spot_img
Friday, April 24, 2026
spot_img

ಕುಂದಾಪುರ: ಮೊಗವೀರರ ಉಚಿತ ಸಾಮೂಹಿಕ ವಿವಾಹ ವೀಳ್ಯ ಶಾಸ್ತ್ರ, ವಧು-ವರರಿಗೆ ಉಡುಗೆ ವಿತರಣೆ

ಕುಂದಾಪುರ: ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಉಡುಪಿ ಮತ್ತು ಉಡುಪಿ ಜಿಲ್ಲಾ ಮೊಗವೀರ ಯುವ ಸಂಘಟನೆಯ ಆಶ್ರಯದಲ್ಲಿ ಮೇ.3ರಂದು ಕುಂದಾಪುರದ ಮೊಗವೀರ ಭವನದಲ್ಲಿ ನಡೆಯಲಿರುವ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೀಳ್ಯ ಶಾಸ್ತ್ರ ಮತ್ತು ವಧು ವರರಿಗೆ ಉಡುಗೆ ತೊಡುಗೆ ವಿತರಣೆ ಮೊಗವೀರ ಭವನದಲ್ಲಿ ಬುಧವಾರ ನಡೆಯಿತು.

ಈ ಬಾರಿ ಉಚಿತ ಸಾಮೂಹಿಕ ವಿವಾಹದಲ್ಲಿ 20 ಜೋಡಿ ಸಪ್ತಪದಿ ತುಳಿಯಲಿದ್ದಾರೆ. ಇದಕ್ಕೆ ಪೂರ್ವಭಾವಿಯಾಗಿ ನಡೆದ ವೀಳ್ಯಶಾಸ್ತ್ರ ಕಾರ್ಯಕ್ರಮದಲ್ಲಿ ನೂತನ ವಧು ವರರಿಗೆ ಡಾ. ಜಿ. ಶಂಕರ್ ದಂಪತಿ ಮತ್ತು ಸಮಾಜದ ಪ್ರಮುಖ ಗಣ್ಯರ ಮೂಲಕ ಉಡುಗೆ ತೊಡುಗೆಗಳನ್ನು ವಿತರಿಸಲಾಯಿತು. ವಧುವಿಗೆ ಕಾಲುಂಗುರ, ಸೀರೆ, ರವಿಕೆ ಕಣ, ವರನಿಗೆ ಕುರ್ತಾ, ಪೈಜಾಮ ಸಹಿತ ಉಡುಗೊರೆಯನ್ನು ಸಂಘಟನೆ ವತಿಯಿಂದ ಜೋಡಿಗಳಿಗೆ ನೀಡಲಾಯಿತು.

ವಧುವಿಗೆ ತಾಳಿ ಸರವನ್ನು ವಿವಾಹ ಸಂದರ್ಭದಲ್ಲಿ ಡಾ.ಜಿ. ಶಂಕರ್ ದಂಪತಿ, ಸಮಾಜ ಮುಖಂಡರು ಹಾಗೂ ಸಂಘಟನೆಯ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ನೀಡಲಾಗುತ್ತದೆ.

ಈ ಸಂದರ್ಭದಲ್ಲಿ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕರಾದ ನಾಡೋಜ ಡಾ.ಜಿ.ಶಂಕರ್, ಶಾಲಿನಿ ಶಂಕರ್, ಗೀತಾನಂದ ಫೌಂಡೇಶನ್ ಕೋಟ ಇದರ ಪ್ರವರ್ತಕರಾದ ಆನಂದ ಸಿ.ಕುಂದರ್, ಮೊಗವೀರ ಯುವ ಸಂಘಟನೆಯ ಜಿಲ್ಲಾಧ್ಯಕ್ಷ ರಾಜೇಂದ್ರ ಸುವರ್ಣ ಹಿರಿಯಡಕ, ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಕುಂದಾಪುರ ಶಾಖಾಧ್ಯಕ್ಷ ಉದಯ ಕುಮಾರ್ ಹಟ್ಟಿಯಂಗಡಿ, ಬಾರಕೂರು ಮಹಾಜನ ಸಭಾದ ಅಧ್ಯಕ್ಷ ಸತೀಶ್ ಅಮೀನ್, ಉಚ್ಚಿಲ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಎಸ್.ಸಿ ಕೊಟ್ಟಾರಗಸ್ತಿ, ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಮುಂಬಯಿ ಇದರ ಮಾಜಿ ಅಧ್ಯಕ್ಷ ಮಹಾಬಲ ಕುಂದರ್, ಕುಂದಾಪುರ ಶಾಖೆಯ ಮಾಜಿ ಅಧ್ಯಕ್ಷರಾದ ಕೆ.ಕೆ ಕಾಂಚನ್, ಎಂ.ಎಂ ಸುವರ್ಣ, ಹಿರಿಯಣ್ಣ, ಮೊಗವೀರ ಯುವ ಸಂಘಟನೆ ಜಿಲ್ಲಾ ಘಟಕದ ನಿಕಟಪೂರ್ವ ಅಧ್ಯಕ್ಷ ಶಿವರಾಮ್ ಕೆ.ಎಂ., ಮಾಜಿ ಅಧ್ಯಕ್ಷರುಗಳು, ಯುವ ಸಂಘಟನೆಯ ಎಲ್ಲಾ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು. ಅಶೋಕ್ ತೆಕ್ಕಟ್ಟೆ ಕಾರ್ಯಕ್ರಮ ನಿರ್ವಹಿಸಿದರು.

ಸಮಾಜದ ವಿವಾಹ ಸಮಾರಂಭಗಳಲ್ಲಿ ಹೆಚ್ಚುತ್ತಿರುವ ದುಂದು ವೆಚ್ಚ, ಆಡಂಬರಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಈ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದ್ದು, ಸಂಘಟನೆಯ ವತಿಯಿಂದ ವಿವಾಹ ನೋಂದಣಿಯನ್ನು ನಡೆಸಲಾಗುತ್ತದೆ. ಈ ತನಕ 355 ಜೋಡಿಗಳು ಸಾಮೂಹಿಕ ವಿವಾಹದಲ್ಲಿ ವಿವಾಹವಾಗಿದ್ದಾರೆ. ಕುಂದಾಪುರದ ನೂತನ ಮೊಗವೀರ ಭವನದಲ್ಲಿ ಮೇ 3ರಂದು ಗೋದೋಳಿ ಲಗ್ನದಲ್ಲಿ 20 ಜೋಡಿ ಹಸೆಮಣೆಗೆ ಏರಲಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!