spot_img
Wednesday, January 22, 2025
spot_img

ಮಾರಣಕಟ್ಟೆ ಸುಬ್ರಹ್ಮಣ್ಯ ಮಂಜರವರ ಸಂಸ್ಮರಣಾ ಕಾರ್ಯಕ್ರಮ ಕಲ್ಪವೃಕ್ಷ: ಪ್ರಶಸ್ತಿ ಪ್ರದಾನ, ನೆರವು ವಿತರಣೆ


ಕುಂದಾಪುರ: ಮಾರಣಕಟ್ಟೆ ಸುಬ್ರಹ್ಮಣ್ಯ ಮಂಜ ಚಾರಿಟೇಬಲ್ ಟ್ರಸ್ಟ್ ರಿ., ನೇತೃತ್ವದಲ್ಲಿ ಮಾರಣಕಟ್ಟೆ ಸುಬ್ರಹ್ಮಣ್ಯ ಮಂಜರವರ ಸಂಸ್ಮರಣಾ ಕಾರ್ಯಕ್ರಮ ಕಲ್ಪವೃಕ್ಷ ಎ.16ರಂದು ಮಾರಣಕಟ್ಟೆ ಅನುಗ್ರಹದ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ನಿವೃತ್ತ ಪ್ರಾಂಶುಪಾಲರಾದ ಸುಬ್ರಹ್ಮಣ್ಯ ಉಡುಪ ಕೊಕ್ಕರ್ಣೆ ಉದ್ಘಾಟಿಸಿ, ದಿ| ಸುಬ್ರಹ್ಮಣ್ಯ ಮಂಜರು ಅಂದಿನ ದಿನಗಳಲ್ಲಿ ಬಹಳ ಕಷ್ಟಪಟ್ಟು ಮಕ್ಕಳಿಗೆ ಯೋಗ್ಯ ಶಿಕ್ಷಣ, ಸಂಸ್ಕಾರವನ್ನು ನೀಡಿ ಸನ್ಮಾರ್ಗದಲ್ಲಿ ಮುನ್ನೆಡೆಸಿದವರು. ಅವರ ಅಂದಿನ ಶ್ರಮ, ಪರಿಶ್ರಮ ಇವತ್ತು ಸಮಾಜಕ್ಕೆ ಸಮರ್ಪಣೆಯಾಗುತ್ತಿದೆ. ಟ್ರಸ್ಟ್ ಮೂಲಕ ಸುಬ್ರಹ್ಮಣ್ಯ ಮಂಜರ ಹೆಸರು ಸೇವಾಕ್ಷೇತ್ರದಲ್ಲಿ ಶಾಶ್ವತವಾಗಲಿ ಎಂದರು.

ಎಂ.ಎಸ್.ಮಂಜ ಚಾರಿಟೇಬಲ್ ಟ್ರಸ್ಟ್ ಮಾರಣಕಟ್ಟೆ ಅಧ್ಯಕ್ಷರಾದ ಎಂ.ಕೃಷ್ಣಮೂರ್ತಿ ಮಂಜರು ಅಧ್ಯಕ್ಷತೆ ವಹಿಸಿ, ಕಲ್ಪವೃಕ್ಷ ಕಾರ್ಯಕ್ರಮದ ಮೂಲಕ ವಿವಿಧ ಕ್ಷೇತ್ರಗಳ ಸಾಧಕರನ್ನು ಗೌರವಿಸುವುದು, ಫಲಾನುಭವಿಗಳಿಗೆ ಆರ್ಥಿಕ ನೆರವು ನೀಡುವುದು ಮಾತ್ರವಲ್ಲದೆ ಸಾಂಸ್ಕೃತಿಕವಾಗಿಯೂ ಈ ಭಾಗಕ್ಕೆ ಹೊಸ ಹೊಸ ಕಾರ್ಯಕ್ರಮಗಳ ಪರಿಚಯ ಮಾಡಿಕೊಡಲಾಗುತ್ತಿದೆ. ವರ್ಷದಿಂದ ವರ್ಷಕ್ಕೆ ಹೊಸ ಹೊಸ ಅತಿಥಿಗಳು, ತೆರೆಮರೆಯ ಸಾಧಕರು, ವಿಭಿನ್ನ ಕಾರ್ಯಕ್ರಮಗಳನ್ನು ಜೋಡಣೆ ಮಾಡಿಕೊಳ್ಳಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ವೇ.ಮೂ. ನೆಂಪು ಶ್ರೀಧರ ಭಟ್ ತೋನ್ಸೆ ಅವರಿಗೆ ವೈದಿಕ ರತ್ನ ಪ್ರಶಸ್ತಿ, ಗೀತ ಎಚ್.ಎಸ್ ಫೌಂಡೇಶನ್ ಕೋಟೇಶ್ವರ ಇದರ ಅಧ್ಯಕ್ಷ ಶಂಕರ ಐತಾಳ್ ಅಮಾಸೆಬೈಲು, ಇವರಿಗೆ ಅಮೂಲ್ಯ ರತ್ನ ಪ್ರಶಸ್ತಿ, ಕುಂದಾಪುರದ ಅಂಬುಲೆನ್ಸ್ ಸೇವೆಯಲ್ಲಿ ಹೆಸರಾಗಿರುವ ವಿ.ವಾಸುದೇವ ಹಂದೆ ಅವರಿಗೆ ಸೇವಾ ರತ್ನ ಪ್ರಶಸ್ತಿ, ಯಕ್ಷಗಾನ ಪ್ರಸಂಗಕರ್ತ ರಘುರಾಮ ಶೆಟ್ಟಿ ಕಂದಾವರ ಅವರಿಗೆ ಕಲಾರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಚಂದ್ರಶೇಖರ ಶೆಟ್ಟಿ, ಮಾರಣಕಟ್ಟೆ ದೇವಸ್ಥಾನ ಮಾಜಿ ಮೊಕ್ತೇಸರರಾದ ನೈಲಾಡಿ ಶಿವರಾಮ ಶೆಟ್ಟಿ, ಶ್ರೀ ಬ್ರಹ್ಮಲಿಂಗೇಶ್ವರ ಹಾಗೂ ಶ್ರೀ ಮಹಾಲಿಂಗೇಶ್ವರ ಕಲ್ಯಾಣ ಮಂಟಪದ ಮುಖ್ಯಸ್ಥರಾದ ರಾಮಚಂದ್ರ ಮಂಜರು, ಕಲಾವಿದ ಶಿವಾನಂದ ಹೆಗಡೆ ಕೆರೆಮನೆ, ಗುಣವಂತೆ, ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಬಿ.ಅಪ್ಪಣ್ಣ ಹೆಗ್ಡೆ, ಪತ್ರಕರ್ತ ವಸಂತ ಗಿಳಿಯಾರು, ಕೊಲ್ಲೂರು ಮೂಕಾಂಬಿಕಾ ದೇವಳದ ಅರ್ಚಕರಾದ ನರಸಿಂಹ ಭಟ್, ಟ್ರಸ್ಟ್‌ನ ಕಾರ್ಯಧ್ಯಕ್ಷ ನಾಗರಾಜ ಮಂಜ ಆಗಮಿಸಿದ್ದರು.

