spot_img
Wednesday, January 22, 2025
spot_img

ಬೈಂದೂರಿನಲ್ಲಿ 50 ಸಾವಿರಕ್ಕೂ ಅಧಿಕ ಮತಗಳ ಅಂತರ ತಂದುಕೊಟ್ಟರೆ ವಿಜಯೋತ್ಸವದಲ್ಲಿ ಪಾಲ್ಗೊಳ್ಳುವೆ-ಅಮಿತ್ ಷಾ


ಸಿದ್ಧಾಪುರ: ರಾಜ್ಯದಲ್ಲಿ ವಿಕಾಸ ಮತ್ತು ಅಭಿವೃದ್ದಿಗಾಗಿ ಡಬ್ಬಲ್ ಇಂಜಿನ್ ಸರ್ಕಾರದ ಅವಶ್ಯಕತೆ ಇದೆ. ಕಾಂಗ್ರೆಸ್ ಸರ್ಕಾರದ ಸಂವಿಧಾನವು ಮೀಸಲಾತಿ ನಿಯಮವನ್ನು ಮೀರಿ ಶೇ.೪ ಮುಸ್ಲಿಂ ಮೀಸಲಾತಿಯನ್ನು ನೀಡಿತ್ತು. ನಮ್ಮ ಸರ್ಕಾರದ ಅದನ್ನು ರದ್ದು ಪಡಿಸಿದೆ. ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀಸಲಾತಿಯನ್ನು ಪುನರಾರಂಭಿಸಲಿದೆ. ೨೦೨೪ರಲ್ಲಿ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬೇಕು ಎಂದು ಬಯಸಿದರೆ ಕರ್ನಾಟಕದಲ್ಲಿ ಬಿಜೆಪಿ ಸರಕಾರ ಬರಬೇಕು. ಈ ಚುನಾವಣೆಯಲ್ಲಿ ಬೈಂದೂರಿನಲ್ಲಿ ನಮ್ಮ ಅಭ್ಯರ್ಥಿಯನ್ನು 50ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲಿಸಿದರೆ ಮುಂದಿನ ವಿಜಯೋತ್ಸವದಲ್ಲಿ ಪಾಲ್ಗೊಳ್ಳುತ್ತೇನೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಹೇಳಿದರು.

ಅವರು ಬೈಂದೂರು ವಿಧಾನಸಭಾ ಕ್ಷೇತ್ರದ ಸಿದ್ಧಾಪುರದಲ್ಲಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಪರವಾಗಿ ರೋಡ್ ಶೋ ನಡೆಸಿ, ಮಾತನಾಡಿದರು.

ಬಿಜೆಪಿ ಸರ್ಕಾರ ರಾಷ್ಟ್ರ ವಿರೋಧಿಗಳ ಚಟುವಟಿಕೆಗಳ ಮೇಲೆ ಕಣ್ಗಾವಲು ಇಡಲು ಬೆಂಗಳೂರಿನಲ್ಲಿ ಎನ್.ಐ.ಎ ಘಟಕ ಸ್ಥಾಪನೆ ಮಾಡಲಾಗಿದೆ. ರಾಷ್ಟ್ರದಲ್ಲಿ ಸುರಕ್ಷತೆಗೆ ನಮ್ಮ ಸರ್ಕಾರ ಒತ್ತು ನೀಡುತ್ತಿದೆ. ಪಿ‌ಎಫ್‌ಐಯಂತಹ ಸಂಘಟನೆಗಳನ್ನು ನಿಷೇಧ ಮಾಡುವ ದಿಟ್ಟ ನಿರ್ಧಾರ ಕೈಗೊಂಡಿರುವುದು, ವಿದ್ವಾಂಸಕ ಚಟುವಟಿಕೆಗಳ ನಿರ್ಮೂಲನೆಗೆ ಕಠಿಣ ಕ್ರಮಗಳನ್ನು ಕೈಗೊಳ್ಳುವ ಮೂಲಕ ದೇಶದಲ್ಲಿ ಸುರಕ್ಷತೆಯ ವಾತಾವರಣ ನಿರ್ಮಾಣವಾಗಿದೆ. ಕರಾವಳಿ ಕರ್ನಾಟಕರ ರಕ್ಷಣೆ ಮಾಡಲು ಬಿಜೆಪಿಯನ್ನು ಆರಿಸಬೇಕಾಗಿದೆ ಎಂದರು.

ಕರಾವಳಿ ಭಾಗದಲ್ಲಿ ರೈತರ ಹಿತಾಸಕ್ತಿಯ ಕಾಪಾಡುವ ನಿಟ್ಟಿನಲ್ಲಿ ಬೆಲೆ ಇಳಿಕೆಯಾದ ಸಂದರ್ಭದಲ್ಲಿ ಅಡಿಕೆ ಬೆಳೆಗಾರರ ನೆರವಿಗೆ ಬಂದಿತ್ತು. ಮೀನುಗಾರರಿಗೆ ಹೊಸ ಬಂದರುಗಳ ನಿರ್ಮಾಣ ಮಾಡಿದೆ, ಎಲ್ಲ ಸ್ತರಗಳ ಜನರಿಗೆ ಸಾಮಾಜಿಕ ನ್ಯಾಯ ನೀಡುವಲ್ಲಿ ಸರ್ಕಾರ ಬದ್ದವಾಗಿದೆ ಎಂದರು.

ಈ ಸಂದರ್ಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಬೈಂದೂರು ಕ್ಷೇತ್ರದ ಅಭ್ಯರ್ಥಿ ಗುರುರಾಜ ಗಂಟಿಹೊಳೆ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸುರೇಶ ನಾಯಕ ಕುಯಿಲಾಡಿ, ಕ್ಷೇತ್ರದ ಉಸ್ತುವಾರಿ ಬ್ರಿಜೇಶ್ ಚೌಟ, ಬೈಂದೂರು ಮಂಡಲದ ಅಧ್ಯಕ್ಷ ದೀಪಕ ಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ಮೊದಲಾದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!