spot_img
Sunday, April 26, 2026
spot_img

ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿ: ದ್ವಿತೀಯ ಪಿಯುಸಿಯಲ್ಲಿ ಶೇ.100 ಫಲಿತಾಂಶ

ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿ 2022-23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ ದಾಖಲಿಸಿದ್ದಾರೆ.

ಕಾಲೇಜಿನ ವಿಜ್ಞಾನ ವಿಭಾಗದ 116 ವಿದ್ಯಾರ್ಥಿಗಳಲ್ಲಿ 55 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 56 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, ಹಾಗೂ 5 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ವಾಣಿಜ್ಯ ವಿಭಾಗದ 15 ವಿದ್ಯಾರ್ಥಿಗಳಲ್ಲಿ 4 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 11 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.

ವಿಜ್ಞಾನ ವಿಭಾಗದ ಐಶ್ವರ್ಯ ಖಾರ್ವಿ 591 ಅಂಕಗಳನ್ನು ಪಡೆದು ರಾಜ್ಯ ಮಟ್ಟದಲ್ಲಿ 6ನೇ ರ್‍ಯಾಂಕ್ ಪಡೆದಿದ್ದಾರೆ.

ಕಾಲೇಜು ಪ್ರಾರಂಭದ ಪ್ರಥಮ ವರ್ಷದಲ್ಲಿಯೇ ವಿವಿಧ ಕಾಲೇಜುಗಳಲ್ಲಿ ಪ್ರಥಮ ಪಿ.ಯು.ಸಿ ಪೂರ್ಣಗೊಳಿಸಿ, ದ್ವಿತೀಯ ಪಿ.ಯು.ಸಿ.ಗೆ ನೇರವಾಗಿ ಕಾಲೇಜಿನಲ್ಲಿ ದಾಖಲಾತಿ ಪಡೆದ ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!