spot_img
Sunday, April 26, 2026
spot_img

ನನಗೆ ಎಲ್ಲವೂ ಬೇಕು, ಬೇರೆಯವರಿಗೆ ಸಿಕ್ಕಾಗ ವಿರೋಧ ಮಾಡುವ ಪ್ರವೃತ್ತಿ ಖಂಡನಾರ್ಹ, ನಮ್ಮ ಅಭ್ಯರ್ಥಿಯನ್ನು ಸೋಲಿಸಲು ಸಾಧ್ಯವಿಲ್ಲ.-ಬಿ.ಎಸ್.ಯಡಿಯೂರಪ್ಪ


ಬಿಜೆಪಿ ರಾಜ್ಯದಲ್ಲಿ 130ರಿಂದ 135 ಸ್ಥಾನ ಗೆಲ್ಲುವುದರೊಂದಿಗೆ ಸರ್ಕಾರ ರಚಿಸಲಿದೆಬಿ.ಎಸ್.ವೈ ವಿಶ್ವಾಸ

ವಂಡ್ಸೆ: ರಾಜ್ಯದಲ್ಲಿ ನೂರಕ್ಕೆ ನೂರು ಬಿಜೆಪಿ ಅಧಿಕಾರಕ್ಕೆ ಬರಲಿದೆ. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ರಾಜ್ಯದ ಉದ್ದಗಲಕ್ಕೂ ಸಂಚಾರ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿಯನ್ನು ಗೆಲ್ಲಿಸಲೇ ಬೇಕು ಎನ್ನುವ ಸಂಕಲ್ಪ ಮಾಡಿದ್ದೇವೆ. ಇದಕ್ಕೆ ಬೈಂದೂರಿನಿಂದಲೇ ಆರಂಭವಾಗಬೇಕು. ಯಾರೋ ಒಬ್ಬಿಬ್ಬರು ನಮ್ಮ ಅಭ್ಯರ್ಥಿ ಬಗ್ಗೆ ಹಗುರವಾಗಿ ಮಾತನಾಡಿರುವುದನ್ನು ನಾನು ಕೇಳಿದ್ದೇನೆ. ಯಾರೂ ಇದಕ್ಕೆ ಕಿವಿಗೊಡುವ ಅಗತ್ಯವಿಲ್ಲ, ನಿಮ್ಮ ಯಡಿಯೂರಪ್ಪ ನಾನಿದ್ದೇನೆ, ಸಂಸದ ರಾಘವೇಂದ್ರ ಇದ್ದಾರೆ. ನಾವೆಲ್ಲ ಇರುವಾಗ ನಮ್ಮ ಅಭ್ಯರ್ಥಿಯನ್ನು ಸೋಲಿಸಲು ಸಾಧ್ಯವಿಲ್ಲ. ನನಗೆ ಎಲ್ಲವೂ ಬೇಕು, ಬೇರೆಯವರಿಗೆ ಸಿಕ್ಕಾಗ ವಿರೋಧ ಮಾಡುವ ಪ್ರವೃತ್ತಿಯನ್ನು ನಾವೆಲ್ಲಾ ಖಂಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದರು.

ಭಾರತೀಯ ಜನತಾ ಪಕ್ಷ ಬೈಂದೂರು ಮಂಡಲದ ವತಿಯಿಂದ ವಂಡ್ಸೆಯಲ್ಲಿ ಶನಿವಾರ ನಡೆದ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದವರು,

ಬೈಂದೂರು ವಿಧಾನಸಭಾ ಕ್ಷೇತ್ರ ಸೇರಿದಂತೆ ರಾಜ್ಯದಲ್ಲಿ ೧೩೦ರಿಂದ ೧೩೫ ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚನೆ ಮಾಡಲಿದೆ. ಹಾಗೆಯೇ ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆಯವರು ೨೫ ರಿಂದ ೩೦ ಸಾವಿರ ಮತಗಳ ಅಂತರದಲ್ಲಿ ಜಯ ಸಾಧಿಸಲಿದ್ದಾರೆ ಎಂದರು.

