Sunday, September 8, 2024

ವಿಧಾನಸಭೆ ಪ್ರವೇಶ ಮಾಡಿದ ಬರಿಗಾಲ ಸಂತ ಗುರುರಾಜ ಶೆಟ್ಟಿ ಗಂಟಿಹೊಳೆ


ಉಡುಪಿ: ಬೈಂದೂರು ವಿಧಾನಸಭಾ ಕ್ಷೇತ್ರದ ಬಿ.ಜೆ.ಪಿ ಅಭ್ಯರ್ಥಿ ಗುರುರಾಜ ಶೆಟ್ಟಿ ಗಂಟಿಹೊಳೆ ಅವರು 98,628 ಮತಗಳನ್ನು ಪಡೆದು, ತಮ್ಮ ಸಮೀಪದ ಪ್ರತಿ ಸ್ಪರ್ಧಿಗಿಂತ 16,153 ಮತಗಳ ಅಂತರದಿಂದ ಜಯ ಗಳಿಸಿದ್ದಾರೆ.

ಗುರುರಾಜ ಶೆಟ್ಟಿಯವರು ಮತ ಎಣಿಕೆಯಲ್ಲಿ ಅಂತರ ಕಾಯ್ದುಕೊಳ್ಳುತ್ತಿದ್ದಂತೆ ಬೈಂದೂರು ಭಾಗದ ಬಿಜೆಪಿ, ಪರಿವಾರದ ಯುವಕರ ದಂಡೆ ಮತ ಎಣಿಕೆ ಕೇಂದ್ರದತ್ತ ಧಾವಿಸಿತು. ಗೆಲುವಿನ ಘೋಷಣೆಯಾಗುತ್ತಿದ್ದಂತೆ ಜಯಘೋಷ ಮುಗಿಲು ಮುಟ್ಟಿತ್ತು. ಸಾಕಷ್ಟು ಸಂಖ್ಯೆಯಲ್ಲಿ ಆಗಮಿಸಿದ ಅಭಿಮಾನಿಗಳು ಮತ ಎಣಿಕೆ ಕೇಂದ್ರದಿಂದ ಎತ್ತಿಕೊಂಡು ಸಂಭ್ರಮ ಆಚರಣೆ ಮಾಡಿದರು.

ನೆರೆದ ಅಭಿಮಾನಿಗಳ ಉದ್ದೇಶಿಸಿ ಮಾತನಾಡಿದ ಗುರುರಾಜ ಶೆಟ್ಟಿ ಗಂಟಿಹೊಳೆ ಅವರು, ನನ್ನ ಗೆಲುವು ಕಾರ್ಯಕರ್ತ ಗೆಲುವು. ಕಾರ್ಯಕರ್ತರ ಪರಿಶ್ರಮದಿಂದ ಗೆಲುವು ಸಾಧ್ಯವಾಗಿದೆ. ಪಕ್ಷ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟು ನೀಡಿದೆ. ಕಾರ್ಯಕರ್ತರು ಸವಾಲಾಗಿ ಸ್ವೀಕರಿಸಿ ಗೆಲ್ಲಿಸಿದ್ದಾರೆ. ಮುಂದೆ ಇನ್ನೊರ್ವ ಕಾರ್ಯಕರ್ತನಿಗೆ ಅವಕಾಶ ಸಿಗಲಿ, ಹೀಗೆ ನಿರಂತರವಾಗಲಿ ಎಂದರು.

ಶಾಸಕರಾಗಿ ವಿಧಾನಸಭೆಗೆ ಪ್ರವೇಶ ಮಾಡುತ್ತಿರುವ ಗುರುರಾಜ್ ಶೆಟ್ಟಿ ಗಂಟಿಹೊಳೆ ಬೈಂದೂರು ತಾಲುಕಿನ ಬಿಜೂರು ಸಮೀಪದ ಗಂಟಿಹೊಳೆಯವರು. ಪತ್ರಿಕೋದ್ಯಮದಲ್ಲಿ ಎಂ.ಎ ಪೂರೈಸಿದ ನಂತರ ೧೦ ವರ್ಷಗಳ ಕಾಲ ಆರ್‌ಎಸ್‌ಎಸ್‌ನ ಪೂರ್ಣಾವಧಿ ಕಾರ್ಯಕರ್ತರಾಗಿ ಓಡಾಡಿದರು. ಬರಿಗಾಲ ಸಂತ ಎಂದೇ ಖ್ಯಾತರಾದ ಇವರು ಪರವಾರದಲ್ಲಿ ಪೂರ್ಣಾವಧಿ ಕಾರ್ಯಕರ್ತನಾಗಿ ಮಡಿಕೇರಿ, ಬೆಳ್ತಂಗಡಿಯಲ್ಲಿ ಸೇವೆ ಸಲ್ಲಿಸಿದವರು. ಸಂಘಟನೆಯಲ್ಲಿ ತಾಲೂಕು, ಜಿಲ್ಲಾ ಜವಾಬ್ದಾರಿಗಳು ನಿಭಾಯಿಸಿದ್ದಾರೆ. ನಾಗಪುರದಲ್ಲಿ ಒಟಿಸಿ ಕ್ಯಾಂಪ್ ಮುಗಿಸಿ ಶಿಕ್ಷಣ ಪೂರೈಸಿ ಬಂದ ಗುರುರಾಜ್‌ಗೆ 3 ವರ್ಷ ಉಡುಪಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದರು. ನಂತರ 3 ವರ್ಷ ಬಿಜೆಪಿ ಉಪಾಧ್ಯಕ್ಷ ಹುದ್ದೆ ನಿರ್ವಹಿಸಿದರು. ಅಖಿಲ ಭಾರತ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯನಾಗಿ ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರ, ತೆಲಂಗಾಣ, ರಾಜ್ಯಗಳ ಜವಾಬ್ದಾರಿ ವಹಿಸಿಕೊಂಡಿದ್ದರು. ಎರಡು ಪುಸ್ತಕ ಬರೆದಿದ್ದಾರೆ. ನೂರಾರು ಆರ್‌ಎಸ್‌ಎಸ್ ಶಾಖೆ ತೆರೆದು ಸಂಘಟನೆ ಮಾಡಿದ್ದಾರೆ.

ಇದೀಗ ಬರಿಗಾಲ ಸಂತ ವಿಧಾನಸೌಧ ಪ್ರವೇಶ ಪಡೆದಿದ್ದಾರೆ. ತನ್ನ ಗೆಲುವನ್ನು ಕಾರ್ಯಕರ್ತರಿಗೆ ಅರ್ಪಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!