spot_img
Friday, April 24, 2026
spot_img

ಮಂಗಳೂರು ವಿ. ವಿ. ಅಂತರ್ ಕಾಲೇಜು ಯಕ್ಷಗಾನ ಸ್ಪರ್ಧೆ: ಡಾ.ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಕುಂದಾಪುರ: ಗೋವಿಂದ ದಾಸ ಕಾಲೇಜು ಸುರತ್ಕಲ್‌ನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಅಂತರ್ ಕಾಲೇಜು ಯಕ್ಷಗಾನ ಸ್ಪರ್ಧೆಯಲ್ಲಿ ಕುಂದಾಪುರದ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಪ್ರದರ್ಶಿಸಿದ ಶಶಿಪ್ರಭಾ ಪರಿಣಯ ಪ್ರಸಂಗ ಸಮಗ್ರ ಪ್ರಶಸ್ತಿ ಪಡೆದಿದೆ. ತಂಡದಲ್ಲಿ ಭ್ರಮರಕುಂತಳೆ ಪಾತ್ರಧಾರಿ ಪ್ರಥಮ ಬಿ.ಸಿ.ಎ. ಪೂಜಾ ಆಚಾರ್ ತೆಕ್ಕಟ್ಟೆ, ಮಾರ್ತಾಂಡತೇಜ ಪಾತ್ರಧಾರಿ ಅಂತಿಮ ಬಿ.ಕಾಂ. ಡಿ. ವಿಭಾಗದ ಶ್ರೀನಿಧಿ ಖಾರ್ವಿ, ಹಾಸ್ಯ ಪಾತ್ರಧಾರಿ ದ್ವಿತೀಯ ಬಿ.ಎಸ್ಸಿ. ಯ ಲಕ್ಷ್ಮಿಕಾಂತ್ ಶೆಟ್ಟಿ ವೈಯಕ್ತಿಕ ಪ್ರಶಸ್ತಿ ಪಡೆದರು. ಉಳಿದಂತೆ ಮುಮ್ಮೇಳದಲ್ಲಿ ವಿದ್ಯಾರ್ಥಿಗಳಾದ ಪವಿತ್ರ ಪೈ., ಅಂಕಿತಾ ಸಿ. ಶೇಟ್, ಶ್ವೇತಾ ಪೂಜಾರಿ, ನಿಖಿಲ್ ಬಾರಾಳಿ, ಭರತ್ ಶೆಟ್ಟಿಗಾರ್, ದರ್ಶನ್ ಕುಮಾರ್ ಶೆಟ್ಟಿ, ಗುರುರಾಜ್ ಭಾಗವಹಿಸಿದ್ದರು. ಹಿಮ್ಮೇಳದಲ್ಲಿ ಭಾಗವತರಾಗಿ ಗಣೇಶ್ ಆಚಾರ್ ಬಿಲ್ಲಾಡಿ, ಚಂಡೆಯಲ್ಲಿ ಶಶಾಂಕ್ ಆಚಾರ್ಯ ಕಿರಿಮಂಜೇಶ್ವರ, ಮದ್ದಳೆಯಲ್ಲಿ ಅಕ್ಷಯ್ ಆಚಾರ್ ಬಿದ್ಕಲ್‌ಕಟ್ಟೆ ಸಹಕರಿಸಿದರು. ಯಕ್ಷಗುರು ಐರೋಡಿ ಮಂಜುನಾಥ್ ಕುಲಾಲ್, ಉಪನ್ಯಾಸಕಿ ಸುಶ್ಮಿತಾ ಸಾಲಿಗ್ರಾಮ ತರಬೇತಿ ನೀಡಿದ್ದರು.

ಇವರಿಗೆ ಕಾಲೇಜಿನ ಅಧ್ಯಕ್ಷರಾದ ಶ್ರೀ. ಬಿ. ಎಂ. ಸುಕುಮಾರ ಶೆಟ್ಟಿ, ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ, ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ, ಹಾಗೂ ಬೋಧಕ-ಬೋಧಕೇತರರು ಅಭಿನಂದನೆ ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!