲಿ ನೂತನವಾಗಿ ನಿರ್ಮಿಸಿರುವ ಕೊಠಾರಿ ಸಮುದಾಯ ಭವನ (ಶ್ರೀ ಚೌಡೇಶ್ವರಿ ಕನ್ವೇನ್ಶನ್ ಹಾಲ್)ವನ್ನು ಉದ್ಘಾಟಿಸಿ ಮಾತನಾಡಿದರು.

ಶ್ರೀ ಸೀತಾರಾಮಕ ವಿವಿಧೋದ್ದೇಶ ಸಹಕಾರಿ ಸಂಘದ ನೂತನ ಕಟ್ಟಡವನ್ನು ಬೈಂದೂರು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಉದ್ಘಾಟಿಸಿದರು.

ಮಾಜಿ ಶಾಸಕ, ಧಾರ್ಮಿಕ ಮುಂದಾಳು ಬಿ. ಅಪ್ಪಣ್ಣ ಹೆಗ್ಡೆ ಸಭಾಭವನವನ್ನು, ಕಮಲಶಿಲೆ ದೇಗುಲದ ಅನುವಂಶೀಯ ಆಡಳಿತ ಮೊಕ್ತೇಸರ ಸಚ್ಚಿದಾನಂದ ಚಾತ್ರ ಪಾಕಶಾಲೆಯನ್ನು ಉದ್ಘಾಟಿಸಿ, ಶುಭಹಾರೈಸಿದರು.

ಉಡುಪಿ ಜಿಲ್ಲಾ ಕೊಠಾರಿ ಸೇವಾ ಸಂಘದ ಅಧ್ಯಕ್ಷ ಸೀತಾರಾಮ ಕೊಠಾರಿ ಅಧ್ಯಕ್ಷತೆ ವಹಿಸಿದ್ದರು. ಎಸ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ರಾಜು ಪೂಜಾರಿ, ಕೊಲ್ಲೂರು ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆರಾಡಿ ಚಂದ್ರಶೇಖರ್ ಶೆಟ್ಟಿ, ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಡಾ| ಗೋವಿಂದ ಬಾಬು ಪೂಜಾರಿ, ಸೌಕೂರು ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಂಜಯ್ಯ ಶೆಟ್ಟಿ ಸಬ್ಲಾಡಿ, ವಿಟ್ಲ ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಹಟ್ಟಿಯಂಗಡಿ ದೇಗುಲದ ಧರ್ಮದರ್ಶಿ ಬಾಲಚಂದ್ರ ಭಟ್, ಕೂಡ್ಲು ಬಾಡಬೆಟ್ಟು ದೇಗುಲದ ಮೊಕ್ತೇಸರ ಜಯರಾಮ, ಕೊಠಾರಿ ವೇಲ್‌ಫೇರ್ ಅಸೋಸಿಯೇಶನ್ ಅಧ್ಯಕ್ಷ ನಾಗರಾಜ ಕೊಠಾರಿ ಆಜ್ರಿ, ಗ್ರಾಮಾಭಿವೃದ್ಧಿ ಯೋಜನೆ ಯೋಜನಾಧಿಕಾರಿ ಪಾರ್ವತಿ, ಕರ್ಕುಂಜೆ ವ್ಯ. ಸೇ. ಸ. ಸಂಘದ ಅಧ್ಯಕ್ಷ ಬಾಂಡ್ಯ ಸುಧಾಕರ ಶೆಟ್ಟಿ, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಉದ್ಯಮಿಗಳಾದ ರಾಜು ಕೊಠಾರಿ ಆಜ್ರಿ, ಶಂಕರ ಕೊಠಾರಿ ಉಳ್ತೂರು, ವಾಸುದೇವ ಯಡಿಯಾಳ, ಹಟ್ಟಿಯಂಗಡಿ ಗ್ರಾ.ಪಂ. ಉಪಾಧ್ಯಕ್ಷ ಪ್ರತಾಪ್ ಕುಮಾರ್ ಶೆಟ್ಟಿ, ದ.ಕ. ಕೊಟ್ಟಾರಿ ಸಂಘದ ಅಧ್ಯಕ್ಷ ಬಾಲಕೃಷ್ಣ ಕೊಟ್ಟಾರಿ, ಕೊಠಾರಿ ಮನೆ ಪಾಂಗಾಳದ ಉದಯ ಕುಮಾರ್ ಶೆಟ್ಟಿ, ಚಂದ್ರಕಾಂತ ಶೆಟ್ಟಿ ಪಾಂಗಾಳ, ಕೊಟ್ಟಾರಿ ದ.ಕ. ಯುವ ಸಂಘದ ಅಧ್ಯಕ್ಷ ಚೇತನ್ ಕುಮಾರ್, ಅಪ್ಪು ಕೊಠಾರಿ, ಬಾಬು ಕೊಠಾರಿ, ಯುವ ಸಂಘಟನೆ ನಾಗೇಶ ಕೊಠಾರಿ ಮೊಳಹಳ್ಳಿ, ಮಹಿಳಾ ಸಂಘಟನೆ ಅಧ್ಯಕ್ಷೆ ಜಯಲಕ್ಷ್ಮಿ ಕೊಠಾರಿ ತಲ್ಲೂರು ಮತ್ತಿತರರು ಉಪಸ್ಥಿತರಿದ್ದರು.

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ದಾನಿ ಕೃಷ್ಣಮೂರ್ತಿ ಮಂಜ, ಹಟ್ಟಿಯಂಗಡಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ರಾಜೀವ ಶೆಟ್ಟಿ ಅವರನ್ನು ಸಮ್ಮಾನಿಸಲಾಯಿತು.

ಕುಂದಾಪುರದ ಸೀತಾರಾಮ ವಿವಿದ್ದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ನಾಗಪ್ಪ ಕೊಠಾರಿ ಕೆರಾಡಿ ಪ್ರಸ್ತಾವಿಸಿ, ಸ್ವಾಗತಿಸಿದರು. ಸಂತೋಷ ಕೊಠಾರಿ ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!