spot_img
Friday, April 24, 2026
spot_img

ಬಿಜೆಪಿ ಕೇವಲ ಭರವಸೆ-ಕೆ.ಗೋಪಾಲ ಪೂಜಾರಿ

ಕುಂದಾಪುರ: ಬೆಲೆ ಏರಿಕೆಯಿಂದ ಜನ ಹೈರಾಣರಾಗಿದ್ದಾರೆ. ಆಡಳಿತರೂಢ ಬಿಜೆಪಿ ಚುನಾವಣಾ ಸಂದರ್ಭದಲ್ಲಿ ವಿಷಯಾಂತರಕ್ಕೆ ಮುಂದಾಗಿದೆ. ಆಧಾರ್-ಫಾನ್ ಕಾರ್ಡ್ ಲಿಂಕ್ ಬಗ್ಗೆ ಮಾಹಿತಿ ನೀಡದೆ ದಂಡದ ಹೆಸರಲ್ಲಿ ಲೂಟಿ ಮಾಡಲು ಮುಂದಾಗಿದ್ದಾರೆ. ಹಿಂದಿನ ಚುನಾವಣೆಗಳಲ್ಲಿ ನೀಡಿದ ಭರವಸೆಗಳೆಲ್ಲ ಭರವಸೆಯಾಗಿಯೇ ಇದೆ. ಇದರಿಂದ ಜನ ಬೇಸೆತ್ತಿದ್ದಾರೆ ಎಂದು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಹೇಳಿದರು.

ಕುಂದಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊಳಹಳ್ಳಿ ದಿನೇಶ ಹೆಗ್ಡೆ ಅವರ ನಾಮಪತ್ರ ಸಲ್ಲಿಕೆಗೆ ಮೊದಲು ಕುಂದಾಪುರದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು.

ಕುಂದಾಪುರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಬೇಕು. ಆ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಬೇಕು. ಕಾರ್ಯಕರ್ತರು ಮತದಾರರ ಮನವೊಲಿಸುವ ಕೆಲಸ ಮಾಡಬೇಕು ಎಂದು ಹೇಳಿದರು.

32 ವರ್ಷಗಳ ಹಿಂದೆಯೇ ಎಸ್.ಬಂಗಾರಪ್ಪನವರ ಸರ್ಕಾರ ರೈತರ 10 ಎಚ್‌ಪಿ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ನೀಡಿತ್ತು. ಇವತ್ತಿಗೂ ಅದು ಜೀವಂತವಾಗಿದೆ. ಸಿದ್ಧರಾಮಯ್ಯನವರ ಸರ್ಕಾರ 7 ಕೆಜಿ ಅಕ್ಕಿ ಉಚಿತವಾಗಿ ನೀಡುತ್ತಿತ್ತು. ಅದನ್ನು ಬಿಜೆಪಿ ಸರ್ಕಾರ 5 ಕೆಜಿಗೆ ಇಳಿಸಿತು. ಅಡುಗೆ ಅನಿಲದ ಬೆಲೆ 1200 ಮಾಡಿತು. ಅದರ ಸಬ್ಸಿಡಿ ರದ್ದು ಮಾಡಿತು. ಬಡವರನ್ನು ಲೂಟಿ ಮಾಡುವ ಸರ್ಕಾರವನ್ನು ಬದಲಾಯಿಸಬೇಕು ಎಂದರು.

ನ್ಯಾಯವಾದಿ, ಚಿಂತಕ ಸುದೀರ್ ಕುಮಾರ್ ಮುರೋಳಿ ಮಾತನಾಡಿ, ಕಾಂಗ್ರೆಸ್ ಜನರ ಬದುಕನ್ನು ರೂಪಿಸುವ ಕೆಲಸ ಮಾಡುತ್ತಿದೆ. ಬದುಕನ್ನು ಕಟ್ಟಿಕೊಡುವ ಕೆಲಸ ಮಾಡುತ್ತದೆಯೇ ಹೊರತು ಜನರ ಭಾವನೆಗಳ ಜೊತೆ ಆಟವಾಡುತ್ತಿಲ್ಲ. ಬಿಜೆಪಿಯ ಸಂಸದೆ ಇವತ್ತು ಚುನಾಯಿತ ಕ್ಷೇತ್ರವನ್ನೇ ಮರೆತು ಬಿಟ್ಟಿದ್ದಾರೆ. ನಿರುದ್ಯೋಗ, ಬೆಲೆ ಏರಿಕೆ, ರೈತರ ಸಮಸ್ಯೆಗಳಿಗೆ ಸರ್ಕಾರದ ಬಳಿ ಉತ್ತರವಿಲ್ಲ. ಕರಾವಳಿ ಜಿಲ್ಲೆಗೆ ಕುಚಲಕ್ಕಿ ಕೊಡುತ್ತೇವೆ ಎಂದು ಭಾರೀ ಪ್ರಚಾರ ನೀಡಿದವರಿಗೆ ಒಂದು ಕೆಜಿ ಕೂಚಲಕ್ಕಿ ಕೊಡಲು ಆಗಲಿಲ್ಲ. ಬಿಜೆಪಿಗರಿಗೆ ಅಭಿವೃದ್ದಿಯ ರಾಜಕಾರಣ ಬೇಕಾಗಿಲ್ಲ. ಅವರಿಗೆ ಕೋಮು ಗಲಾಭೆಗಳಿಗೆ ಉತ್ತೇಜನ ನೀಡುವ ವ್ಯಕ್ತಿಗಳಿಗೆ ಒತ್ತು ನೀಡುತ್ತಾರೆ ಎಂದರು.

