spot_img
Sunday, April 26, 2026
spot_img

ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರನ್ನು ಭೇಟಿ ಮಾಡಿದ ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ


ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಅವರು ಎ.೧೫ರ ಬೆಳಿಗ್ಗೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟರ ಮನೆಗೆ ಭೇಟಿ ನೀಡಿ ಅವರ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಹಾಲಾಡಿ ಶ್ರೀನಿವಾಸ ಶೆಟ್ಟಿಯವರು, ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿಯ ಅಧಿಕೃತ ಅಭ್ಯರ್ಥಿಯಾಗಿ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ಘೋಷಣೆಯಾಗಿದ್ದಾರೆ. ರಾಷ್ಟ್ರ, ಹಾಗೂ ರಾಜ್ಯದ ಅಭಿವೃದ್ದಿ ಕಾರ್ಯಗಳನ್ನು ಮುಂದುವರಿಸಿಕೊಂಡು ಹೋಗುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಭಾರತೀಯ ಜನತಾ ಪಕ್ಷದ ಅಧಿಕೃತ ಅಭ್ಯರ್ಥಿಗಳನ್ನು ಬೆಂಬಲಿಸಿ, ಗೆಲ್ಲಿಸಬೇಕು, ವಿಧಾನಸಭೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕು ಎಂದರು.

ಗುರುರಾಜ ಗಂಟಿಹೊಳೆ ಈ ಹಿಂದೆ ಹಲವು ಬಾರಿ ಸಾಮಾಜಿಕ ಸಮಸ್ಯೆಗಳ ಚರ್ಚೆಗಳ ಬಗ್ಗೆ ಬಂದವರು. ಸಾಕಷ್ಟು ಚರ್ಚೆ ಮಾಡಿದ್ದೇವು. ಅವರ ಗುಣನಡತೆ, ಸರಳತೆ, ಇಚ್ಛಾಶಕ್ತಿಯ ನನಗೆ ಬಗ್ಗೆ ಎರಡು ಮಾತಿಲ್ಲ. ಅವರು ಶಾಸಕರಾಗಿ ಆಯ್ಕೆ ಆದಲ್ಲಿ ವಿಧಾನಸಭೆಯಲ್ಲಿ ಕೂಡಾ ಧ್ವನಿ ಎತ್ತುತ್ತಾರೆ. ಸಾಮಾಜಿಕ ನ್ಯಾಯ ಒದಗಿಸಿಕೊಡುತ್ತಾರೆ ಎನ್ನುವ ಅಪಾರವಾದ ನಂಬಿಕೆ ನನಗಿದೆ. ಆದ್ದರಿಂದ ಈ ಸಲ ಅವರನ್ನು ಗೆಲ್ಲಿಸಿಕೊಡಬೇಕು ಎಂದರು.

ಬೈಂದೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ ಶೆಟ್ಟಿ ಗಂಟಿಹೊಳೆ ಮಾತನಾಡಿ, ಕರಾವಳಿಯ ರಾಜಕಾರಣದಲ್ಲಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟರ ಪ್ರಭಾವವಿದೆ. ಆದರ್ಶಯುತ ರಾಜಕಾರಣ ಅವರದ್ದು. ನಾನು ಅನೇಕ ಸಂದರ್ಭಗಳಲ್ಲಿ ಅವರ ಮಾರ್ಗದರ್ಶನ ಪಡೆದಿದ್ದೇನೆ. ಧೈರ್ಯ ನೀಡಿದ್ದಾರೆ. ಸಲಹೆಗಳನ್ನು ನೀಡಿದ್ದಾರೆ. ಇವತ್ತು ನನಗೆ ಪೂರ್ಣ ಆಶೀರ್ವಾದ ಮಾಡಿದ್ದಾರೆ. ಇದರಿಂದ ನನಗೆ ಧೈರ್ಯ ಬಂದಿದೆ. ದೊಡ್ಡ ಬಲ ಬಂದಂತಾಗಿದೆ ಎಂದರು. ಹಾಲಾಡಿ ಶ್ರೀನಿವಾಸ ಶೆಟ್ಟರ ಪ್ರಭಾವ ಕೆವಲ ಕುಂದಾಪುರ ಕ್ಷೇತ್ರಕ್ಕೆ ಮಾತ್ರವಲ್ಲ ಬೈಂದೂರು ಕ್ಷೇತ್ರದಲ್ಲಿಯೂ ಇದೆ. ರಾಷ್ಟ್ರೀಯ ಪಕ್ಷದಿಂದ ಅಭ್ಯರ್ಥಿತನ ಸಿಕ್ಕಿದೆ. ಈಗ ಹಾಲಾಡಿ ಶ್ರೀನಿವಾಸ ಶೆಟ್ಟರ ಆಶೀರ್ವಾದದಿಂದ ಆತಂಕಗಳು ದೂರಾಗಿ ಖುಷಿಯಾಗಿದೆ. ಅವರ ಮಾರ್ಗದರ್ಶನದಲ್ಲಿ ಮುನ್ನೆಡೆಯುತ್ತೇನೆ ಎಂದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!