spot_img
Sunday, April 26, 2026
spot_img

ಎಕ್ಸಲೆಂಟ್ ಪಿಯು ಕಾಲೇಜು ಕುಂದಾಪುರ: ಪಿ.ಯು ಫಲಿತಾಂಶದಲ್ಲಿ 5 ರಾಜ್ಯ ಮಟ್ಟದ ರ್‍ಯಾಂಕ್


ಕುಂದಾಪುರ: ಪದವಿ ಪೂರ್ವ ಶಿಕ್ಷಣ ಇಲಾಖೆಯ ದ್ವೀತಿಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಕುಂದಾಪುರ ಎಕ್ಸಲೆಂಟ್ ಪಿ.ಯು ಕಾಲೇಜಿನ 5 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ರ್‍ಯಾಂಕ್ ಪಡೆದಿದೆ. ಇದು ಸಂಸ್ಥೆ ನೀಡುತ್ತಿರುವ ಗುಣಮಟ್ಟದ ಶಿಕ್ಷಣಕ್ಕೆ ಸಾಕ್ಷಿಯಾಗಿದೆ ಎಂದು ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅದ್ಯಕ್ಷರಾದ ಡಾ.ರಮೇಶ ಶೆಟ್ಟಿ ಹೇಳಿದರು.

ಅವರು ಸುಣ್ಣಾರಿಯ ಎಕ್ಸ್‌ಲೆಂಟ್ ಪಿಯು ಕಾಲೇಜಿನಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದರು.

ನಮ್ಮ ಸಂಸ್ಥೆಯ ವಿದ್ಯಾರ್ಥಿನಿ ವಾಸವಿ ಬೋಳಾರ್ ವಿಜ್ಞಾನ ವಿಭಾಗದ ಪಿ.ಸಿ.ಎಮ್.ಸಿ ವಿಭಾಗದಲ್ಲಿ ಅಭ್ಯಾಸಿಸುತ್ತಿರುವ 592 ಅಂಕ ಪಡೆದು ರಾಜ್ಯಕ್ಕೆ 5ನೇ ಸ್ಥಾನ ಪಡೆದಿದ್ದಾರೆ. ಉಡುಪಿ ಜಿಲ್ಲೆಗೆ 3ನೇ ಸ್ಥಾನ ಪಡೆದಿದ್ದಾರೆ.

ಇನ್ನೋರ್ವ ವಿದ್ಯಾರ್ಥಿ ಅಮೋಘ ಶೆಟ್ಟಿ ವಾಣಿಜ್ಯ ವಿಭಾಗದಲ್ಲಿ 591 ಅಂಕ ಪಡೆದು ರಾಜ್ಯಕ್ಕೆ 7ನೇ ಸ್ಥಾನ ಹಾಗೂ ಉಡುಪಿ ಜಿಲ್ಲೆಗೆ 4ನೇ ಸ್ಥಾನಿಯಾಗಿ ಹೊರಹೊಮ್ಮುವುದರ ಜೊತೆಗೆ ಮೂರು ವಿಷಯಗಳಲ್ಲಿ 100 ಕ್ಕೆ 100ಅಂಕಗಳನ್ನು ಗಳಿಸಿದ್ದಾನೆ.

ಸಂಸ್ಥೆಯ ವಿದ್ಯಾರ್ಥಿಗಳಾದ ಸ್ನೇಹ 590 ಅಂಕಗಳನ್ನು ಪಡೆಯುವುದರ ಮೂಲಕ ರಾಜ್ಯಕ್ಕೆ8 ನೇ ಸ್ಥಾನ ಗಳಿಸಿ ಉಡುಪಿ ಜಿಲ್ಲೆಗೆ 5ನೇ ಸ್ಥಾನಿಯಾಗಿ ಹೊರ ಹೊಮ್ಮಿದರೆ, ಪ್ರಣಿತಾ ಅಡಿಗ 588 ಅಂಕಗಳನ್ನು ಪಡೆಯುವುದರ ಮೂಲಕ 9ನೇ ಸ್ಥಾನ ಹಾಗೂ ಶ್ರೀನಿಧಿ ಶೆಟ್ಟಿ 587 ಅಂಕಗಳನ್ನು ಪಡೆಯುವುದರ ಮೂಲಕ ರಾಜ್ಯಕ್ಕೆ 10ನೇ ಸ್ಥಾನಿಯಾಗಿ ಹೊರ ಹೊಮ್ಮಿದ್ದಾಳೆ ಎಂದರು.