ಕಾಂಗ್ರೆಸ್ ವಕ್ತಾರ ವಿಕಾಸ್ ಹೆಗ್ಡೆ ಮಾತನಾಡಿ ಕ್ಷೇತ್ರದಲ್ಲಿ ಪರಿವರ್ತನೆ ಆಗುತ್ತದೆ. ದಿನೇಶ ಹೆಗ್ಡೆ ಅವರು ಗೆಲುವು ಸಾಧಿಸುವುದು ಸ್ಪಷ್ಟ. ರಾಜ್ಯದಲ್ಲಿ ನೂರಕ್ಕೆ ನೂರು ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ. ಕುಂದಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದಿನೇಶ ಹೆಗ್ಡೆ ಅವರಿಗೆ ರಾಜಕಾರಣ ಹೊಸತಲ್ಲ, ಕ್ಷೇತ್ರದ ಸಮಗ್ರ ಪರಿಚಯ ಹೊಂದಿದ್ದಾರೆ ಎಂದರು.

ಅಭ್ಯರ್ಥಿ ಮೊಳಹಳ್ಳಿ ದಿನೇಶ ಹೆಗ್ಡೆ ಮಾತನಾಡಿ, ಕ್ಷೇತ್ರದ ಕಾರ್ಯಕರ್ತರು ತಾವೇ ಅಭ್ಯರ್ಥಿ ಎನ್ನುವ ರೀತಿಯಲ್ಲಿ ಕೆಲಸ ಮಾಡಬೇಕು. ಜನರೆ ಸಮಸ್ಯೆಗಳಿಗೆ ಸ್ಪಂದಿಸುವುದರ ಮೂಲಕ ಕ್ಷೇತ್ರದ ಅಭಿವೃದ್ದಿಗೆ ಶಕ್ತಿಮೀರಿ ಶ್ರಮಿಸುತ್ತೇನೆ. ಮತದಾರರ ಪೂರ್ಣ ಆಶೀರ್ವಾದ ಇರಲಿ ಎಂದರು.

ಕಾರ್ಯಕ್ರಮವನ್ನು ಮಾಜಿ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ ಉದ್ಘಾಟಿಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕುಮಾರ್ ಕೊಡವೂರು, ಕ್ಷೇತ್ರದ ಮಾಜಿ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಅಶೋಕ್ ಪೂಜಾರಿ ಬೀಜಾಡಿ, ಹಿರಿಯಣ್ಣ ಚಾತ್ರಬೆಟ್ಟು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ರಾಜು ಪೂಜಾರಿ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನ್ ಕುಮಾರ್, ವಂಡ್ಸೆ ಬ್ಲಾಕ್ ಅಧ್ಯಕ್ಷ ಪ್ರದೀಪ ಶೆಟ್ಟಿ ಗುಡಿಬೆಟ್ಟು, ಕೃಷ್ಣದೇವ ಕಾರಂತ, ವಂಡಬಳ್ಳಿ ಜಯರಾಮ ಶೆಟ್ಟಿ, ಪಂಚಾಯತ್ ರಾಜ್ ಒಕ್ಕೂಟದ ಅಧ್ಯಕ್ಷ ಉದಯಕುಮಾರ್ ಶೆಟ್ಟಿ ವಂಡ್ಸೆ, ಮಹಿಳಾ ಕಾಂಗ್ರೆಸ್‌ನ ದೇವಕಿ ಸಣ್ಣಯ್ಯ, ರೇಖಾ ಸುವರ್ಣ, ಪ್ರಕಾಶ್ಚಂದ್ರ ಶೆಟ್ಟಿ, ದೇವಾನಂದ ಶೆಟ್ಟಿ, ಸದಾನಂದ ಶೆಟ್ಟಿ, ದಿನೇಶ ಪುತ್ರನ್, ಹರೀಶ ಕಿಣಿ, ಬೆಳ್ವೆ ಸತೀಶ ಕಿಣಿ ಮೊದಲಾದವರು ಉಪಸ್ಥಿತರಿದ್ದರು.

ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಎಂ.ಎ ಗಫೂರ್, ಕಿಶನ್ ಹೆಗ್ಡೆ ಮೊದಲಾದವರು ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ ಸ್ವಾಗತಿಸಿ, ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ್ ಕುಂದರ್ ವಂದಿಸಿದರು. ವಿನೋದ್ ಕ್ರಾಸ್ಟೋ ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!