spot_img
Sunday, April 26, 2026
spot_img

ಉಡುಪಿ ಜಿಲ್ಲೆಯ ಐದು ಕ್ಷೇತ್ರಗಳಲ್ಲಿಯೂ ಕೂಡಾ ಕಾಂಗ್ರೆಸ್ ಗೆಲುವು-ಮಂಜುನಾಥ ಭಂಡಾರಿ

ಕುಂದಾಪುರ: ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್‌ಗೆ ಪೂರಕವಾದ ವಾತಾವರಣವಿದ್ದು, ಜಿಲ್ಲೆಯಾದ್ಯಂತ ಕಾಂಗ್ರೆಸ್ ಅಲೆಯೇ ಇದೆ. ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ಈ ಚುನಾವಣೆಗೆ ಹೆಚ್ಚು ಪೂರಕವಾಗಿದ್ದು ಎಲ್ಲ ವರ್ಗದ ಮತದಾರರನ್ನು ಸಳೆಯಲಿದೆ. ಉಡುಪಿ ಜಿಲ್ಲೆಯ ಐದು ಕ್ಷೇತ್ರಗಳಲ್ಲಿಯೂ ಕೂಡಾ ಕಾಂಗ್ರೆಸ್ ಜಯ ಗಳಿಸಲಿದೆ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಹೇಳಿದರು.

ಅವರು ಕುಂದಾಪುರ ಕಾಂಗ್ರೆಸ್ ಕಛೇರಿಯಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಪ್ರಚಾರ ಮಾಡುತ್ತಿರುವ ಬಿಜೆಪಿ ರಾಷ್ಟ್ರ ಅದ್ಯಕ್ಷರು ರಾಜ್ಯದಲ್ಲಿ ಬಿಜೆಪಿ ಗೆಲ್ಲದಿದ್ದರೆ ರಾಜ್ಯಕ್ಕೆ ಅನುಧಾನ ಕಟ್ ಮಾಡಲಾಗುವುದು ಎಂದಿದ್ದಾರೆ. ಇದು ಸಂವಿದಾನ ವಿರೋಧಿ ಹೇಳಿಕೆಯಾಗಿದೆ. ಒಕ್ಕೂಟದ ಈ ವ್ಯವಸ್ಥೆಯಲ್ಲಿ ಈ ರೀತಿಯಾದ ಹೇಳಿಕೆ ಸರಿಯಲ್ಲ. ಅವರು ಕೂಡಲೇ ರಾಜಿನಾಮೆ ಕೊಡಬೇಕೆಂದು ಆಗ್ರಹಿಸಿದ್ದಾರೆ. ರಾಜ್ಯದಿಂದ ಕೇಂದ್ರಕ್ಕೆ ಆರು ಲಕ್ಷ ಕೊಟಿ ರೂಪಾಯಿಗಳು ವಿವಿಧ ರೂಪದಲ್ಲಿ ತೆರಿಗೆ ಹಣ ರಾಜ್ಯದಿಂದ ಕೇಂದ್ರಕ್ಕೆ ಹೊಗುತ್ತದೆ ಎನ್ನುವುದನ್ನು ಅವರು ಗಮನಿಸಬೇಕು ಎಂದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರದ ವೈಪಲ್ಯತೆಗಳು, ಬೆಲೆ ಏರಿಕೆ ಇತ್ಯಾದಿಗಳಿಂದ ಜನ ಬೇಸತ್ತು ಕಾಂಗ್ರೆಸನ್ನು ಬೆಂಬಲಿಸಲಿದ್ದಾರೆ. ವಿಶೇಷವಾಗಿ ಯುವಜನತೆ ಈ ಬಾರಿ ಕಾಂಗ್ರೆಸ್ ಪರವಾಗಿದೆ. ರಾಜ್ಯದಲ್ಲಿ ೧೫೦ ಸೀಟುಗಳನ್ನು ಕಾಂಗ್ರಸ್ ಪಡೆದುಕೊಳ್ಳಲಿದೆ ಎಂದರು.

ಸುದ್ಧಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕುಮಾರ್ ಕೊಡವೂರು, ಕಾರ್ಯಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಅಭ್ಯರ್ಥಿ ಮೊಳಹಳ್ಳಿ ದಿನೇಶ ಹೆಗ್ಡೆ, ಕೆಪಿಸಿಸಿ ನವೀನಚಂದ್ರ ಶೆಟ್ಟಿ, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಜಿಲ್ಲಾ ವಕ್ತಾರ ವಿಕಾಸ್ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಬೆಳ್ವೆ ಸತೀಶ್ ಕಿಣಿ, ಅಶೋಕ್ ಪೂಜಾರಿ ಬೀಜಾಡಿ, ದಿನೇಶ ಪುತ್ರನ್, ವಿನೋದ್ ಕ್ರಾಸ್ಟೋ ಮೊದಲಾದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!