spot_img
Sunday, April 26, 2026
spot_img

ಕೊಲ್ಲೂರಿಗೆ ಗೋವಾದ ರಾಜ್ಯಪಾಲರಾದ ಪಿ.ಎಸ್. ಶ್ರೀಧರನ್ ಪಿಳ್ಳೈ ಭೇಟಿ


ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಗೋವಾದ ರಾಜ್ಯಪಾಲರಾದ ಪಿ.ಎಸ್. ಶ್ರೀಧರನ್ ಪಿಳ್ಳೈ ಮತ್ತು ಅವರ ಪತ್ನಿ ರೀನಾ ಹಾಗೂ ಕುಟುಂಬ ಸಮೇತರಾಗಿ ಅವರು ಭಾನುವಾರ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಉಡುಪಿಯಿಂದ ಕೊಲ್ಲೂರು ದೇವಳಕ್ಕೆ ಆಗಮಿಸಿದ ಪಿ.ಎಸ್. ಶ್ರೀಧರನ್ ಪಿಳ್ಳೈ ಅವರಿಗೆ ಪೂರ್ಣಕುಂಭ ಸ್ವಾಗತ ನೀಡಲಾಯಿತು. ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ರಾಜ್ಯಪಾಲರು ತುಪ್ಪದ ದೀಪದಿಂದ ಆರತಿ ಬೆಳಗಿದರು. ಬ್ರಹ್ಮಾರ್ಪಣ ನೆರವೇರಿಸಿದರು ಹಾಗೂ ಅರ್ಚನೆ ಮಾಡಿಸಿದರು. ದೇವಾಲಯದ ಆವರಣದಲ್ಲಿ ವೀರಭದ್ರಸ್ವಾಮಿ ದೇವರಿಗೆ ಪೂಜೆ ಸಲ್ಲಿಸಿ, ದೇವಳದ ಪ್ರಧಾನ ತಂತ್ರಿ ಹಾಗೂ ಅರ್ಚಕ ಡಾ ಕೆ. ರಾಮಚಂದ್ರ ಅಡಿಗ ಅವರ ನೇತೃತ್ವದಲ್ಲಿ ತಮ್ಮ ಮೊಮ್ಮಕ್ಕಳಿಗೆ ವಿದ್ಯಾರಂಭ ಮಾಡಿಸಿ, ದೇವಾಲಯ ಪ್ರದಕ್ಷಿಣೆ ಹಾಕಿದ್ದರು.

ಬಳಿಕ ದೇವಳದ ಕಛೇರಿಯಲ್ಲಿ ಗೋವಾ ರಾಜ್ಯಪಾಲ ಪಿ.ಎಸ್. ಶ್ರೀಧರನ್ ಪಿಳ್ಳೈ ಅವರಿಗೆ ಶಾಲು ಹೊದಿಸಿ ಗೌರವಿಸಿ, ಶ್ರೀದೇವಿಯ ಪ್ರಸಾದ ನೀಡಲಾಯಿತು. ರಾಜ್ಯಪಾಲರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ನೀಡಿ ಉತ್ಸವಕ್ಕೆ ಆಹ್ವಾನಿಸಿದರು. ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರತ್ನಾ ರಮೇಶ್ ಕುಂದರ್, ಸಂಧ್ಯಾ ರಮೇಶ್, ದೇವಳದ ಕಾರ್ಯನಿರ್ವಹಣಾಧಿಕಾರಿ ಎಸ್.ಸಿ. ಕೋಟಾರಗಸ್ತಿ, ಸಹಾಯಕ ಗೋವಿಂದ ನಾಯ್ಕ್, ಕೊಲ್ಲೂರು ಉದ್ಯಮಿ ಚಿಕ್ಕಯ್ಯ ಮೊಗವೀರ, ಬೈಂದೂರು ತಹಶೀಲ್ದಾರ್ ಶ್ರೀಕಾಂತ್ ಕೆ ಹೆಗ್ಡೆ, ಬೈಂದೂರು ಪಟ್ಟಣ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್, ಕೊಲ್ಲೂರು ಗ್ರಾಮ ಲೆಕ್ಕಾಧಿಕಾರಿ ವೀರೇಶ್, ದೇವಳದ ಅರ್ಚಕ ನರಸಿಂಹ ಅಡಿಗ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!