spot_img
Sunday, April 26, 2026
spot_img

ಬಿಜೆಪಿ ಮುಖಂಡರುಗಳಾದ ಬಾಬು ಹೆಗ್ಡೆ, ಶಂಕರ ಪೂಜಾರಿ, ಸದಾಶಿವ ಪಡುವರಿ, ವೆಂಕಟ ಪೂಜಾರಿ, ಮೌಲನಾ ದಸ್ತಗೀರ್ ಸಾಹೇಬ್ ಸಹಿತ ಅನೇಕರು ಕಾಂಗ್ರೆಸ್ ಸೇರ್ಪಡೆ


ಬಿಜೆಪಿಯ ಕುಯುಕ್ತಿ ಬಯಲಿಗೆಳೆಯುತ್ತೇನೆ-ಬಾಬು ಹೆಗ್ಡೆ

ಬೈಂದೂರು: ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ತಗ್ಗರ್ಸೆ ಬಾಬು ಹೆಗ್ಡೆ, ಶಂಕರ ಪೂಜಾರಿ ತಗ್ಗರ್ಸೆ, ತಾ.ಪಂ. ಮಾಜಿ ಸದಸ್ಯ ಸದಾಶಿವ ಪಡುವರಿ, ಮೌಲನಾ ದಸ್ತಗೀರ್ ಸಾಹೇಬ್, ಎಪಿ‌ಎಂಸಿ ಮಾಜಿ ಅಧ್ಯಕ್ಷ ವೆಂಕಟ ಪೂಜಾರಿ ಸಹಿತ ಅನೇಕ ಬಿಜೆಪಿ ಮುಖಂಡರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.

ರವಿವಾರ ಬೈಂದೂರಿನ ಜೆ‌ಎನ್‌ಆರ್ ಕಲ್ಯಾಣ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆಶಿವಕುಮಾರ್ ಕಾಂಗ್ರೆಸ್ ಪಕ್ಷದ ಧ್ವಜವನ್ನು ನೀಡುವ ಮೂಲಕ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು

ಬಾಬು ಹೆಗ್ಡೆ ಅವರು ಮಾತನಾಡಿ, ನಾನು 32 ವರ್ಷಗಳಿಂದ ಬಿಜೆಪಿಯಲ್ಲಿ ಸಕ್ರಿಯ ಸದಸ್ಯನಾಗಿ, ಪಕ್ಷದ ಬಲವರ್ಧನೆಗೆ ಶ್ರಮಿಸಿದ್ದೇನೆ. ಎಲ್ಲಾ ಚುನಾವಣೆಗಳಲ್ಲಿ ಪಕ್ಷದ ಗೆಲುವಿಗೆ ದುಡಿದಿದ್ದೇನೆ. ಬ್ಯಾಂಕ್ ಕೆಲಸಕ್ಕೆ ರಾಜೀನಾಮೆ ನೀಡಿ ಪಕ್ಷದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದೇನೆ. ಕಳೆದ ಮೂರು ಅವಧಿಗಳಲ್ಲಿಯೂ ಶಾಸಕ ಸ್ಥಾನದ ಅಭ್ಯರ್ಥಿತನ ನೀಡುವುದಾಗಿ ವಂಚಿಸುತ್ತಾ ಬಂದಿದ್ದಾರೆ. ನನ್ನ ಮೇಲೆ ಯಾವುದೇ ಕ್ರಿಮಿನಲ್ ಅಪಾಧನೆಗಳಿಲ್ಲ, ಪದವಿ ಶಿಕ್ಷಣ ಪಡೆದಿದ್ದೇನೆ. ತಳಮಟ್ಟದಿಂದ ಪಕ್ಷದಲ್ಲಿ ಗುರುತಿಸಿಕೊಂಡಿದ್ದೇನೆ. ಹಾಗಿದ್ದು ನನಗೆ ಯಾವ ಮಾನದಂಡ ಕೊರತೆ ಎಂದು ಟಿಕೆಟು ನಿರಾಕರಿಸಿದ್ದಾರೆ ಗೊತ್ತಿಲ್ಲ. ಬಿಜೆಪಿ ನಂಬಿಸಿ ಮೋಸ ಮಾಡಿದ್ದಾರೆ. ಬಿಜೆಪಿಯ ಎಲ್ಲ ಕುಯುಕ್ತಿಯನ್ನು ಬಯಲಿಗೆಳೆಯುತ್ತೇನೆ ಎಂದ ಅವರು, ನನ್ನ ಹಿರಿತನ, ಆರ್ಹತೆ ಕಾಂಗ್ರೆಸ್ ಪಕ್ಷದಲ್ಲಿ ಸೂಕ್ತ ಗೌರವ ನೀಡುವುದಾಗಿ ಹೇಳಿದ್ದಾರೆ. ಈ ಬಾರಿ ಸರ್ಕಾರ ರಚಿಸಲು ಬೈಂದೂರಿನಿಂದ ಒಂದು ಸ್ಥಾನ ಕಾಂಗ್ರೆಸ್ ಖಂಡಿತಾ ಗೆಲ್ಲಲಿದೆ ಎಂದು ಡಿಕೆ ಶಿವಕುಮಾರ್ ಅವರಿಗೆ ಬಾಬು ಹೆಗ್ಡೆ ಮಾತು ನೀಡಿದರು.

ಜಿ.ಪಂ.ಮಾಜಿ ಸದಸ್ಯ ಶಂಕರ ಪೂಜಾರಿ, ವೆಂಕಟ ಪೂಜಾರಿ, ಸದಾಶಿವ ಪಡುವರಿ ತಮ್ಮ ಅನಿಸಿಕೆ ಬಿಜೆಪಿ ನಡೆಸಿಕೊಂಡ ರೀತಿಯನ್ನು ವಿವರಿಸಿದರು. ಈ ಸಂದರ್ಭದಲ್ಲಿ ಬೈಂದೂರು ಬ್ಲಾಕ್ ಹಾಗೂ ವಂಡ್ಸೆ ಬ್ಲಾಕ್ ಹಲವಾರು ಮಂದಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!