Sunday, September 8, 2024

ಆತ್ರಾಡಿ: ಮಾತೃಭೂಮಿ ಯುವ ಸಂಘಟನೆಯ ವಾರ್ಷಿಕೋತ್ಸವ-ಯುವ ಸಂಗಮ

ಕುಂದಾಪುರ: ಸಂಘಟನೆಗಳು ಸಮಾಜಮುಖಿಯಾಗಿ ತೊಡಗಿಸಿಕೊಂಡಾಗ ಬದಲಾವಣೆಗೆ ಸಾಧ್ಯವಾಗುತ್ತದೆ. ಸ್ಥಳೀಯ ಪ್ರದೇಶದ ನೋವು-ನಲಿವುಗಳಿಗೆ ಸ್ಪಂದಿಸುವ ಕೆಲಸವನ್ನು ಅಲ್ಲಿನ ಸಂಘಟನೆಗಳು ಮಾಡಬೇಕು. ಅರಿವು, ಮಾರ್ಗದರ್ಶನ, ಪ್ರತಿಭೆಗಳಿಗೆ ಉತ್ತೇಜನ ನೀಡುವುದರ ಜೊತೆಗೆ ಸಂಘಟಿತವಾದ ಒಗ್ಗಟ್ಟನ್ನು ಹೊಂದಿರಬೇಕು ಎಂದು ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಹೇಳಿದರು.

ವಂಡ್ಸೆ ಆತ್ರಾಡಿಯ ಮಾತೃಭೂಮಿ ಯುವ ಸಂಘಟನೆ ಆತ್ರಾಡಿ-ವಂಡ್ಸೆ ಇದರ ವಾರ್ಷಿಕೋತ್ಸವ ಪ್ರಯುಕ್ತ ಯುವ ಸಂಗಮ-2023 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಾತೃಭೂಮಿ ಯುವ ಸಂಘಟನೆಯ ಅಧ್ಯಕ್ಷ ಪ್ರಸಾದ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು, ಈ ಸಂದರ್ಭದಲ್ಲಿ ಆತ್ರಾಡಿ ಸ.ಕಿ.ಪ್ರಾ.ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ತೇಜಪ್ಪ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಕ್ರೀಡಾಕೂಟದಲ್ಲಿ ವಿಜೇತರಿಗೆ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಉದಯಕುಮಾರ್ ಶೆಟ್ಟಿ ಬಹುಮಾನ ವಿತರಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಎಂ.ಎಸ್.ಮಂಜ ಚಾರಿಟೆಬಲ್ ಟ್ರಸ್ಟ್ ಕಾರ್ಯದರ್ಶಿ ನಾಗರಾಜ ಮಂಜರು ಮಾರಣಕಟ್ಟೆ, ತಾ.ಪಂ. ಮಾಜಿ ಸದಸ್ಯರಾದ ಉದಯ ಜಿ.ಪೂಜಾರಿ, ವಂಡ್ಸೆ ಸಿ.ಎ ಬ್ಯಾಂಕ್ ನಿರ್ದೇಶಕ ಸಂಜೀವ ಪೂಜಾರಿ ವಂಡ್ಸೆ, ಶ್ರೀ ಕಾಳಿಕಾಂಬಾ ದೇವಸ್ಥಾನ ಉಪ್ರಳ್ಳಿ ಆಡಳಿತ ಮೊಕ್ತೇಸರರಾದ ಚಂದ್ರಯ್ಯ ಆಚಾರ್ಯ ಕಳಿ, ಅರಣ್ಯ ಇಲಾಖಯ ಉಡುಪಿ ಸ್ಕ್ವಾಡ್ ವಿಭಾಗದ ಉಪವಲಯ ಅರಣ್ಯಾಧಿಕಾರಿ ಕರುಣಾಕರ ಜೆ.ಆಚಾರ್ಯ, ರಾಧಾ ದೇವಾಡಿಗ ಅಡಿಕೆಕೊಡ್ಲು, ಬ್ರಹ್ಮಲಿಂಗೇಶ್ವರ ದೇವಸ್ಥಾನ ಆತ್ರಾಡಿ ಇದರ ಆಡಳಿತ ಮೊಕ್ತೇಸರ ಡಾ| ಕುಸುಮಾಕರ ಶೆಟ್ಟಿ, ವಂಡ್ಸೆ ಗ್ರಾ.ಪಂ. ಸದಸ್ಯ ಗೋವರ್ಧನ್ ಜೋಗಿ, ವಂಡ್ಸೆ ಗ್ರಾ.ಪಂ. ಮಾಜಿ ಸದಸ್ಯ ಗುಂಡು ಪೂಜಾರಿ ಹರವರಿ, ಮಾತೃಭೂಮಿ ಯುವ ಸಂಘಟನೆಯ ಗೌರವಾಧ್ಯಕ್ಷರಾದ ಶ್ರೀನಿವಾಸ ಪೂಜಾರಿ ಕಲ್ಮಾಡಿ, ಕಾರ್ಯದರ್ಶಿ ಚಂದ್ರ ಕೊಲ್ಲಣ್ಕೆ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ 2021-22ನೇ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ಶ್ವೇತಾ ಹೆಸಿನಗದ್ದೆ ಅವರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಸುರೇಶ ಮೊಗವೀರ ಆತ್ರಾಡಿ ಇವರಿಗೆ ವೈದ್ಯಕೀಯ ನೆರವು ನೀಡಲಾಯಿತು.