ಈ ಸಾಧನೆ ಮಾಡಿದ ಎಲ್ಲಾ ವಿದ್ಯಾರ್ಥಿಗಳಿಗೂ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರಿಗೂ ಎಂ.ಎಂ ಹೆಗ್ಡೆ ಎಜುಕೇಶನಲ್ ಎಂಡ್ ಚಾರಿಟೆಬಲ್ ಟ್ರಸ್ಟ್‌ನ ಅಧ್ಯಕ್ಷರಾದ ಎಂ ಮಹೇಶ್ ಹೆಗ್ಡೆಯವರು ಅಭಿನಂದನೆ ತಿಳಿಸಿದ್ದಾರೆ ಎಂದರು.

ಸಂಸ್ಥೆಯ ಕಾರ್ಯದರ್ಶಿ ಪ್ರತಾಪಚಂದ್ರ ಶೆಟ್ಟಿ ಮಾತನಾಡಿ, ಸಂಸ್ಥೆಯ ಒಟ್ಟು 225 ವಿದ್ಯಾರ್ಥಿಗಳಲ್ಲಿ 143 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದುವುದರ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಸಂಸ್ಥೆಯ 69 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದುವುದರ ಮೂಲಕ ಉತ್ತಮ ಸಾಧನೆಯನ್ನು ತೋರ್ಪಡಿಸಿದ್ದಾರೆ. ಸಂಸ್ಥೆಯ 44 ವಿದ್ಯಾರ್ಥಿಗಳು ಶೇಕಡಾ 95ಕ್ಕಿಂತ ಅಧಿಕ ಅಂಕ ಗಳಿಸುವುದರ ಮೂಲಕ ಸಂಸ್ಥೆ ಮತ್ತು ತಮ್ಮ ಪೋಷಕರು ಹೆಮ್ಮೆ ಪಡುವಂತ ಫಲಿತಾಂಶವನ್ನು ನೀಡಿದ್ದಾರೆ ಎಂದರು.

ಸಂಸ್ಥೆಯ ಖಜಾಂಚಿ ಭರತ್ ಶೆಟ್ಟಿ ಮಾತನಾಡಿ, ಸಂಸ್ಥೆಯ ವಿದ್ಯಾರ್ಥಿಗಳಿಗೆ ನಿರಂತರವಾಗಿ ಎರಡು ವರ್ಷಗಳ ಕಾಲ ರಾಜ್ಯದ ನಾನಾ ವಿಭಾಗಗಳ ಅನುಭವಿ ಶಿಕ್ಷಕರ ನೆರವಿನಿಂದ ಗುಣಮಟ್ಟದ ಶಿಕ್ಷಣವನ್ನು ಎಕ್ಸಲೆಂಟ್ ಪಿ.ಯು ಕಾಲೇಜು ತನ್ನ ವಿದ್ಯಾರ್ಥಿಗಳಿಗೆ ನೀಡಿದ್ದು, ಇದು ಇಂದು ವಿದ್ಯಾರ್ಥಿಗಳು ರಾಜ್ಯ ಮಟ್ಟದಲ್ಲಿ ರ್‍ಯಾಂಕ್‌ಗಳನ್ನು ಪಡೆಯಲು ಸಹಕಾರಿಯಾಗಿದೆ ಎಂದರು.

ಕ್ರೀಡೆ, ಸಾಂಸ್ಕೃತಿಕವಾಗಿಯೂ ಸಂಸ್ಥೆ ಪ್ರೋತ್ಸಾಹ ನೀಡುತ್ತಿದೆ. ಎಸ್.ಎಸ್.ಎಲ್.ಸಿಯಲ್ಲಿ 620ಕ್ಕಿಂತ ಹೆಚ್ಚು ಅಂಕ ಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸರ್ಕಾರಿ ಶುಲ್ಕವನ್ನಷ್ಟೇ ಪಡೆದು ಪ್ರವೇಶಾತಿ ನೀಡಲಾಗುತ್ತದೆ ಎಂದರು.

ಸುದ್ಧಿಗೋಷ್ಠಿಯಲ್ಲಿ ಸಾಧಕ ವಿದ್ಯಾರ್ಥಿಗಳಾದ ವಾಸವಿ ಬೋಳಾರ್, ಅಮೋಘ ಶೆಟ್ಟಿ, ಸ್ನೇಹ, ಪ್ರಣಿತಾ ಅಡಿಗ, ಶ್ರೀನಿಧಿ ಶೆಟ್ಟಿ ಹಾಗೂ ಅವರ ಪೋಷಕರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!