Sunday, September 8, 2024

ಸ್ಪರ್ಧೆಯಿಂದ ಹಿಂದೆ ಸರಿದ ಶಾಸಕ ಹಾಲಾಡಿ: ಬದಲಿ ಪ್ರಸ್ತಾವನೆ

ಕುಂದಾಪುರ: ಅಚ್ಛರಿಯ ರಾಜಕೀಯ ಬೆಳವಣಿಗೆಯಲ್ಲಿ ಕುಂದಾಪುರದ ವಾಜಪೇಯಿ ಎಂದೇ ಪ್ರಸಿದ್ಧರಾಗಿದ್ದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರು ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ಕುಂದಾಪುರದ ವಾಜಪೇಯಿ ಎಂದೇ ಪ್ರಸಿದ್ಧರಾಗಿದ್ದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರು ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ಕುಂದಾಪುರ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಬದಲಾಗುವ ಸಾಧ್ಯತೆ ಸ್ಪಷ್ಟವಾಗಿದೆ. ಆದರೆ ಹಾಲಾಡಿ ಶ್ರೀನಿವಾಸ ಶೆಟ್ಟಿಯವರು ಅವರು ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯಲಿದ್ದಾರೆ ಎನ್ನಲಾಗಿದೆ.

ಕುಂದಾಪುರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಯಾರು ಎನ್ನುವ ಬಗ್ಗೆ ಕುತೂಹಲ ಹೆಚ್ಚಾಗುತ್ತಿದ್ದು, ಹಾಲಾಡಿಯವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಕಿರಣ್ ಕೊಡ್ಗಿಯವರ ಹೆಸರು ಕೇಳಿ ಬರುತ್ತಿದೆ. ನಾಳೆ ಅಧಿಕೃತವಾಗಿ ಘೋಷಣೆಯಾಗುವ ಸಾಧ್ಯತೆ ಇದೆ. ಒಟ್ಟಾರೆಯಾಗಿ ದಿಢೀರ್ ರಾಜಕೀಯ ಬೆಳವಣಿಗೆಯಿಂದ ಜನತೆ ಅಚ್ಛರಿಗೊಳಗಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!