spot_img
Sunday, June 14, 2026
spot_img

ಸುರಭಿ ಜೈಸಿರಿ ‘ಸಾಂಸ್ಕೃತಿಕ ವರ್ಷಧಾರೆ’ ಕಾರ್ಯಕ್ರಮ ಉದ್ಘಾಟನೆ

ಬೈಂದೂರು: ಸಂಘ ಸಂಸ್ಥೆಯನ್ನು ಕಟ್ಟುವುದಕ್ಕಿಂತ ಮುನ್ನಡಸಿಕೊಂಡು ಹೋಗುವುದೇ ಬಹುಮುಖ್ಯ. ಈ ನೆಲೆಯಲ್ಲಿ ಎರಡು ದಶಕ ಕಂಡ ಸಾಂಸ್ಕೃತಿಕ ಸಂಘಟನೆ ಸುರಭಿ ಅದೇ ಚೈತನ್ಯದೊಂದಿಗೆ ಮುನ್ನಡೆಯುತ್ತಿರುವುದು ಶ್ಲಾಘನಾರ್ಹ ಎಂದು ಕುಂದಾಪುರ ಶ್ರೀ ರಾಮ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಅಧ್ಯಕ್ಷ ನಾಗರಾಜ ಕಾಮಧೇನು ಹೇಳಿದರು.

ಅವರು ಸುರಭಿ ರಿ. ಬೈಂದೂರು ಆಶ್ರಯದಲ್ಲಿ ಆಯೋಜಿಸಲಾದ ಸುರಭಿ ಜೈಸಿರಿ ಸಾಂಸ್ಕೃತಿಕ ವರ್ಷಧಾರೆ ೩ ದಿನಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಗ್ರಾಮೀಣ ಭಾಗದಲ್ಲಿ ಪ್ರತಿಭೆಗಳಿಗೆ ಕೊರತೆಯಿಲ್ಲ. ಪ್ರತಿಭಾ ಪ್ರದರ್ಶನಕ್ಕೆ ಸೂಕ್ತವಾದ ವೇದಿಕೆ ಬೇಕಿದೆ. ಇಂತಹ ಸಂಸ್ಥೆಗಳ ಆ ಕೊರತೆಯನ್ನು ನೀಗಿಸಿದೆ ಎಂದರು.

ಸುರಭಿ ಬೈಂದೂರು ಅಧ್ಯಕ್ಷ ನಾಗರಾಜ ಪಿ.ಯಡ್ತರೆ ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ಸೇವಾ ಸಂಗಮ ಶಿಶು ಮಂದಿರದ ಅಧ್ಯಕ್ಷ ಮಂಜುನಾಥ ಶೆಟ್ಟಿ, ಉಪ್ಪುಂದದ ಉದ್ಯಮಿ ಜೇಸಿ ಯು ಪ್ರಕಾಶ್ ಭಟ್, ಎನ್.ಸಿ.ಡಿ.ಸಿ.ಸಿ. ಬ್ಯಾಂಕ್ ಮೇಲ್ವಿಚಾರಕ ಶಿವರಾಮ ಪೂಜಾರಿ ಯಡ್ತರೆ, ಬೈಂದೂರು ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಭಾನುಮತಿ ಬಿ.ಕೆ, ನಿವೃತ್ತ ಮುಖ್ಯೋಪಾಧ್ಯಾಯ ಅಣ್ಣಪ್ಪ ಶೇರುಗಾರ ತೊಡವಳ್ಳಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಉತ್ತಮ ಕೃಷಿಕ ಪ್ರಶಸ್ತಿ ಪುರಸ್ಕೃತ ಮಂಜುನಾಥ ಡಿ.ಕೆ ಹಾಗೂ ಚದುರಂಗ ಬಾಲ ಪ್ರತಿಭೆ ರಿತೇಶ್‌ಆರ್.ಕೆ ಇವರನ್ನು ಸನ್ಮಾನಿಸಲಾಯಿತು. ಸುರಭಿಯ ಯಕ್ಷಗುರು ಪ್ರಶಾಂತ್ ಮಯ್ಯ ದಾರಿಮಕ್ಕಿ ಅವರಿಗೆ ಗುರುವಂದನೆ ಸಲ್ಲಿಸಲಾಯಿತು.

ನಿರ್ದೇಶಕ ಗಣಪತಿ ಹೋಬಳಿದಾರ್ ಸ್ವಾಗತಿಸಿದರು. ಸುರಭಿ ಸಂಸ್ಥೆಯ ನಿರ್ದೇಶಕ ಸುಧಾಕರ ಪಿ ಬೈಂದೂರು ಪ್ರಾಸ್ತಾವಿಕ ಮಾತನಾಡಿದರು. ಸದಸ್ಯ ರಾಮ ಕೃಷ್ಣ ದೇವಾಡಿಗ ಉಪ್ಪುಂದ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಭಾಸ್ಕರ ಬಾಡ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!