Sunday, September 8, 2024

ವೆಂಕಟರಾಮ್ ಭಟ್ ನೆಂಪು ಅವರಿಗೆ ಪಿ‌ಎಚ್‌ಡಿ ಪದವಿ

ಕುಂದಾಪುರ: ವೆಂಕಟರಾಮ್ ಭಟ್ ಇವರು ಕರ್ನಾಟಕ ರಾಜ್ಯದಲ್ಲಿ ಉದ್ಯಮಶೀಲತಾ ತರಬೇತಿ ಸಂಸ್ಥೆಗಳ ಕಾರ್ಯಕ್ಷಮತೆಯ ಮೌಲ್ಯಮಾಪನ ಎಂಬ ವಿಷಯದ ಬಗ್ಗೆ ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಕೆ.ಎಸ್. ಸರಳಾ ಇವರ ಮಾರ್ಗದರ್ಶನದಲ್ಲಿ ಮಂಡಿಸಿದ ಮಹಾಪ್ರಬಂಧಕ್ಕೆ ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾನಿಲಯವು ಡಾಕ್ಟರೇಟ್ ಪದವಿ ನೀಡಿದೆ.

ಇವರು ಪ್ರಸ್ತುತ ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟೇಶ್ವರ ಇಲ್ಲಿ ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಇವರು ಮಂಗಳೂರು ವಿವಿ ವಾಣಿಜ್ಯಶಾಸ್ತ್ರ ವಿಭಾಗದಲ್ಲಿ ಸ್ನಾತಕೋತ್ತರ ಪದವಿ, ಕರ್ನಾಟಕ ಮುಕ್ತ ವಿವಿಯಿಂದ ಮಾನವ ಸಂಪನ್ಮೂಲ ನಿರ್ವಹಣೆಯಲ್ಲಿ ಸ್ನಾತಕೋತ್ತರ ಡಿಪ್ಲೊಮಾ ಪದವಿ ಮತ್ತು ತಮಿಳುನಾಡಿನ ಅಣ್ಣಾಮಲೈ ವಿವಿಯಿಂದ ಗಣಕೀಕೃತ ಸಂಖ್ಯಾಶಾಸ್ತ್ರ ವಿಷಯದಲ್ಲಿ ಸ್ನಾತಕೋತ್ತರ ಡಿಪ್ಲೊಮಾ ಪದವಿ ಪಡೆದಿದ್ದಾರೆ. ಇವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ ಇದರ ಹಳೆ ವಿದ್ಯಾರ್ಥಿ ಹಾಗು ಸುಬ್ರಮಣ್ಯ ಭಟ್ ಮತ್ತು ಶ್ರೀಮತಿ ಇಂದಿರಾ ಭಟ್ ನೆಂಪು ಇವರ ಪುತ್ರ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!