ದಿ|ಸುಬ್ರಹ್ಮಣ್ಯ ಮಂಜರವರ ನೆನಪಿನಲ್ಲಿ ನೆರವು ಕಾರ್ಯಕ್ರಮದಡಿಯಲ್ಲಿ ಆರೋಗ್ಯ ನೆರವು, ಗೃಹ ನಿರ್ಮಾಣಕ್ಕೆ ನೆರವು ಹಸ್ತಾಂತರಿಸಲಾಯಿತು. ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಚಿತ್ತೂರು ಪ್ರೌಢಶಾಲೆಯ ಕ್ರೀಡಾಪಟುಗಳನ್ನು ಅಭಿನಂದಿಸಲಾಯಿತು.

ಟ್ರಸ್ಟ್ ಗೌರವಾಧ್ಯಕ್ಷ ಎಂ. ಶ್ರೀಧರ ಮಂಜ ಸ್ವಾಗತಿಸಿದರು. ಕೊಲ್ಲೂರು ದೇವಳದ ಮಾಜಿ ಧರ್ಮದರ್ಶಿ ವಂಡಬಳ್ಳಿ ಜಯರಾಮ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉದಯಕುಮಾರ್ ಶೆಟ್ಟಿ ವಂಡ್ಸೆ, ಶಿಕ್ಷಕ ವೆಂಕಟೇಶ ಮಂಜ, ಮುಖ್ಯೋಪಾಧ್ಯಾಯರಾದ ಜಗದೀಶ ಶೆಟ್ಟಿ, ಆಲೂರು ಶಾಲೆ ಮುಖ್ಯೋಪಾಧ್ಯಾಯರಾದ ಶಶಿಧರ ಶೆಟ್ಟಿ ವಂಡ್ಸೆ ಸನ್ಮಾನ ಪತ್ರ ವಾಚಿಸಿದರು. ವಿಘ್ನೇಶ್ವರ ಮಂಜ ಫಲಾನುಭವಿಗಳ ಪಟ್ಟಿ ವಾಚಿಸಿದರು. ಪತ್ರಕರ್ತ ಪ್ರಭಾಕರ ಆಚಾರ್ಯ ವಂದಿಸಿದರು. ದೈ.ಶಿ.ಶಿಕ್ಷಕ ಸತೀಶ್ಚಂದ್ರ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮವಾಗಿ ಸ.ಹಿ.ಪ್ರಾ.ಶಾಲೆ ಚಿತ್ತೂರು ವಿದ್ಯಾರ್ಥಿಗಳಿಂದ ಜನಪದ ನೃತ್ಯ, ಕುಂದಾಪ್ರ ಕನ್ನಡದ ರಾಯಭಾರಿ ಮನು ಹಂದಾಡಿ ಇವರಿಂದ ಕುಂದಾಪ್ರ ಕನ್ನಡ ಹಾಸ್ಯ ನಗೆ ಹಬ್ಬ, ಸ.ಪ್ರೌ.ಹಕ್ಲಾಡಿ ಪಂಚವಟಿ ರಂಗಶಾಲೆ ವಿದ್ಯಾರ್ಥಿಗಳಿಂದ ನಾಟಕ ಪಂಚವಟಿಯ ಮಾಯಾ ಮುಖಗಳು ಪ್ರದರ್ಶನಗೊಂಡಿತು.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!