spot_img
Saturday, June 13, 2026
spot_img

ಕುಂದಾಪುರ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ ನಾಮಪತ್ರ ಸಲ್ಲಿಕೆ

ಕುಂದಾಪುರ: ಎ.13: ಕುಂದಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ ಎ.13ರಂದು ಕುಂದಾಪುರದ ಚುನಾವಣಾಧಿಕಾರಿಗಳ ಕಛೇರಿಯಲ್ಲಿ ಚುನಾವಣಾಧಿಕಾರಿ ರಶ್ಮಿ ಅವರಿಗೆ ನಾಮಪತ್ರ ಸಲ್ಲಿಸಿದರು.

ಯಾವುದೇ ಪ್ರಚಾರವಿಲ್ಲದೇ ಸರಳವಾಗಿ ಅವರು ಪಕ್ಷದ ಕೆಲವೇ ಕೆಲವು ಮುಖಂಡರ ಜೊತೆ ಆಗಮಿಸಿ ನಾಮಪತ್ರ ಸಲ್ಲಿಸುವ ಮೂಲಕ ಹಾಲಾಡಿ ಶ್ರೀನಿವಾಸ ಶೆಟ್ಟರ ಪರಂಪರೆಯನ್ನು ಮುಂದುವರಿಸಿದರು.

ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕಿರಣ್ ಕುಮಾರ್ ಕೊಡ್ಗಿ, ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಸ್ವ ಇಚ್ಛೆಯಿಂದ ಸ್ಪರ್ಧೆ ಮಾಡಲು ನಿರಾಕರಿಸಿದ್ದರು. ಹಾಗಾಗಿ ಪಕ್ಷ ನನಗೆ ಟಿಕೆಟು ನೀಡಿದೆ. ಹಿಂದಿನ ಚುನಾವಣೆಗಳಲ್ಲಿ ಸಕ್ರಿಯವಾಗಿ ಕೆಲಸ ಮಾಡಿದ್ದೇನೆ. ಕ್ಷೇತ್ರದ ಸಂಪೂರ್ಣ ಅರಿವಿದೆ. ಕ್ಷೇತ್ರದ ಮತದಾರರನ್ನು ನನ್ನನ್ನು ಬೆಂಬಲಿಸಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಕುಂದಾಪುರ ಮಂಡಲದ ಅಧ್ಯಕ್ಷ ಶಂಕರ ಅಂಕದಕಟ್ಟೆ, ಮಾಜಿ ಅಧ್ಯಕ್ಷ ಸುರೇಶ ಶೆಟ್ಟಿ ಕಾಡೂರು ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!