spot_img
Monday, April 27, 2026
spot_img

ನಾರಾಯಣ ನೇತ್ರಾಲಯದ ಸಂಸ್ಥಾಪಕ ಡಾ.ಕೆ. ಭುಜಂಗ ಶೆಟ್ಟಿ ಚಾರ್ಮಕ್ಕಿ ನಿಧನ


ನಾರಾಯಣ ನೇತ್ರಾಲಯದ ಅಧ್ಯಕ್ಷ ಡಾ.ಕೆ. ಭುಜಂಗ ಶೆಟ್ಟಿ ಚಾರ್ಮಕ್ಕಿ (69ವ) ಅವರು ಮೇ.19 ಸಂಜೆ ಹೃದಯಾಘಾತದಿಂದ ನಿಧನರಾದರು. ಅವರಿಗೆ ಸಂಜೆ ಮನೆಯಲ್ಲಿ ತೀವ್ರ ಹೃದಯಾಘಾತವಾಗಿದೆ ಎನ್ನಲಾಗಿದ್ದು ತಕ್ಷಣ ಯಶವಂತಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ.

1978ರಲ್ಲಿ ಎಂಬಿಬಿ‌ಎಸ್ ಮಾಡಿದ ಅವರು 1982 ರಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜಿನ ಮಿಂಟೋ ಆಪ್ತಾಲ್ಮಿಕ್ ಆಸ್ಪತ್ರೆಯಲ್ಲಿ ನೇತ್ರಶಾಸ್ತ್ರದ ರೆಸಿಡೆನ್ಸಿ ಮಾಡಿದ್ದರು. 1980ರ ಸುಮಾರಿನಲ್ಲಿ ಸಣ್ಣ ಕ್ಲಿನಿಕ್ ಪ್ರಾರಂಭಿಸಿದರು. ಬಳಿಕ ಅವರು ನಾರಾಯಣ ನೇತ್ರಾಲಯವನ್ನು ಕರ್ನಾಟಕದ ಅತಿದೊಡ್ಡ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯಾಗಿ ಪರಿವರ್ತಿಸಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!