spot_img
Monday, April 27, 2026
spot_img

ಸರಸ್ವತಿ ವಿದ್ಯಾಲಯದಲ್ಲಿ ಪ್ರಥಮ ಪಿಯುಸಿ ಆರಂಭೋತ್ಸವ


    ಗಂಗೊಳ್ಳಿ: ವಿದ್ಯಾರ್ಥಿಗಳು ಪಠ್ಯದ ಕಲಿಕೆಯ ಜೊತೆ ಜೊತೆಗೆ ತಮ್ಮ ಸರ್ವಾಂಗೀಣ ವ್ಯಕ್ತಿತ್ವದ ಅಭಿವೃದ್ಧಿಯ ಕಡೆಗೂ ಗಮನ ಹರಿಸಬೇಕು. ಉತ್ತಮ ವ್ಯಕ್ತಿತ್ವದಿಂದ ಯಶಸ್ಸು ಕಾಣಲು ಸಾಧ್ಯ  ಎಂದು ಗಂಗೊಳ್ಳಿಯ ಜಿ.ಎಸ್.ವಿ.ಎಸ್ ಅಸೋಷಿಯೆಷನ್ ಅಧ್ಯಕ್ಷ ಡಾ. ಕಾಶಿನಾಥ್ ಪೈ  ಅಭಿಪ್ರಾಯಪಟ್ಟರು. 

  ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರಥಮ ಪಿಯುಸಿ ತರಗತಿಗಳ ಆರಂಭೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.      ಕಾಲೇಜಿನ ಸಂಸ್ಕøತ ಉಪನ್ಯಾಸಕ ವೆಂಕಟೇಶ ಮೂರ್ತಿ ಎನ್. ಸಿ  ಪಠ್ಯಇತರ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. 

ದೈಹಿಕ ಶಿಕ್ಷಣ ಉಪನ್ಯಾಸಕರಾದ ನಾಗರಾಜ ಶೆಟ್ಟಿ  ಕಾಲೇಜಿನ ಶಿಸ್ತು ನೀತಿ ನಿಯಮಗಳ ಕುರಿತು ಮಾತನಾಡಿದರು.  ಕಾಲೇಜು ಕಛೇರಿಯ ದ್ವಿತೀಯ ದರ್ಜೆ ಸಹಾಯಕಿ ಪ್ರಮೋದ ಪೈ. ಎಮ್. ಜಿ. ಕಛೇರಿ ಸೌಲಭ್ಯಗಳು ಮತ್ತು ವಿದ್ಯಾರ್ಥಿ ವೇತನದ ಮಾಹಿತಿ ನೀಡಿದರು. 

     ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಮ್ ಸಿ ಅಧ್ಯಕ್ಷತೆ ವಹಿಸಿದ್ದರು.

  ವಾಣಿಜ್ಯಶಾಸ್ತ್ರ ಉಪನ್ಯಾಸಕ ರಾಘವೇಂದ್ರ ಭಟ್ ಸಿಬ್ಬಂದಿ ವರ್ಗದವರನ್ನು ಪರಿಚಯಿಸಿದರು    ವಿದ್ಯಾರ್ಥಿ ಪ್ರತಿನಿಧಿಗಳಾಗಿ ಸನ್ನಿಧಿ ಮತ್ತು ಫರಾನ್ ಉಪಸ್ಥಿತರಿದ್ದರು. ಹಿಂದಿ ಉಪನ್ಯಾಸಕ ನಾರಾಯಣ ಈ ನಾಯ್ಕ್ ಪ್ರಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. . ಇತಿಹಾಸ ಉಪನ್ಯಾಸಕ ಭಾಸ್ಕರ್ ಶೆಟ್ಟಿ  ಕಾರ್ಯಕ್ರಮ ನಿರ್ವಹಿಸಿದರು. ಆಂಗ್ಲ ಭಾಷೆ ಉಪನ್ಯಾಸಕಿ ಸುಪ್ರೀತ   ಆಚಾರ್ಯ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!