spot_img
Monday, April 27, 2026
spot_img

ವಿಧಾನ ಸಭಾ ಚುನಾವಣೆ: ಕುಂದಾಪುರದಲ್ಲಿ ಮಸ್ಟರಿಂಗ್ ಪ್ರಕ್ರಿಯೆ

ಕುಂದಾಪುರ:ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಅಂಗವಾಗಿ ಕುಂದಾಪುರ ವಿಧಾನ ಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಸ್ಟರಿಂಗ್ ಪ್ರಕ್ರಿಯೆ ಕುಂದಾಪುರದ ಭಂಡಾರ್‌ಕಾರ್‍ಸ್ ಕಾಲೇಜಿನಲ್ಲಿ ಚುನಾವಣಾಧಿಕಾರಿ, ರಶ್ಮಿ ಅವರ ನೇತೃತ್ವದಲ್ಲಿ ನಡೆಯಿತು.

ಚುನಾವಣೆಯ ಕರ್ತವ್ಯದಲ್ಲಿ ಭಾಗವಹಿಸುವ ಅಧಿಕಾರಿಗಳು ಮತಯಂತ್ರ, ಮತದಾನ ಪ್ರಕ್ರಿಯೆಗೆ ಬೇಕಾಗುವ ಎಲ್ಲ ಪರಿಕರಗಳೊಂದಿಗೆ ಮತಗಟ್ಟೆಗಳಿಗೆ ತೆರಳಿದರು. ಚುನಾವಣಾ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳಿಗೆ ಮತದಾನ ಕೇಂದ್ರಕ್ಕೆ ತೆರಳಲು ಹಾಗೂ ಮರಳಿ ಬರಲು ಬಸ್ಸು 32, ಮಿನಿಬಸ್ಸು 8, ಟೆಂಪೋ ಟ್ರಾವೆಲ್ಲರ್, ಮ್ಯಾಕ್ಸಿಕ್ಯಾಬ್ ವ್ಯಾನ್ 12, ಜೀಪ್ 11 ವ್ಯವಸ್ಥೆ ಮಾಡಲಾಗಿತ್ತು.

ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 209592 ಮತದಾರರಿದ್ದಾರೆ. ಒಟ್ಟು 222 ಮತಗಟ್ಟೆಗಳಿವೆ. ಇದರಲ್ಲಿ 38 ನಗರ ಪ್ರದೇಶ, 184 ಗ್ರಾಮೀಣ ಪ್ರದೇಶದ ಮತಗಟ್ಟೆಗಳಾಗಿವೆ.

ಮೇ 10 ಭಂಡಾಕಾರ್‍ಸ್ ಕಾಲೇಜಿನಲ್ಲಿ ಡಿ-ಮಸ್ಟರಿಂಗ್ ನಡೆಯಲಿದೆ. ಮತ ಎಣಿಕೆ ಮೇ 13ರಂದು ಉಡುಪಿಯ ಸೈಂಟ್ ಸಿಸಿಲಿಯಸ್ ಶಿಕ್ಷಣ ಸಂಸ್ಥೆಯಲ್ಲಿ ನಡೆಯಲಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!