Sunday, September 8, 2024

ಗಂಗೊಳ್ಳಿ ವೆಂಕಿಮನೆ ಚಿಕ್ಕಯ್ಯ ಪೂಜಾರಿ ನಿಧನ


ಗಂಗೊಳ್ಳಿ : ಧಾರ್ಮಿಕ ಹಾಗೂ ಸಾಮಾಜಿಕ ಮುಖಂಡ ಗಂಗೊಳ್ಳಿ ವೆಂಕಿಮನೆ ನಿವಾಸಿ ಚಿಕ್ಕಯ್ಯ ಪೂಜಾರಿ (90) ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ನಿಧನರಾದರು.

ರಾಷ್ಟ್ರೀಯ ಸ್ವಯಂಸೇವಕ ಸಂಘ ಮತ್ತು ಅಂದಿನ ಜನಸಂಘದ ಸಕ್ರಿಯ ಸದಸ್ಯರಾಗಿದ್ದ ಇವರು ಗಂಗೊಳ್ಳಿಯ ಸೇವಾ ಸಂಘ ಶ್ರೀ ಶಾರದೋತ್ಸವ ಸಮಿತಿ ಸ್ಥಾಪಕ ಸದಸ್ಯರಾಗಿದ್ದರು. ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕಿನ ನಿರ್ದೇಶಕರಾಗಿ, ಗಂಗೊಳ್ಳಿ ಬಿಲ್ಲವ ಸಮಾಜ ಸೇವಾ ಸಂಘದ ಸ್ಥಾಪಕ ಅಧ್ಯಕ್ಷರಾಗಿ, ಶ್ರೀ ರಾಘವೇಂದ್ರ ಆರಾಧನಾ ಮಹೋತ್ಸವ ಸಮಿತಿ ಅಧ್ಯಕ್ಷರಾಗಿ, ಸೀತಾಳಿ ಅಮ್ಮನವರ ದೇವಸ್ಥಾನದ ಮೊಕ್ತೇಸರರಾಗಿ, ಸ್ವಾಮಿ ಮನೆ ದೇವಸ್ಥಾನದ ಅರ್ಚಕರಾಗಿ ಮೊಕ್ತೇಸರರಾಗಿ ಸೇವೆ ಸಲ್ಲಿಸಿ ಜನಾನುರಾಗಿದ್ದರು. ಗಂಗೊಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಗಳಲ್ಲಿ ಮುಂದಾಳತ್ವ ವಹಿಸಿಕೊಂಡು ಸಮಾಜದ ಅಭಿವೃದ್ಧಿಗೆ ಶ್ರಮಿಸಿ ಜನಾನುರಾಗಿದ್ದರು.

ಮೃತರು ಪತ್ನಿ, ಮೂವರು ಪುತ್ರರು ಹಾಗೂ ಪುತ್ರಿಯನ್ನು ಅಗಲಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!