ನಮ್ಮ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಬೈಂದೂರು ಕ್ಷೇತ್ರದಲ್ಲಿ ಕಾಲೇಜುಗಳು, ಗೋಶಾಲೆಗಳ ಸ್ಥಾಪನೆ ಮಾಡಲಿದ್ದೇವೆ. ಈಗಾಗಲೇ ಉತ್ತಮವಾದ ಪ್ರನಾಳಿಕೆಯನ್ನು ನೀಡಿದ್ದೇವೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ವಾರದ ಒಳಗೆ ಪ್ರನಾಳಿಕೆ ಈಡೇರಿಸಲಿದ್ದೇವೆ ಎಂದರು.

ಅಭ್ಯರ್ಥಿ ಗುರುರಾಜ ಗಂಟಿಹೊಳೆ ಮಾತನಾಡಿ, ರಾಜಕೀಯದಲ್ಲಿ ಪೆಟ್ಟು, ಪಟ್ಟು ನಾಯಕರು ನೀಡಬಹುದು. ಪ್ರಾಮಾಣಿಕ ಕಾರ್ಯಕರ್ತರು ಇರುವ ತನಕ ಯಾವ ಪೆಟ್ಟು-ಪಟ್ಟು ತಾಗುವುದಿಲ್ಲ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಆಶೀರ್ವಾದ ಸಿಕ್ಕಿದೆ. ಯಡಿಯೂರಪ್ಪನವರು, ನರೇಂದ್ರ ಮೋದಿಯವರು ಈ ನಾಡಿಗೆ ಕೊಟ್ಟಷ್ಟು ಕೊಡುಗೆ ಯಾರು ನೀಡಿಲ್ಲ. ನನ್ನ ಜೀವನ ಪರ್ಯಂತ ಪಕ್ಷ ಹಾಗೂ ಕ್ಷೇತ್ರಕ್ಕಾಗಿ ದುಡಿಯುತ್ತೇನೆ ಎಂದರು.

ಮಾಜಿ ಶಾಸಕರಾದ ಬಿ.ಅಪ್ಪಣ್ಣ ಹೆಗ್ಡೆ, ಲಕ್ಷ್ಮೀನಾರಾಯಣ, ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯದರ್ಶಿ ಗೋವಿಂದ ಬಾಬು ಪೂಜಾರಿಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಪಕ್ಷದ ಪ್ರಮುಖರಾದ ಪ್ರಣಯ ಕುಮಾರ್ ಶೆಟ್ಟಿ, ಶ್ಯಾಮಲ ಕುಂದರ್, ಶೋಭಾ ಪುತ್ರನ್, ಹರ್ಕೂರು ಮಂಜಯ್ಯ ಶೆಟ್ಟಿ, ಸುರೇಶ ಬಟ್ವಾಡಿ, ರೋಹಿತ್ ಕುಮಾರ್ ಶೆಟ್ಟಿ, ಮಹೇಂದ್ರ ಪೂಜಾರಿ, ನಾಗರಾಜ ಶೆಟ್ಟಿ, ಮಾಲತಿನ ನಾಯಕ್, ಭಾಗೀರಥಿ, ಚುನಾವಣಾ ಉಸ್ತುವಾರಿ ಕ್ಯಾ|ಬ್ರಿಜೇಶ್ ಚೌಟ,ಹೊರ ರಾಜ್ಯದ ಉಸ್ತುವಾರಿ ಉನ್ನಿಕೃಷ್ಣ, ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ ಮೊದಲಾದವರು ಉಪಸ್ಥಿತರಿದ್ದರು.

ಮಂಡಲದ ಅಧ್ಯಕ್ಷ ದೀಪಕ ಕುಮಾರ್ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಜಿಲ್ಲಾ ಉಪಾಧ್ಯಕ್ಷ ಆನಂದ ಖಾರ್ವಿ ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!