spot_img
Sunday, April 26, 2026
spot_img

ಮೂಡ್ಲಕಟ್ಟೆ ಐ‌ಎಂಜೆ: ಯುವ ರೆಡ್‌ಕ್ರಾಸ್ ಘಟಕ ಉದ್ಘಾಟನೆ

ಕುಂದಾಪುರ: ಐ‌ಎಂಜೆ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ & ಕಾಮರ್ಸ್ ಮೂಡ್ಲಕಟ್ಟೆ ಕಾಲೇಜಿನಲ್ಲಿ ಯುವ ರೆಡ್‌ಕ್ರಾಸ್ ಘಟಕದ ಉದ್ಘಾಟನೆಯನ್ನು ಭಾರತೀಯ ರೆಡ್ ಕ್ರಾಸ್ ಘಟಕ ಕುಂದಾಪುರ ಇದರ ಅಧ್ಯಕ್ಷರಾದ ಜಯಕರ್ ಶೆಟ್ಟಿಯವರು ನೆರವೇರಿಸಿ, ಪ್ರತಿಯೊಂದು ಕಾಲೇಜುಗಳಲ್ಲಿ ಯುವ ರೆಡ್ ಕ್ರಾಸ್ ಘಟಕಗಳು ಪ್ರಾರಂಭಗೊಳ್ಳಬೇಕು. ಮಾನವೀಯತೆಯ ನೆಲೆಯಲ್ಲಿ ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡುವಂತಹದ್ದು, “ಯಾವುದೇ ಜಾತಿ, ಮತ, ಧರ್ಮ ಭೇದವಿಲ್ಲದೆ ಯಾರು ಕಷ್ಟದಲ್ಲಿ ಇರುತ್ತಾರೆಯೋ ಅಂತವರಿಗೆ ಸಹಾಯ ಮಾಡುವುದು ರೆಡ್ ಕ್ರಾಸ್ ಸಂಸ್ಥೆಯ ಮುಖ್ಯ ಉದ್ದೇಶ” ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಯುವ ರೆಡ್ ಕ್ರಾಸ್ ಕುಂದಾಪುರ ಇದರ ಸಂಯೋಜಕರಾದ ಸತ್ಯನಾರಾಯಣ್ ಪುರಾಣಿಕ್ ಇವರು ಪ್ರತಿಜ್ಞಾವಿಧಿಯನ್ನು ವಿದ್ಯಾರ್ಥಿಗಳ ಸಮ್ಮುಖದಲ್ಲಿ ನೆರವೇರಿಸಿದರು. ಹಾಗೆಯೇ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಇದರ ತರಬೇತುದಾರರಾದ ಡಾ| ಸೋನಿ ಡಿ’ಕೋಸ್ಟಾ ಅವರು ಪ್ರಥಮ ಚಿಕಿತ್ಸೆಯ ತರಬೇತಿ ಹಾಗೂ ಪ್ರಾತ್ಯಕ್ಷಿತೆಯನ್ನು ನಡೆಸಿಕೊಟ್ಟರು.

ಪ್ರಾಂಶುಪಾಲೆ ಡಾ| ಪ್ರತಿಭಾ ಎಂ ಪಟೇಲ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ರೆಡ್ ಕ್ರಾಸ್ ಘಟಕ ಕುಂದಾಪುರ ಇದರ ಖಜಾಂಚಿ ಶಿವರಾಮ್ ಶೆಟ್ಟಿ, ಬೋಧಕ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾಲೇಜು ಯುವ ರೆಡ್ ಕ್ರಾಸ್ ಘಟಕದ ಸಂಯೋಜಕಿ ಪ್ರೊ| ಶಬೀನಾ ಹೆಚ್. ರವರು ಸ್ವಾಗತಿಸಿದರು. ಬಿಸಿ‌ಎ ವಿದ್ಯಾರ್ಥಿನಿ ಕು| ನೇತ್ರಾವತಿ ಕಾರ್ಯಕ್ರಮ ನಿರ್ವಹಿಸಿದರು. ಪ್ರತಿಭಾ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!