spot_img
Monday, April 27, 2026
spot_img

ಬೈಂದೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಅವರನ್ನು ಬೆಂಬಲಿಸುವಂತೆ ಕಳಿ ಚಂದ್ರಯ್ಯ ಆಚಾರ್ಯ ಮನವಿ

ಬೈಂದೂರು: ಬಿಜೆಪಿ ಸರಕಾರ ವಿಶ್ವಕರ್ಮ ಸಮುದಾಯದ ಅಭಿವೃದ್ಧಿಗೆ ಹೆಚ್ಚಿನ ಅನುದಾನಗಳನ್ನು ಒದಗಿಸಿರುವ ಹಿನ್ನೆಲೆಯಲ್ಲಿ ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆಯವರನ್ನು ಬೆಂಬಲಿಸುವಂತೆ ವಿಶ್ವಕರ್ಮ ಸಮುದಾಯ ಅಭಿವೃದ್ಧಿ ನಿಗಮದ ನಿರ್ದೇಶಕ ಕಳಿ ಚಂದ್ರಯ್ಯ ಆಚಾರ್ಯ ಅವರು ಮನವಿ ಮಾಡಿದ್ದಾರೆ.

ಬೈಂದೂರು ಬಿಜೆಪಿ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರಕಾರ ವಿಶ್ವಕರ್ಮ ಸಮುದಾಯದ ಮಠ ಮಂದಿರಗಳಿಗೆ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡಿರುವುದು ಮಾತ್ರವಲ್ಲದೆ ಸಮುದಾಯದ ದೇವಸ್ಥಾನಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೂ ಸಹಕರಿಸಿದೆ. ಈ ನಿಟ್ಟಿನಲ್ಲಿ ಸಮುದಾಯ ಹಾಗೂ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಅವರನ್ನು ಬೆಂಬಲಿಸುವುದು ಸೂಕ್ತ ಎಂದು ಅವರು ತಿಳಿಸಿದರು.

ಉಪ್ರಳ್ಳಿ ಶ್ರೀ ಕಾಳಿಕಾಂಬ ದೇವಸ್ಥಾನದ ಮುಂಭಾಗದ ರಸ್ತೆ ಕಾಂಕ್ರೀಟೀಕರಣ, ಕಾಂಕ್ರೆಟ್ ಸೈಡ್ ವಾಲ್, ಶೀಟ್ ಮಾಡು, ಕಚೇರಿ ಹಾಗೂ ಗುರುಗಳ ವಾಸ್ತವ್ಯ ಕಟ್ಟಡ ಹಾಗೂ ಸಭಾಂಗಣಕ್ಕೆ ೨ ಕೋಟಿ ರೂ.ಗಳಿಗೂ ಹೆಚ್ಚಿನ ಅನುದಾನವನ್ನು ಬಿಜೆಪಿ ಸರಕಾರ ಒದಗಿಸಿದೆ. ಇದರ ಜೊತೆಗೆ ಸಭಾಂಗಣದ ಮುಂದುವರಿದ ಕಾಮಗಾರಿಗೆ ಒಂದುವರೆ ಕೋಟಿ ರೂಗಳ ಬೇಡಿಕೆಯನ್ನು ಸರಕಾರದ ಮುಂದೆ ಇಟ್ಟಿದ್ದು, ಸಂಸದರಾದ ಬಿ. ವೈ. ರಾಘವೇಂದ್ರ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

ಸಮುದಾಯದ ಅಭಿವೃದ್ಧಿಗೆ ಬಿಜೆಪಿ ಸರಕಾರವು ಸಾಕಷ್ಟು ಅನುದಾನದ ಜೊತೆಗೆ ಸಕಾರಾತ್ಮಕ ಸ್ಪಂದನೆಯನ್ನು ನೀಡಿರುವುದರಿಂದ ಪ್ರಸಕ್ತ ಚುನಾವಣೆಯಲ್ಲಿ ವಿಶ್ವಕರ್ಮ ಸಮುದಾಯದವರು ಇವುಗಳನ್ನು ಪರಿಶೀಲಿಸಿ ಬಿಜೆಪಿ ಅಭ್ಯರ್ಥಿಗೆ ಬೆಂಬಲ ಸೂಚಿಸುವಂತೆ ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಮರವಂತೆ ಗ್ರಾ. ಪಂ ಸದಸ್ಯ ಕರುಣಾಕರ ಆಚಾರ್ಯ ಮರವಂತೆ, ಬೈಂದೂರು ಬಿಜೆಪಿ ಮಂಡಲ ಕಾರ್ಯದರ್ಶಿ ಪ್ರಿಯದರ್ಶಿನಿ ಕಮಲೇಶ್ ಬೆಸ್ಕೂರು, ಬೈಂದೂರು ಬಿಜೆಪಿ ಚುನಾವಣಾ ಮಾಧ್ಯಮ ಉಸ್ತುವಾರಿ ಗಣೇಶ್ ಗಾಣಿಗ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!