spot_img
Sunday, April 26, 2026
spot_img

ಹಾಲಾಡಿ-ಕಿರಣ್ ಕೊಡ್ಗಿ ಜೋಡಿಯಿಂದ ದಾಖಲೆಯ ಗೆಲುವು ನಿಶ್ಚಯ-ವಿಜೇಂದ್ರ ಗುಪ್ತ

ಕುಂದಾಪುರ: ಕೇಂದ್ರದ ನರೇಂದ್ರ ಮೋದಿ ಸರಕಾರ ಹಾಗೂ ರಾಜ್ಯದ ಬಸವರಾಜ ಬೊಮ್ಮಾಯಿ ಸರಕಾರದ ಅಭಿವೃದ್ದಿ ಕಾರ್ಯಗಳು, ರಾಷ್ಟ್ರೀಯತೆಗೆ ಸರ್ಕಾರ ನೀಡಿದ ಒತ್ತು, ಡಬ್ಬಲ್ ಇಂಜಿನ್ ಸರಕಾರದ ಸಾಧನೆಯನ್ನು ಜನತೆ ಗಮನಿಸಿದ್ದಾರೆ. ಈ ಚುನಾವಣೆಯಲ್ಲಿ ಸ್ಥಳೀಯ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ಪ್ರಭಾವ, ಕ್ಷೇತ್ರದಲ್ಲಿನ ಸಾಧನೆಗಳು, ಹಾಲಾಡಿ ಶ್ರೀನಿವಾಸ ಶೆಟ್ಟಿ ಮತ್ತು ಕಿರಣ್ ಕೊಡ್ಗಿಯವರ ಅಭಿವೃದ್ದಿಪರ ನಿಲುವು ಈ ಚುನಾವಣೆಯಲ್ಲಿ ದಾಖಲೆಯ ಅಂತರದಲ್ಲಿ ಜಯ ಲಭಿಸಲಿದೆ ಎಂದು ದೆಹಲಿ ಸರ್ಕಾರದ ವಿರೋಧ ಪಕ್ಷದ ನಾಯಕ, ಉಡುಪಿ ಜಿಲ್ಲಾ ಬಿಜೆಪಿ ಉಸ್ತುವಾರಿ ವಿಜೇಂದ್ರ ಗುಪ್ತ ಹೇಳಿದರು.

ಅವರು ಕುಂದಾಪುರದ ಭಾರತೀಯ ಜನತಾ ಪಕ್ಷದ ಕಛೇರಿಯಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದರು.

ಶಾಂತಿ ಸುವ್ಯವಸ್ಥತೆಗೆ ಸರ್ಕಾರಗಳು ಆಧ್ಯತೆ ನೀಡಿದೆ. ಇವತ್ತು ಬಾಂಬ್ ಸ್ಪೋಟದ ಪ್ರಕರಣಗಳು ಇಲ್ಲ, ವಿದ್ವಾಂಸಕಾರಿ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಯಂತ್ರಿಸಲಾಗಿದೆ. ಭದ್ರತೆಗೆ ಧಕ್ಕೆ ತರುವ, ಗಲಾಭೆಗಳ ಸೃಷ್ಟಿಗೆ ಉತ್ತೇಜನ ನೀಡುವ ಸಂಘಟನೆಗಳನ್ನು ನಿಷೇಧಿಸಲಾಗಿದೆ. ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಕೇಂದ್ರ ಸರ್ಕಾರದ ದಿಟ್ಟ ನಿಲುವಿನಿಂದ ದೇಶ, ಕರ್ನಾಟಕದಲ್ಲಿ ಜನ ನಿರ್ಭೀತಿಯಿಂದ ಇರುವಂತಾಗಿದೆ ಎಂದರು.

ಕರ್ನಾಟಕದಲ್ಲಿ ಪೂರ್ಣ ಬಹುಮತದ ಸರಕಾರ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್, ಜೆಡಿ‌ಎಸ್ ಪಕ್ಷಗಳ ಯಾವ ತಂತ್ರಗಾರಿಕೆಯೂ ಈ ಚುನಾವಣೆಯಲ್ಲಿ ಫಲ ಕೊಡುವುದಿಲ್ಲ. ಮತ್ತೊಮ್ಮೆ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಮೂಲಕ ಡಬ್ಬಲ್ ಇಂಜಿನ್ ಸರ್ಕಾರ ಮುಂದುವರಿಯಲಿದೆ ಎಂದರು.

40% ಕಮಿಷನ್ ಆರೋಪದ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಇದು ದಾಖಲೆ ರಹಿತ ಆರೋಪ. ಕಾಂಗ್ರೆಸ್ ಬಳಿ ಈ ಬಗ್ಗೆ ಸ್ಪಷ್ಟವಾದ ದಾಖಲೆ ಇದ್ದರೆ ಕಾನೂನು ಹೋರಾಟ ಮಾಡಲಿ, ಸುಮ್ಮನೆ ಆರೋಪ ಮಾಡುವುದರಲ್ಲಿ ಹುರುಳಿಲ್ಲ, ಅದು ಗಾಳಿಯಲ್ಲಿ ಗುಂಡು ಹಾರಿಸಿದಂತೆ ಎಂದು ಪ್ರತಿಕ್ರಿಯಿಸಿದರು.

ಈ ಸಂದರ್ಭದಲ್ಲಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ, ಕ್ಷೇತ್ರದ ಪ್ರಭಾರಿ ಶ್ಯಾಮಲ ಕುಂದರ್, ಕುಂದಾಪುರ ಮಂಡಲದ ಅಧ್ಯಕ್ಷ ಶಂಕರ ಅಂಕದಕಟ್ಟೆ, ಪ್ರಧಾನ ಕಾರ್ಯದರ್ಶಿಗಳಾದ ಸುರೇಶ ಶೆಟ್ಟಿ ಬೀಜಾಡಿ, ಸತೀಶ ಪೂಜಾರಿ ವಕ್ವಾಡಿ, ಮಾಜಿ ಅಧ್ಯಕ್ಷ ಸುರೇಶ ಶೆಟ್ಟಿ ಕಾಡೂರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!