ದಿವ್ಯಾಶ್ರೀ ಪ್ರಾರ್ಥಿಸಿದರು. ಮಾತೃಭೂಮಿ ಯುವ ಸಂಘಟನೆ ಮಾಜಿ ಅಧ್ಯಕ್ಷ ಸಂದೇಶ ಶೆಟ್ಟಿ ಅಡಿಕೆಕೊಡ್ಲು ಸ್ವಾಗತಿಸಿದರು. ಮಾತೃಭೂಮಿ ಯುವ ಸಂಘಟನೆಯ ಗೌರವ ಸಲಹೆಗಾರರಾದ ಉದಯ ಕುಮಾರ್ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿಠಲ ಆಚಾರ್ಯ ಸನ್ಮಾನ ಪತ್ರ ವಾಚಿಸಿದರು. ಮಾಜಿ ಕಾರ್ಯದರ್ಶಿ ರಾಜು ಪೂಜಾರಿ ಅರೆಕಲ್ಲುಮನೆ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಉದಯ ಅಂಗಡಿಮನೆ ಹೊಸ ಸದಸ್ಯರ ಪಟ್ಟಿ ವಾಚಿಸಿದರು. ಶಂಕರ ಆಚಾರ್ಯ ಸಾಧಕ ವಿದ್ಯಾರ್ಥಿನಿಯನ್ನು ಪರಿಚಯಿಸಿದರು. ಸಂಘಟನೆಯ ಮಹಾಪೋಷಕರು, ಪ್ರೋತ್ಸಾಹಕರನ್ನು ಗೌರವಿಸಲಾಯಿತು. ಶಂಕರ ಆಚಾರ್ಯ ಆತ್ರಾಡಿ ವಂದಿಸಿದರು. ಸಂಘಟನೆಯ ಸ್ಥಾಪಕ ಅಧ್ಯಕ್ಷ ಗಣೇಶ ದೇವಾಡಿಗ ಅಡಿಕೆಕೊಡ್ಲು ಕಾರ್ಯಕ್ರಮ ನಿರ್ವಹಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಅರೆಹೊಳೆ ಪ್ರತಿಷ್ಠಾನದ ನಂದಗೋಕುಲ ಸಾಂಸ್ಕೃತಿಕ ತಂಡ ಮಂಗಳೂರು ಇವರಿಂದ ‘ನೃತ್ಯ ವೈಭವ’, ಪರಮಪದ್ಮ ಕಲಾವಿದರು ಮಂಗಳೂರು ಇವರಿಂದ ‘ಶಿವಪ್ರಸಾದ ಬೊಬ್ಬರ್ಯ’ ನಾಟಕ ಪ್ರದರ್ಶನಗೊಂಡಿತು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!